Breaking News

ಸುದ್ದಿ

ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಬಂದ್‌…..

ರಾಮನಗರ: ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಇಂದು ಕರೆ ನೀಡಿದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್​ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಂದ್​ಗೆ ಕರೆ ನೀಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಮನಗರ ಜನತೆ ಸ್ವಯಂಪ್ರೇರಣೆಯಿಂದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ, ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ನಮಗೆ ಬೇಕು ಎನ್ನುವ …

Read More »

ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್​​ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ…..

ಶಿರಸಿ (ಉತ್ತರಕನ್ನಡ): ಹಿಂದಿನ ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್​​ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ಶಿರಸಿ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದ್ದು, ನಗರ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ.ವಾಣಿಜ್ಯ ನಗರ ಶಿರಸಿ ಪಟ್ಟಣದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಸರಿಯಾದ ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಏಕಮುಖ ಸಂಚಾರ ವ್ಯವಸ್ಥೆ ಅನುಷ್ಠಾನದಲ್ಲಿನ …

Read More »

ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿ….

ವಾಷಿಂಗ್ಟನ್​ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್‌ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ …

Read More »

ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ …

Read More »

ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ…

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ. ಅವರ ಪತ್ನಿ ಸಂಜನಾ ಗಣೇಶನ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಮ್ರಾ ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೋವನ್ನು ಶೇರ್​ ಮಾಡಿದ್ದಾರೆ. ನಮ್ಮ ಪುಟ್ಟ ಕುಟುಂಬ ಬೆಳೆದಿದೆ. ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ಇಂದು ಬೆಳಗ್ಗೆ ನಾವು ನಮ್ಮ ಮಗು ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಈ ಜಗತ್ತಿಗೆ ಸ್ವಾಗತಿಸಿದೆವು. ಈಗ ನಮ್ಮ ಸಂತೋಷಕ್ಕೆ …

Read More »

33ಲಕ್ಷ ರೂ. ಮೌಲ್ಯದ ​ಬಿಯರ್ ಬ್ರಾಂಡ್ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನಾಶ..

ದೊಡ್ಡಬಳ್ಳಾಪುರ: ಬಿಯರ್​ನಲ್ಲಿ ಸೆಡಿಮಂಟ್ ಅಂಶ ಶೇಖರಣೆಯಾಗಿರುವ ಹಿನ್ನೆಲೆ ಸುಮಾರು 33ಲಕ್ಷ ರೂ. ಮೌಲ್ಯದ ​ಬಿಯರ್ ಬ್ರಾಂಡ್ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನಾಶಪಡಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್​ನಲ್ಲಿ ಜುಲೈ 15 ರಂದು 7 ಇ ಮತ್ತು 7ಸಿ ಬ್ಯಾಚ್​ನಲ್ಲಿ ತಯಾರಾದ ಪ್ರತಿಷ್ಠಿತ ಬ್ರಾಂಡ್​ನ ಸ್ಟ್ರಾಂಗ್ ಮತ್ತು ಅಲ್ಟ್ರಾ ಲ್ಯಾಗರ್ ಬಿಯರ್​ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿತ್ತು. ಮಾನವ ಆರೋಗಕ್ಕೆ ಸೆಡಿಮೆಂಟ್ ಅಂಶ ಹಾನಿ ಮಾಡುವ ಹಿನ್ನೆಲೆ …

Read More »

ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿದ ಕ್ರೂರಿ…

ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿ ಕ್ರೂರತ್ವ ಮೆರೆದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ. ಅದೇ ಗ್ರಾಮದ ತಿಮ್ಮರಾಜು‌ ಮತ್ತು ಕುಟುಂಬದವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ತಿಮ್ಮರಾಜು, ಶಶಿಕಲಾ, ರಘು, ಮುನಿರಾಮಯ್ಯ, ಅರವಿಂದ ಹರ್ಷವರ್ಧನ್, ಸಿಂಧು‌ …

Read More »

ಅರಣ್ಯ ಪ್ರದೇಶಗಳಿಂದಲೇ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ದೂರಸಂಪರ್ಕ…

ಕಾರವಾರ: ಗುಡ್ಡಗಾಡು ಪ್ರದೇಶಗಳಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಒಬ್ಬರನ್ನೊಬ್ಬರು ಸಂಪರ್ಕ ಮಾಡುವುದೇ ದೊಡ್ಡ ಸವಾಲು. ಅದರಲ್ಲಿಯೂ ಸರ್ಕಾರಿ ಯೋಜನೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ನೆಟ್‌ವರ್ಕ್‌ ಪ್ರಮುಖ ಸಾಧನವಾಗಿದ್ದರೂ ಸಂಪರ್ಕ ಸಾಧ್ಯವಾಗದೆ ಜನ ಪರದಾಡುವಂತಾಗಿದೆ. ಆದರೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರ ಸರ್ಕಾರ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್‌ ಟವರ್‌ಗಳನ್ನು ಮಂಜೂರು ಮಾಡಲಾಗಿತ್ತಾದರೂ ಇದೀಗ ಈ ಯೋಜನೆಗೂ ವಿಘ್ನ ಎದುರಾಗಿದೆ. ಬಹುಭಾಗ …

Read More »

ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ….

ತುಮಕೂರು: ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ನ್ಯಾಯಕ್ಕಾಗಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ. ಸಂತ್ರಸ್ತೆಯ ಹೆಸರು ಸಹನಾ. ಈಕೆಯ ಪತಿ ಸುನೀಲ್​ ಕುಮಾರ್​, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಸಿಕೆರೆ ಮೂಲದ ಸಹನಾ ಒಂದೂವರೆ ವರ್ಷದ ಹಿಂದೆ ಅವರು ವಿವಾಹವಾಗಿದ್ದರು. ಮದುವೆಯಾದ ಎರಡೇ ತಿಂಗಳಲ್ಲಿ ಸಹನಾಗೆ ಕಾಯಿಲೆಯೊಂದು ಕಾಣಿಸಿಕೊಂಡಿತ್ತು. ಈ ವೇಳೆ, …

Read More »

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಇಂಜಿನಿಯರ್​ಗಳಿಗೆ ಫೋನ್‌ ಮಾಡಿ ದಾಳಿ…

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ಇಂಜಿನಿಯರ್​ಗಳಿಗೆ ಫೋನ್‌ ಮಾಡಿ ದಾಳಿ ಮಾಡಿಸುವುದಾಗಿ ಬೆದರಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಪ್ರಮುಖ ಆರೋಪಿಯ ಸಹಚರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ್ ಕೊಪ್ಪದ್ ಬಂಧಿತ ಆರೋಪಿ. ಪ್ರಮುಖ ಆರೋಪಿ ವಿಶಾಲ್ ಪಾಟೀಲ್ ಎಂಬಾತ ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ‌. ಆರೋಪಿಯನ್ನು 2020ರಲ್ಲಿ ವಂಚನೆ ಪ್ರಕರಣದಡಿ ಬೆಳಗಾವಿಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದು ಮತ್ತೆ …

Read More »