Breaking News

ಸುದ್ದಿ

ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋಮಾಂಸ ಪತ್ತೆ…

ಮಂಗಳೂರು: ನಗರದ ಉರ್ವಸ್ಟೋರ್​ನ ಚಿಲಿಂಬಿ ಬಳಿ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋಮಾಂಸವನ್ನು ಪತ್ತೆಹಚ್ಚಿದ ಬಜರಂಗದಳದ ಕಾರ್ಯಕರ್ತರು ಆರೋಪಿಗಳ ಸಹಿತ ಮಾಂಸವನ್ನು ಉರ್ವ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಾರ ಗ್ರಾಮದ ದಾವೂದ್, ಜೋಕಟ್ಟೆ ಗ್ರಾಮದ ಬದ್ರುದ್ದೀನ್ ಮತ್ತು ಯಾಸೀನ್ ಎಂಬವರನ್ನು ಬಂಧಿಸಲಾಗಿದೆ. ಭಾನುವಾರ ಬೆಳಗ್ಗೆ ಗೋಮಾಂಸವನ್ನು ಜೋಕಟ್ಟೆಯಿಂದ ರಿಕ್ಷಾದಲ್ಲಿ ನಗರದ ಬೀಫ್ ಸ್ಟಾಲ್​ಗಳಿಗೆ ಸಾಗಣೆ ಮಾಡುತ್ತಿದ್ದ ವೇಳೆ ಅವರನ್ನು ಹಿಡಿಯಲಾಗಿದೆ. ಗೋಮಾಂಸ ಸಾಗಣೆಯ ಮಾಹಿತಿ ತಿಳಿದು ಬಜರಂಗದಳದ ಕಾರ್ಯಕರ್ತರು …

Read More »

ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಇಂದು ದೇಶದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭೇಟಿ..

ಬೆಂಗಳೂರು: ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಹೂಡಿಕೆಗಳ ಸಂಬಂಧ ರಾಜ್ಯ ಸರ್ಕಾರ, ಉದ್ಯಮಿಗಳ ಜೊತೆ ಸಭೆ ನಡೆಸಲಿದ್ದಾರೆ. ವಾರ್ಷಿಕ ಜಿ20 ಶೃಂಗಸಭೆಗೆ ಭಾರತಕ್ಕೆ ಆಗಮಿಸಿರುವ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಇಂದು ದೇಶದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. 120 ಮಂದಿ ಉದ್ಯಮಿಗಳ ದೊಡ್ಡ ನಿಯೋಗದೊಂದಿಗೆ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಅವರಿಗೆ ನೆದರ್‌ಲ್ಯಾಂಡ್ಸ್ ನ ವಿದೇಶಿ ವ್ಯಾಪಾರ ಮತ್ತು ಅಭಿವೃದ್ಧಿ …

Read More »

ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ..

ಕೊಲಂಬೊ (ಶ್ರೀಲಂಕಾ): ನಿನ್ನೆ ಮಳೆಯಿಂದಾಗಿ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದ್ದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ. ಸಂಪೂರ್ಣ 50 ಓವರ್​ಗಳನ್ನು ಆಡಿಸುವ ನಿರ್ಧಾರದೊಂದಿಗೆ ಅಂಪೈರ್​ಗಳು ಮೈದಾನಕ್ಕಿಳಿದಿದ್ದಾರೆ. ಕ್ರಿಕೆಟ್​ ಅಭಿಮಾನಿಗಳಿಗೆ ಅಂತೂ ಇಂತು ಪಂದ್ಯ ಆರಂಭ ಆಯ್ತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಪಾಕಿಸ್ತಾನ ತಂಡಕ್ಕೆ ಬೇಸರ ವಿಷಯ ಎಂದರೆ ಹ್ಯಾರಿಸ್​ ರೌಫ್​ ಇಂದು ಆಡದೇ ಇರುವುದು.

Read More »

ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್​ವೊಬ್ಬರ ಮೃತದೇಹ ಪತ್ತೆ…

ಮಂಗಳೂರು (ದಕ್ಷಿಣ ಕನ್ನಡ): ನಗರದ ಪ್ರತಿಷ್ಠಿತ ಮೋತಿ ಮಹಲ್ ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್​ವೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ ಮೃತಪಟ್ಟವರು. ಇವರು ಕೇರಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಗೋಪು ಆರ್.ನಾಯರ್ ಅವರು ಸ್ಮಿಮ್ಮಿಂಗ್ ಪೂಲ್​ನಲ್ಲಿ ಮುಳುಗಿ‌ ಸಾವನ್ನಪ್ಪಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ನಿನ್ನೆ (ಭಾನುವಾರ) ಮಂಗಳೂರಿಗೆ ಬಂದು ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ಕೊಠಡಿಯಿಂದ ಬ್ಯಾಂಕ್ ಅಧಿಕಾರಿ ಹೊರಹೋಗಿದ್ದರು. …

Read More »

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡ ಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು X ಖಾತೆಯಲ್ಲಿ (ಹಿಂದಿನ ಟ್ವಿಟ್ಟರ್​) ಸರಣಿಯಾಗಿ ಸಮಸ್ಯೆಗಳನ್ನು ಬರೆದಿರುವ ಅವರು, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು …

Read More »

ವರ್ಷದ ಸಂಭ್ರಮಕ್ಕೆ ಪಟಾಕಿ ದುರಂತದ ಕರಿಛಾಯೆ….

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ಗಣೇಶ ಚತುರ್ಥಿ, ದೀಪಾವಳಿ ಹಬ್ಬ ಬಂದರೆ ಸಾಕು ಸಂಭ್ರಮ ಮನೆ ಮಾಡಿರುತ್ತಿತ್ತು. ಆದರೆ ಈ ವರ್ಷದ ಸಂಭ್ರಮಕ್ಕೆ ಪಟಾಕಿ ದುರಂತದ ಕರಿಛಾಯೆ ಆವರಿಸಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಿ ಖುಷಿಪಡುತ್ತಿದ್ದ ಗ್ರಾಮದ ಮೂರು ಜೀವಗಳು ಪಟಾಕಿ ದುರಂತದಲ್ಲಿ ಬಲಿಯಾಗಿವೆ. ಕಾಟೇನಹಳ್ಳಿ ಗ್ರಾಮದ ಸ್ನೇಹಿತರಾಗಿದ್ದ ಶಿವಾನಂದ ಅಕ್ಕಿ(22), ದ್ಯಾಮಪ್ಪ ಓಲೇಕಾರ್ (25) ಹಾಗೂ ರಮೇಶ ಬಾರ್ಕಿ(26) ಪಟಾಕಿಯಲ್ಲಿ ದುರಂತದಲ್ಲಿ ಸಾವಿಗೀಡಾದವರು. …

Read More »

ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ: ಸಿದ್ದರಾಮಯ್ಯ.

ಮೈಸೂರು: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ …

Read More »

ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ: ಸಿದ್ದರಾಮಯ್ಯ.

ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಇನ್ನೂ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘ದ ಜರ್ನಿ ಆಫ್ ಲೈಫ್’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಸಿಎಂ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ …

Read More »

ವ್ಯಕ್ತಿಯೋರ್ವ ಮದ್ಯದ ಅಮಲಿನಲ್ಲಿ ಮೈ-ಕೈ ಮತ್ತು ಕತ್ತು ಕೊಯ್ದುಕೊಂಡು ಸಾವನ್ನಪ್ಪಿರುವ ಘಟನೆ ಬೆಳಕಿಗೆ…

ದಾವಣಗೆರೆ: ವ್ಯಕ್ತಿಯೋರ್ವ ಮದ್ಯದ ಅಮಲಿನಲ್ಲಿ ಮೈ-ಕೈ ಮತ್ತು ಕತ್ತು ಕೊಯ್ದುಕೊಂಡು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ವಡ್ನಾಳ್ ರಾಜಣ್ಣ ಬಡಾವಣೆಯಲ್ಲಿ ಕಳೆದ ದಿನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.‌ ಬಸವರಾಜ್​ (31) ಕತ್ತು ಕೊಯ್ದುಕೊಂಡು ಮೃತಪಟ್ಟ ವ್ಯಕ್ತಿ. ಕ್ಷೌರದ ಅಂಗಡಿಯಲ್ಲಿ ಬ್ಲೇಡ್​ ತೆಗೆದುಕೊಂಡು ಮೈ-ಕೈ ಮತ್ತು ಕತ್ತು ಕೊಯ್ದುಕೊಂಡು ಬಸವರಾಜಪ್ಪ,‌ ರಕ್ತ ಸುರಿಯುತ್ತಿದ್ದರು ಬೀದಿ ಬದಿ ತಿರುಗಾಡುತ್ತಿದ್ದುದನ್ನು ಸ್ಥಳೀಯರು ಕಂಡು ತಕ್ಷಣ ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿಸಿದ್ದರು. ತೀವ್ರ …

Read More »

ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ…..

ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಕೃಷಿ ವಿಶ್ವ ವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಹಾಗೂ ವಿಸ್ಮಯಕಾರಿ ಕೀಟ ಪ್ರಪಂಚ ಸೇರಿದಂತೆ ಹಲವು ಮೇಳಗಳನ್ನು ಸಿಎಂ ಉದ್ಘಾಟಿಸಿದರು.ಬಳಿಕ ಹಲವು ಬಗೆಯ ಸಸ್ಯಗಳನ್ನು ಹಾಗೂ ವಿವಿಧ ಹೂವಿನ ಅಲಂಕಾರ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಎಂಗೆ ಸಚಿವ ಸಂತೋಷ್ ಲಾಡ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು. …

Read More »