BigTv News
October 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ತನ್ನ ಓಲೈಕೆ ರಾಜಕಾರಣಕ್ಕೆ ಶಿಕ್ಷಣ ಕ್ಷೇತ್ರವನ್ನು ಬಳಕೆ ಮಾಡಿಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡನೀಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕವನ್ನು ಹಾಳುಗೆಡುವ ಕೆಲಸ ಮಾಡಿದೆ. ಕೂಡಲೇ ಈ ನಿರ್ಧಾರದಿಂದ ಸರ್ಕಾರ ಹಿಂದೆ ಬರಬೇಕೆಂದು ವಿಧಾನಸಭಾ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಡಪಂಥೀಯ ಬುದ್ದಿಜೀವಿಗಳ …
Read More »
BigTv News
October 10, 2023
ಕರ್ನಾಟಕ, ಗದಗ, ಸುದ್ದಿ
ಗದಗ: ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹೆದ್ದಾರಿ ಬಂದ್ ಮಾಡಿದ ರೈತರು, ಬೇಕೆ ಬೇಕು ಕರೆಂಟ್ ಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕಾಏಕಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದರಿಂದ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು ಇದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ …
Read More »
BigTv News
October 10, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ಧಾರವಾಡದ ಬೆಳಗಾವಿ ರಸ್ತೆಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಪಂಪ್ಸೆಟ್ ಗೆ ಸರಿಯಾದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಮೊದಲು 7ತಾಸು ವಿದ್ಯುತ್ ಇರುತ್ತಿತ್ತು ಇದೀಗ 4ತಾಸಿಗೆ ವಿದ್ಯುತ್ ಕಡಿತ ಹಿನ್ನೆಲೆ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಹಿನ್ನೆಲೆ ವಿದ್ಯುತ್ ಕೇಂದ್ರಕ್ಕೆ ಪೊಲೀಸರ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ನಂತರ …
Read More »
BigTv News
October 10, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಇಸ್ರೇಲ್ ಹಾಗೂ ಫ್ಯಾಲೆಸ್ತೇನ್ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ದೇಶದಲ್ಲಿ ಧಾರವಾಡದ ಸಹಾಯಕ ಪ್ರಾಧ್ಯಾಪಕರೊಬ್ಬರು ಸಿಲುಕಿಕೊಂಡಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸುಮೇಶ್ ಎನ್ನುವವರು ಇಸ್ರೇಲ್ ದೇಶದ ಜೇರುಸೇಲಂ ನಗರದ ಹೆಬ್ರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಹವಾಮಾನ ಶಾಸ್ತ್ರ ಕುರಿತ ತರಬೇತಿಗೆ ತೆರಳಿದ್ದರು. ಆಗಸ್ಟ್ 7 ರಿಂದ ತರಬೇತಿ ಸಹ ಆರಂಭಗೊಂಡಿತ್ತು. ಈ ತರಬೇತಿ ಅಕ್ಟೋಬರ್ 22ರ ವರೆಗೆ ನಡೆಯಬೇಕಿತ್ತು. ಆದರೆ, ಅಲ್ಲಿ ಯುದ್ಧ ಆರಂಭವಾಗಿದ್ದರಿಂದ …
Read More »
BigTv News
October 10, 2023
ಕರ್ನಾಟಕ, ಕೋಲಾರ, ಸುದ್ದಿ
ಕೋಲಾರದ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಕೋಲಾರ-ಆಂಧ್ರ ಪ್ರದೇಶ ನಡುವಿನ 6 ಪಥದ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಎನ್ಹೆಚ್ಎಐನ ಯೋಜನಾ ನಿರ್ದೇಶಕ ಜಯಕುಮಾರ್ ಮತ್ತು ಇತರ ಅಧಿಕಾರಿಗಳು ಯೋಜನೆ ಬಗ್ಗೆ ಸಂಸದರಿಗೆ ವಿವರಣೆ ನೀಡಿದರು.ಆರು ಪಥದ ರಸ್ತೆ ನಿರ್ಮಾಣ ಸ್ಥಳವನ್ನು ವೀಕ್ಷಣೆ ಮಾಡಿದ ಸಂಸದರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು.ಆರು ಪಥದ ರಸ್ತೆ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
Read More »
BigTv News
October 10, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ದೂರದ ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವುದರಿಂದ ಅಲ್ಲಿ ನೆಲೆಸಿರುವ ಜಿಲ್ಲೆಯ ಹತ್ತಾರು ಮಂದಿ ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ. ಇಸ್ರೇಲ್ನ ವಿವಿಧೆಡೆ ನೆಲೆಸಿರುವ ಹಾಸನ ಜಿಲ್ಲೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಚನ್ನರಾಯಪಟ್ಟಣ ತಾಲೂಕಿನ ಡಿಂಕ, ಸಕಲೇಶಪುರ ತಾಲೂಕಿನ ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರು ಎಂದು ತಿಳಿದು ಬಂದಿದೆ. ಸಕಲೇಶಪುರ ತಾಲೂಕು ಅಂಕಿಹಳ್ಳಿ ಗ್ರಾಮದ ಆಂತೋಣಿ, ಸಕಲೇಶಪುರ ಪಟ್ಟಣದ ನವೀನ್, ಬೇಲೂರು ತಾಲೂಕು ಲಕ್ಕುಂದ ಗ್ರಾಮದ ರೀಮಾ ಪಿಂಟೋ, …
Read More »
BigTv News
October 10, 2023
ಕರ್ನಾಟಕ, ಬಳ್ಳಾರಿ, ಸುದ್ದಿ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ 2017ರಲ್ಲಿಯೇ ಹೇಳಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಮಾತನಾಡಿದ್ದಾರೆ. “ಜಿಲ್ಲೆಯಲ್ಲಿ ಬಹು ದಿನದ ಬೇಡಿಕೆಯಾದ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ. ಸಚಿವರು ಬಳ್ಳಾರಿ ನಗರದ …
Read More »
BigTv News
October 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸೋಮವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಯು ಮಂಗಳವಾರವೂ ಮುಂದುವರಿಯಲಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಸೋಮವಾರ …
Read More »
BigTv News
October 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಈ ರೋಗವನ್ನು ಹತೋಟಿ ಮಾಡಿ ತೋಟವನ್ನು ಉಳಿಸಿಕೊಳ್ಳಲು ಹಲವಾರು ಔಷಧಿಗಳ ಮೊರೆ ಹೋಗಿದ್ದಾರೆ. ಸರ್ಕಾರ ರೈತರಿಗೆ ನೀಡಿದ್ದ ಎಲ್ಲಾ ಭರವಸೆಗಳು ಹುಸಿಯಾಗಿವೆ. ಕೇಂದ್ರಿಯ ತೋಟದ ಬೆಳಗಳ ಸಂಶೋಧನಾ ಸಂಸ್ಥೆ, ಪ್ರಾಂತೀಯ ಕ್ಷೇತ್ರ ವಿಟ್ಲ, ಕರ್ನಾಟಕ ಅಡಿಕೆ ಬೆಳೆಗೆ ಕಾಡುವ ಎಲೆಚುಕ್ಕೆ ರೋಗದ ನಿರ್ವಹಣೆ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ರೈತರು ಈ …
Read More »
BigTv News
October 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕನ್ನಡ ಕಿರುತೆರೆಯ ಬೃಹತ್ ರಿಯಾಲಿಟಿ ಶೋ ಎಂಬ ಖ್ಯಾತಿಯ ಬಿಗ್ಬಾಸ್ ಕನ್ನಡದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಣಿಸಿಕೊಂಡಿದ್ದು,ಈ ಕುರಿತು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್ಗೆ ಯು ಟಿ ಖಾದರ್ ಅವರಿಗೆ ದೂರು ನೀಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಯು ಟಿ ಖಾದರ್ ದೂರು ನೀಡುವ ಮೂಲಕ ಸೇವಾ ಸಂಸ್ಥೆಯು ಆಗ್ರಹಿಸಿದೆ. ಇನ್ನು ಚಿಕ್ಕಬಳ್ಳಾಪುರ …
Read More »