Breaking News

ಸುದ್ದಿ

ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದರು….

ಬೆಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಶ್ವಕರ್ಮ ಸಮುದಾಯಕ್ಕೆ ಬಲ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದ್ದು, ಕುಲಕಸುಬು ಮಾಡಿಕೊಂಡು ಬರುತ್ತಿರುವ ವಿಶ್ವಕರ್ಮ ಸಮುದಾಯದ ಜನರು ಯೋಜನೆಯ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದರು. ನಗರದ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಭಾನುವಾರ ಆಯೋಜನೆ ಮಾಡಲಾಗಿದ್ದ ಪಿಎಂ ವಿಶ್ವಕರ್ಮ ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ …

Read More »

ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ: ಡಾ.ಜಿ.ಪರಮೇಶ್ವರ್.

ಮಂಡ್ಯ: ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ ಎಂದು ಮಂಡ್ಯದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಇದೆಲ್ಲ ನಮ್ಮ ವರಿಷ್ಠರು ತೀರ್ಮಾನ ಮಾಡುವಂಥದ್ದು. ವೈಯಕ್ತಿಕ ಅಭಿಪ್ರಾಯಗಳನ್ನು ನಮ್ಮವರು ಆಗಾಗ್ಗೆ ಹೇಳುತ್ತಿರುತ್ತಾರೆ ಎಂದರು. ಈ ವಿಚಾರವನ್ನು ಹೈಕಮಾಂಡ್​ಗೆ ಬಿಟ್ಟು ಬಿಡೋಣ. ಅದನ್ನು ಅವರೇ ಕೇಳಬೇಕು. ನಾನು ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ ತಪ್ಪಲ್ಲ ಎಂದು ಹೇಳಿದರು. ಕಾವೇರಿ ನಿರ್ವಾಹಣಾ ಪ್ರಾಧಿಕಾರದ …

Read More »

ಶೆಟ್ಟರ್ ಮನೆಯಲ್ಲಿ ಹಬ್ಬದ ಸಂಭ್ರಮ…..

ಮನೆಯಲ್ಲಿ ಗಣೇಶ ಕೂರಿಸಿದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್..ಹುಬ್ಬಳ್ಳಿಯ ಮಧುರಾ ಕಾಲೊನಿಯಲ್ಲಿರೋ ಶೆಟ್ಟರ್ ನಿವಾಸದಲ್ಲಿ ಗಣೇಶ ಪ್ರತಿಷ್ಠಾಪನೆ..ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಮನೆಯಲ್ಲಿ ಹಬ್ಬದ ಸಂಭ್ರಮ..ಕುಟುಂಬದೊಂದಿಗೆ ಗಣೇಶ ಪ್ರತಿಷ್ಠಾಪನೆಯಲ್ಲಿ ಭಾಗಿಯಾದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್.

Read More »

ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….

ಚಾಮರಾಜನಗರ: ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘಾ (24) ಮತ್ತು ಮಕ್ಕಳಾದ ಪುನ್ವಿತಾ (06) ಹಾಗೂ ಮನ್ವಿತಾ (03) ಮೃತರು.

Read More »

ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯ ಕೊಲೆ…

ಮೈಸೂರು: ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ಮಹಿಳೆ. ಮಂಜು ಅಲಿಯಾಸ್ ಮಂಜುನಾಥ್ (27) ಕೊಲೆ ಆರೋಪಿ. 8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ದಂಪತಿಗೆ ಈಗಾಗಲೇ 5 ವರ್ಷದ ಗಂಡು ಮಗುವಿದೆ. ಮತ್ತೊಂದು ಮಗುವಿಗೆ …

Read More »

ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮನವೊಲಿಕೆ ಯತ್ನ‌…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ(ಗುರುವಾರ) ಸಂಜೆ ಭೇಟಿ ನೀಡಿ ಮಾತುಕತೆ ನಡೆಸಿದರು. ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆ ಎಐಸಿಸಿ, ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.‌ ಇದರ ಬೆನ್ನಲ್ಲೇ ಸಚಿವರಾದ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮನವೊಲಿಕೆ …

Read More »

ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿತ…

ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ …

Read More »

ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ…

ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ.‌ ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ. ಇದರ ಜೊತೆಗೆ ನ 270 ಆಟೋಮೊಬೈಲ್ …

Read More »

ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ: ಎಂ. ಲಕ್ಷ್ಮಣ್.

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ನೂರಕ್ಕೆ ನೂರರಷ್ಟು ಸೋಲುತ್ತಾರೆ. ಏನಾದರೂ ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಅವರಿಗೆ ನೇರ ಹಾಕಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ. ಇದೇ ಕಾರಣದಿಂದ ಕಂಡ …

Read More »

ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ..

ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌. ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಇನ್ನುಳಿದ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ ತಂಡ …

Read More »