BigTv News
September 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಶುಭ ಶುಕ್ರವಾರದ ಬೆಳಗ್ಗೆ 9:45 ರಿಂದ 10:15ರ ತುಲಾ ಲಗ್ನದಲ್ಲಿ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಆ ಮೂಲಕ 2023 ರ ನಾಡಹಬ್ಬ ದಸರಾಗೆ ಮುನ್ನುಡಿ ಬರೆಯಲಾಯಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅಭಿಮನ್ಯು ನೇತೃತ್ವದ 9 ಗಜಪಡೆಗಳಾದ ಮಹೇಂದ್ರ, ಅರ್ಜುನ, ವರಲಕ್ಷ್ಮಿ, ಧನಂಜಯ, ಗೋಪಿ, ವಿಜಯ, ಪಾರ್ಥಸಾರಥಿ, ರೋಹಿತ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ …
Read More »
BigTv News
September 1, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನೀರಿನ ಅಭಾವ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿಯೇ ನೀರಿನ ಸಮಸ್ಯೆ ಉಂಟಾಗಿದ್ದು, ಮಂಗಳೂರು ಜಿಲ್ಲಾಡಳಿತ ಮತ್ತು ಜನರು ಆತಂಕಕ್ಕೊಳಗಾಗಿದ್ದಾರೆ. ನೀರಿನ ಸಮಸ್ಯೆ ತಲೆದೋರಿದಾಗ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡಿ ಸಮಸ್ಯೆ ನಿವಾರಿಸಲಾಗುತ್ತದೆ. ಆದರೆ ಈ ಸಲ ಮಳೆ ಕೊರತೆಯಿಂದಾಗಿ ಸೆಪ್ಟೆಂಬರ್ ಮೊದಲ ವಾರದಲ್ಲೇ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಮಂಗಳೂರು ನಗರಕ್ಕೆ ನೀರಿನ ಏಕೈಕ ಮೂಲ …
Read More »
BigTv News
August 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಸ್ತು ಹಾಗೂ ತೀವ್ರ ಜ್ವರದಿಂದಾಗಿ ಇಂದು ಬೆಳಗಿನಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತಕ್ಷಣ ಅವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಕುಮಾರಸ್ವಾಮಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಪ್ರಕಟಣೆಯಲ್ಲಿ …
Read More »
BigTv News
August 31, 2023
ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಶಿರಸಿ(ಉತ್ತರ ಕನ್ನಡ): ಮಳೆಯ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪೂರ್ವ ಭಾಗದಲ್ಲಿ ಭತ್ತ, ಮೆಕ್ಕೆ ಜೋಳ ಬೆಳೆಗಳು ಒಣಗಿ ಹಾಳಾಗಿದ್ದು, ಹಸಿರಿನಿಂದ ಕಂಗೊಳಿಸಬೇಕಾಗಿದ್ದ ಹೊಲಗಳು ಬರಿದಾಗಿದೆ. ಇದು ರೈತರನ್ನು ಮಮ್ಮಲ ಮರುವಂತೆ ಮಾಡಿದ್ದು, ಬರಗಾಲ ಘೋಷಣೆ ಮಾಡುವಂತೆ ಆಗ್ರಹ ಹೆಚ್ಚಾಗಿದೆ. ಬನವಾಸಿ, ಬದನಗೋಡ, ಸಂತೊಳ್ಳಿ ವ್ಯಾಪ್ತಿಯು ಮಳೆಯಾಶ್ರಿತ ಭತ್ತದ ಬೆಳೆಯ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ 2,480 ಹೆಕ್ಟೇರ್ ಭತ್ತ, 1,550 ಹೆಕ್ಟೇರ್ ಅಡಿಕೆ, ನೂರಾರು ಎಕರೆ ಮೆಕ್ಕೆ …
Read More »
BigTv News
August 30, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್’ದೊಳಗೆ ಲೋಕಸಭಾ ಚುನಾವಣೆ ಮಾಡುವ ಸಂಭವವಿದ್ದು, ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು ಹಾಗೂ ಸಾಧ್ಯವಾದರೇ …
Read More »
BigTv News
August 28, 2023
ಉತ್ತರ ಕನ್ನಡ, ಕರ್ನಾಟಕ, ಸುದ್ದಿ
ಶಿರಸಿ(ಉತ್ತರ ಕನ್ನಡ): ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ. ಆದರೆ ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ. ಕಾರಣ ಪಕ್ಷದ ಹಿತದೃಷ್ಟಿಯಿಂದ ಬೇರೆ ಪಕ್ಷದ ನಾಯಕರು ಬಂದಲ್ಲಿ ಸ್ವಾಗತ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿರಸಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬರುವ ಶಾಸಕರಿಗೆ, ಮಾಜಿ ಶಾಸಕರಿಗೆ ಬರಲು ಸ್ವಾಗತ. ಅಸಮಾಧಾನ ಇದ್ದಲ್ಲಿ ಅದನ್ನು ಹಿರಿಯ …
Read More »
BigTv News
August 28, 2023
ದೆಹಲಿ, ಸುದ್ದಿ
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಜನ್ ಧನ್’‘ ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ ಎಂದು ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 50 ಕೋಟಿಗೂ ಹೆಚ್ಚು ಜನರನ್ನು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಕರೆ ತರಲಾಗಿದೆ. ಈ ಖಾತೆಗಳಲ್ಲಿ ಸುಮಾರು 2 ಲಕ್ಷ ಕೋಟಿ ಸಂಚಿತ ಠೇವಣಿ ಇಡಲಾಗಿದೆ ಎಂಬ ವಿಚಾರವನ್ನು ನಿರ್ಮಲಾ ಸೀತಾರಾಮನ್ ಬಹಿರಂಗ ಪಡಿಸಿದ್ದಾರೆ.
Read More »
BigTv News
August 28, 2023
ಕರ್ನಾಟಕ, ರಾಮನಗರ, ಸುದ್ದಿ
ರಾಮನಗರ: ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಬಾಲಕಿಗೆ ಚಾಕುವಿನಿಂದ ಇರಿದು ಅಪಹರಣ ಮಾಡಿದ ಘಟನೆ ರೇಷ್ಮೆನಗರಿ ರಾಮನಗರದ ಕಾಲೇಜುವೊಂದರ ಬಳಿ ಇಂದು ಬೆಳಗ್ಗೆ ನಡೆದಿತ್ತು. ಸ್ವಲ್ಪ ಸಮಯದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಕಿಡ್ನಾಪ್ ಆಗಿದ್ದ ಬಾಲಕಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದಬಂದಿದೆ. ಕಾರಿನಲ್ಲಿ ಅಪಹರಣ ಮಾಡುವ ಮೊದಲು ಆಕೆಯ ಕೈ ಹಾಗೂ ಭುಜದ ಭಾಗಕ್ಕೆ ಚಾಕುವಿನಿಂದ ಹಲ್ಲೆ ಮಾಡಿರುವ ಗಾಯಗಳಾಗಿವೆ …
Read More »
BigTv News
August 26, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಆರ್ ಟಿಎಸ್ ಬಸ್ಸು ಚಿಗರಿ ಬಸ್ಸೊಂದು ಪಾದಚಾರಿಯ ಕಾಲ ಮೇಲೆ ಹರಿದು ಹೋದ ಪರಿಣಾಮ ಪಾದಾಚಾರಿಯು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಬಳಿಯಲ್ಲಿ ನಡೆದಿದೆ. ಪಾದಾಚಾರಿಯು ರಸ್ತೆಯನ್ನು ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ.ಗಾಯಗೊಂಡ ವ್ಯಕ್ತಿಯ ಹೆಸರು ಇನ್ನೂ ತಿಳಿದು ಬಂದಿಲ್ಲ, ಆದರೇ, ಪಾದಚಾರಿ ಮದ್ಯಪಾನ ಮಾಡಿದ್ದ ಎಂದು ತಿಳಿದುಬಂದಿದೆ.ಇನ್ನೂ ತೀವ್ರವಾಗಿ ಗಾಯಗೊಂಡ ಪಾದಚಾರಿಯನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ದಾಖಲಿಸಿ …
Read More »
BigTv News
August 26, 2023
ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಲ್ಲೇಶ್(16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್ಆರ್ಪಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲೇಶ್ ಎಂದಿನಂತೆ ಕಾಲೇಜಿಗೆ ತೆರಳಲು ಗ್ರಾಮದ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಈ ವೇಳೆ ಇಡಪನೂರು ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗುದ್ದಿದೆ ಎಂದು …
Read More »