Breaking News

ಸುದ್ದಿ

ಮುತಾಲಿಕ್ ಮೇಲೆ ದೂರಿನನ್ವಯ ಕಾನೂನು ಕ್ರಮ: ರೇಣುಕಾ ಸುಕುಮಾರ.

ಹುಬ್ಬಳ್ಳಿ: ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಮುತಾಲಿಕ್ ಮೇಲೆ ಪ್ರಕರಣ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ.ಮುತಾಲಿಕ್ ಹೇಳಿಕೆ ಕುರಿತಂತೆ ಅಂಜುಮನ್ ಹಾಗೂ ಮುಸ್ಲಿಂ ಬಾಂಧವರಿಂದ ದೂರು ನೀಡಲಾಗಿದೆ. ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ಈ‌ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ‌ಜರುಗಿಸಲಾಗುವುದು ಎಂದರು.ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ನಿನ್ನೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.ಬಳಿಕ ಅಂಜುಮನ್ ಸಂಸ್ಥೆಯಿಂದಲೂ ಸಹ ದೂರು ನೀಡಲಾಗಿದೆ.ಮುತಾಲಿಕ್ ಅವರನ್ನ ಗಡಿಪಾರು ಮಾಡುವಂತೆ ಮನವಿ …

Read More »

ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ….

ಬೆಂಗಳೂರು: ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ …

Read More »

ಪೊಲೀಸರು ಕಿರುಕುಳ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ…

ಬೆಂಗಳೂರು: ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಲಘಟ್ಟಪುರದ ನಾಗರಾಜ್ (47) ಮೃತರು. ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸನಾವುಲ್ಲಾ ಎಂಬಾತನ ಒಡೆತನದಲ್ಲಿರುವ ಕಂಪೆನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದರು. ಈ ಕಂಪೆನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ …

Read More »

ವಸತಿ ಶಾಲೆಯ ನೀರಿನ ಟ್ಯಾಂಕ್​ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಘಟನೆ….

ರಾಮನಗರ: ವಸತಿ ಶಾಲೆಯ ನೀರಿನ ಟ್ಯಾಂಕ್​ ಕುಸಿದು ಓರ್ವ ಬಾಲಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ಹೊರಗೆ ನೀರಿನ ಸಿಮೆಂಟ್ ಟ್ಯಾಂಕ್​ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕ್​ಗೆ ನಲ್ಲಿಗಳನ್ನು ಅಳವಡಿಸಲಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ ಮುಖ ತೊಳೆದುಕೊಳ್ಳಲು ಇದೇ ಟ್ಯಾಂಕ್​ …

Read More »

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ….

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ.ಮತ್ತೊಂದು ಕಡೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಕ್ಷಣಗಣನೆ.ಸಂಪೂರ್ಣ ಕೇಸರಿಮಯವಾದ ವಾಣಿಜ್ಯ ನಗರಿ ಹುಬ್ಬಳ್ಳಿ.ನಗರದ ಹೃದಯಭಾಗ ಚೆನ್ನಮ್ಮ‌ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸಂಪೂರ್ಣ ಕೇಸರಿಮಯ ವಾಗಿದೆ. ಕೇಸರಿ ಭಗವಾ ಧ್ವಜಗಳಿಂದ ಕಂಗೊಳಿಸುತ್ತಿರೋ ಹುಬ್ಬಳ್ಳಿ ನಗರ,ಈದ್ಗಾ ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಈದ್ಗಾಮೈದಾನದ ಸುತ್ತಲೂ ಹದ್ದಿನ ಕಣ್ಣಿರಿಸಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳು.ಪೊಲೀಸ್ ಸರ್ಪಗಾವಲಿನಲ್ಲಿ ಪ್ರತಿಷ್ಠಾಪನೆಗೊಳ್ಳಲಿರೋ ಈದ್ಗಾ ಗಣೇಶ

Read More »

ಈದ್ಗಾ ಗಣೇಶೋತ್ಸವಕ್ಕೆ ಕ್ಷಣಗಣನೆ…..

ಹುಬ್ಬಳ್ಳಿ: ಈದ್ಗಾ ಗಣೇಶೋತ್ಸವಕ್ಕೆ ಕ್ಷಣಗಣನೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ವಿರಾಜಮಾನನಾಗಿಲಿದ್ದಾನೆ ನೂರೆಂಟು ವಿಘ್ನಗಳ ಎದುರಿಸಿ ವಿಘ್ನ ನಿವಾರಕ ಗಣೇಶನ ಸ್ವಾಗತಕ್ಕೆ ಸಕಲ ತಯಾರಿ ನಡೆದಿದೆ. ಶಾಂತಿಯುತ ಗಣೇಶೋತ್ಸವಕ್ಕೆ ಖಾಕಿಪಡೆ ಸನ್ನದ್ಧ, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆಮಾಡಲಾಗಿದೆ.ಸಾಕಷ್ಟು ವಿವಾದ ಬಳಿಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ‌ ಗಣೇಶೋತ್ಸವ ಆಚರಣೆಗೆ ಅವಕಾಶ ದೊರೆತಿದೆ. ಪ್ರತಿಷ್ಠಾಪನೆಗೆ ಕೆಲವೇ ಕ್ಷಣಗಳು ಬಾಕಿ‌ ಇವೆ.ಬೆಳಿಗ್ಗೆ 9.30 ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಗಣೇಶನ ಮೆರವಣಿಗೆ ನಡೆಯಲಿದೆ.ಸರಿಯಾಗಿ …

Read More »

ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ…

ಚಾಮರಾಜನಗರ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ರಾಮದ ಚೆನ್ನಪ್ಪ (60) ಸಾವಿಗೀಡಾದವರು. 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಭಾನುವಾರ ಸಂಜೆ ಕುಟುಂಬಸ್ಥರು ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಿ ಚಿತೆಗೆ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು …

Read More »

ಈ ಬಾರಿಯ ಚೌತಿಯಲ್ಲಿ ಗೌರಿ ಗಣೇಶ ಮೂರ್ತಿಗಳ ದರ ಹೆಚ್ಚಾಗಿದೆ…

ಬೆಂಗಳೂರು: ರಾಜ್ಯಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಚೌತಿಯಲ್ಲಿ ಗೌರಿ ಗಣೇಶ ಮೂರ್ತಿಗಳ ದರ ಹೆಚ್ಚಾಗಿದ್ದು, ಅಲಂಕಾರಿಕ ವಸ್ತು, ಸರಕು ಸಾಗಣೆ ಕಾರಣದಿಂದ ಶೇ. 10 ರಿಂದ 20ರಷ್ಟು ಬೆಲೆ ಜಾಸ್ತಿಯಾಗಿದೆ. ಮನೆಗಳಲ್ಲಿ ಪೂಜಿಸಲ್ಪಡುವ ಚಿಕ್ಕ ಮೂರ್ತಿಗಳಿಂದ, ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲ್ಪಡುವ ದೊಡ್ಡ ಗಾತ್ರದ ಗಣೇಶ ವಿಗ್ರಹಗಳನ್ನು ಭಾನುವಾರ ಜನತೆ ಕೊಂಡೊಯ್ಯುತ್ತಿದ್ದುದು ನಗರಗಳಲ್ಲಿ ಕಂಡುಬಂತು. ಚೌತಿಗಾಗಿ ನಗರದ ಬೀದಿ ಬೀದಿಗಳಲ್ಲಿ ಗಣೇಶ ವಿಗ್ರಹಗಳು …

Read More »

ಗಣೇಶೋತ್ಸವಕ್ಕೆ ಉಸ್ಮಾನಸಾಬ್​ ಎಂಬವರು ವಿವಿಧ ಬಗೆಯ ಏಲಕ್ಕಿ ಮಾಲೆಗಳ ತಯಾರಿ….

ಹಾವೇರಿ: ಗಣೇಶೋತ್ಸವಕ್ಕೆ ಇಲ್ಲಿಯ ಉಸ್ಮಾನಸಾಬ್​ ಎಂಬವರು ವಿವಿಧ ಬಗೆಯ ಏಲಕ್ಕಿ ಮಾಲೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಒಂದೆಳೆಯ ಮಾಲೆಗಳಿಂದ ಹಿಡಿದು 25 ಎಳೆಗಳಿರುವ ಮಾಲೆಗಳನ್ನು ಇವರು ತಯಾರಿಸುತ್ತಾರೆ. ಕಳೆದ ಹಲವು ವರ್ಷಗಳಿಂದ ಈ ಕೆಲಸದಲ್ಲಿ ತೊಡಗಿದ್ದಾರೆ. ತಾಯಿಯಿಂದ ಬಂದ ಕಲೆಯನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ವಿಶಿಷ್ಠ ಏಲಕ್ಕಿ ಮಾಲೆ ತಯಾರಿಕೆಗಾಗಿ ಇವರ ತಾಯಿಗೆ ‘ಕರ್ನಾಟಕ ರಾಜ್ಯೋತ್ಸವ’ ಪ್ರಶಸ್ತಿ ಲಭಿಸಿತ್ತು. ಉಸ್ಮಾನಸಾಬ್ ಮಾತನಾಡಿ​, “ಸಾರ್ವಜನಿಕ ಗಣೇಶೋತ್ಸವಗಳಿಗಾಗಿ ಮುಂಚಿತವಾಗಿ ಆರ್ಡರ್‌ಗಳು ಬಂದಿವೆ. ಈಗಾಗಲೇ …

Read More »

ಭರ್ಜರಿಯಾದ ಗಣೇಶ ಮೂರ್ತಿಗಳ ಮಾರಾಟ…..

ಗದಗ: ಗಣೇಶ ಹಬ್ಬ ಅಂದ್ರೆ ಸಡಗರ ಸಂಭ್ರಮ ಇದ್ದೇ ಇರುತ್ತೆ.‌ ನಗರದಲ್ಲಿ ಹಬ್ಬಕ್ಕೆ ಮುಂಚಿನ ದಿನವೇ ಖರೀದಿ ಭರಾಟೆ ಬಲು ಜೋರಾಗಿದೆ. ಮಾರ್ಕೆಟ್​ನತ್ತ ಬರುತ್ತಿರೋ ಜನ ತಮಗೆ ಇಷ್ಟವಾದ ಮೂರ್ತಿಗಳನ್ನ ಬುಕ್ ಮಾಡಿದ್ದಾರೆ. ಪರಿಸರ ಸ್ನೇಹಿ ಗಣಪತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು ಅನ್ನೋ ನಿಟ್ಟಿನಲ್ಲಿ ಗದಗ ಜಿಲ್ಲೆ ತಯಾರಕರು ಒಂದೇ ಸೂರಿನಡಿ ಗಣೇಶ ಮೂರ್ತಿಗಳ ಮಾರಾಟ ಮಾಡೋದಕ್ಕೆ ಮುಂದಾಗಿದ್ದು, ಪರಿಸರ ಸ್ನೇಹಿ ಗಣಪಗಳ ಮಾರಾಟವೂ ಭರ್ಜರಿಯಾಗಿ ನಡೀತಿದೆ. ಗದಗ ನಗರದ ಎಪಿಎಂಸಿ …

Read More »