Breaking News

ಸುದ್ದಿ

ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು..

ನವದೆಹಲಿ: ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಎಂಎನ್‌ಜಿಆರ್‌ಇಜಿಎ (ಮನರೇಗಾ) ನಿಧಿಯನ್ನು ಕೆರೆ ನಿರ್ಮಾಣ, ಮಣ್ಣಿನ ರಸ್ತೆ ಕೆಲಸ ಅಥವಾ ನೆಡುತೋಪು ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಬಳಸಬಹುದು ಎಂದು ಹೇಳಿದರು.”2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರತಿ ಗ್ರಾಮ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಅಭಿವೃದ್ಧಿಯ ದೀಪ ಬೆಳಗಬೇಕು. …

Read More »

ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆ.ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರು ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ,ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ ಬಂದಿವೆ, ಅವರು ರಾಜಿನಾಮೆ ಕೊಡಬೇಕು ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ.ಪ್ರಾಥಮಿಕವಾಗಿ ಕಾಣುವಂತೆ ಸತ್ಯ ಎನ್ನುಬಹುದಾದ ಆರೋಪಗಳು ಕೇಳಿ ಬಂದಿವೆ. …

Read More »

ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ…

ನವದೆಹಲಿ: ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಬೇಕಿದ್ದ ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಇಲ್ಲಿನ ಜಿಎಂಆರ್ ಗ್ರೂಪ್ ನಡೆಸುತ್ತಿರುವ ಕಾಲ್ ಸೆಂಟರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶೀಘ್ರದಲ್ಲೇ, ಭದ್ರತಾ ಏಜೆನ್ಸಿಗಳ ಸರಿಯಾದ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಯಿತು. ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಕಾಲ್ ಸೆಂಟರ್‌ಗೆ ಬಾಂಬ್ ಕರೆ ಬೆದರಿಕೆ …

Read More »

ಸ್ಪಂದನಾ ಅವರನ್ನು ನೆನೆದು ಭಾವನಾತ್ಮಕ ​ಪೋಸ್ಟ್​ವೊಂದನ್ನು ​ ಸೋಷಿಯಲ್​ಮೀಡಿಯಾದಲ್ಲಿ ಹಂಚಿಕೊಂಡ ವಿಜಯ್…​

ನಟ ವಿಜಯ ರಾಘವೇಂದ್ರ ಮತ್ತು ಸ್ಪಂದನಾರದ್ದು ಸುಂದರ ದಾಂಪತ್ಯ. ಸ್ಯಾಂಡಲ್​ವುಡ್​ನ ಮಾದರಿ ದಂಪತಿಯೆಂದೇ ಗುರುತಿಸಿಕೊಂಡಿದ್ದರು. ಆದರೆ, ವಿಧಿಯಾಟ ಇವರ ಬಾಳಲ್ಲಿ ಬಹುದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿತು. ಯಾವುದೇ ಸುಳಿವಿಲ್ಲದೇ ‘ಚಿನ್ನಾರಿಮುತ್ತನ ಚಿನ್ನ’ ಬಾರದ ಲೋಕಕ್ಕೆ ಪಯಣಿಸಿ ಬಿಟ್ಟರು. ಸ್ಪಂದನಾ ಅವರು ಇಹಲೋಕ ತ್ಯಜಿಸಿ ಇಂದಿಗೆ 13 ದಿನಗಳಾಗಿವೆ. ಪತ್ನಿಯ ನಿಧನ ವಿಜಯ್​ ಬದುಕಲ್ಲಿ ಬರಸಿಡಿಲು ಬಡಿದಂತಾಗಿದೆ. ನೋವಲ್ಲೇ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇದೀಗ ಸ್ಪಂದನಾ ನಿಧನದ ನಂತರ ಅವರನ್ನು ನೆನೆದು …

Read More »

ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ….

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ …

Read More »

ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ…

ಸುಳ್ಯ: ಕೇರಳದ ಗಡಿ ಪ್ರದೇಶವಾದ ಬದಿಯಡ್ಕದ ಎಲಿಜಬೆತ್‌ ವರ್ಗೀಸ್​​ಗೆ ಅಮೆರಿಕದಿಂದ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಅಮೆರಿಕದ ಸ್ಟಿಲ್ವಾಟರ್ ಒಕ್ಲಹೋಮ ಸ್ಟೇಟ್ ಯೂನಿವರ್ಸಿಟಿಯಿಂದ 5 ವರ್ಷಗಳ ಸಂಶೋಧನೆಗಾಗಿ ಬದಿಯಡ್ಕದ ಚುಳ್ಳಿಕಾನ ನಿವಾಸಿ ಎಲಿಜಬೆತ್ ಅವರಿಗೆ ಪಶುವೈದ್ಯಕೀಯ ರೋಗಶಾಸ್ತ್ರದಲ್ಲಿ ಸಂಶೋಧನೆ ನಡೆಸುವುದಕ್ಕಾಗಿ ಈ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ. ಎಲಿಜಬೆತ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮಿಳುನಾಡಿನಲ್ಲಿ ಪಡೆದು ನಂತರದ ಶಿಕ್ಷಣವನ್ನು ಗೋರಕ್‌ಪುರದಲ್ಲಿ …

Read More »

ಐದು ವರ್ಷದ ಬಾಲಕಿಗೆ ಬೀದಿ ನಾಯಿ ಹಲ್ಲೆ….

ನವಲಗುಂದ : ಪಟ್ಟಣದ ದೇಸಾಯಿ ಪೇಟೆಯಲ್ಲಿ ಐದು ವರ್ಷದ ಬಾಲಕಿಗೆ ಬೀದಿ ನಾಯಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಜರುಗಿದೆ. ಮನೆ ಮುಂಭಾಗದಲ್ಲಿ ಬಾಲಕಿ ಭಾಗ್ಯಶ್ರೀ ಕೊಟಗಿ (5) ಆಟ ಆಡುತ್ತಿರುವಾಗ ಏಕಾಏಕಿ ನಾಯಿ ಹಲ್ಲೆ ಮಾಡಿ ಬಾಲಕಿಯ ಬಲ ಕಣ್ಣಿನ ಮೇಲ್ಬಾಗದಲ್ಲಿ ಗಂಭೀರ ಗಾಯ ಮಾಡಿದೆ ಇನ್ನು ಸ್ಥಳೀಯರು ನಾಯಿಯನ್ನು ಹೊಡೆದು ಓಡಿಸಿದ್ದಾರೆ. ಬಾಲಕಿಯನ್ನು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ …

Read More »

ನಟ ಉಪೇಂದ್ರ ಅವರಿಗೆ ಬಿಗ್ ರಿಲೀಫ್…..

ಬೆಂಗಳೂರು: ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ನಟ ಹಾಗೂ ನಿರ್ಮಾಪಕ ಉಪೇಂದ್ರ ಅವರ ವಿರುದ್ಧ ಎರಡು ಪ್ರತ್ಯೇಕ ಠಾಣೆಗಳಲ್ಲಿ FIR ದಾಖಲಾಗಿತ್ತು. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಹಾಗೂ ಹಲಸೂರುಗೇಟ್ ಪೊಲೀಸ್ ಠಾಣೆಗಳಲ್ಲಿ ನಟ ಉಪೇಂದ್ರ ಅವರ ವಿರುದ್ಧ ಎರಡು ಪ್ರತ್ಯೇಕ FIR ದಾಖಲಾಗಿದ್ದವು.ಇತ್ತೀಚೆಗೆ ಮೊದಲನೇ FIR ನಲ್ಲಿ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಎರಡನೇ FIR ನಲ್ಲೂ ಕೂಡ ಕೋರ್ಟ್ ತಡೆ ನೀಡಿದ್ದು, ನಟ …

Read More »

ಪ್ರೇಮ ಲೋಕದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳ ಬಾಳಲ್ಲಿ ಸುನಾಮಿ…

ಅವರಿಬ್ಬರು ಎದುರು ಬದುರು ಮನೆಯವರು. ಅವನು ಐಟಿಐ ಮುಗಿಸಿ ಕೆಲಸಕ್ಕೆ ಹೋಗ್ತಿದ್ರೆ ಅವನ ಎದುರು ಮನೆಯಲ್ಲಿದ್ದ ಹುಡುಗಿ ಇನ್ನೂ ಪಿ.ಯು.ಸಿ ಓದುತ್ತಿದ್ಲು. ಇಬ್ಬರೂ ಒಟ್ಟಿಗೆ ಆಡಿ ಬೆಳದಿದ್ರೂ ಇಬ್ಬರ ಮಧ್ಯೆ 6 ವರ್ಷದ ಹಿಂದೆ ಪ್ರೀತಿ(Love) ಹುಟ್ಟಿತ್ತ.. ಯಾರಿಗೂ ಗೊತ್ತಾಗದ ಹಾಗೆ 6 ವರ್ಷ ಪ್ರೀತಿ ಮಾಡಿದ್ರು. ಅದೆಷ್ಟು ಡೀಪಾಗಿ ಲವ್ ಮಾಡ್ತಿದ್ರು ಅಂದ್ರೆ ಇಬ್ಬರೂ ಅದೆಷ್ಟೋ ದಿನಗಳನ್ನ ಏಕಾಂತವಾಗಿ ಕಳೆದಿದ್ರು. ಹೀಗೆ ಪ್ರೇಮ ಲೋಕದಲ್ಲಿ ವಿಹರಿಸುತ್ತಿದ್ದ ಇವರಿಬ್ಬರ ಬಾಳಲ್ಲಿ …

Read More »

ಶ್ರಾವಣ ಮಾಸದಲ್ಲಿ ಇಷ್ಟಲಿಂಗ ಪೂಜೆ ಮೂಲಕ ಮತ್ತೆ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ.

ಹುಬ್ಬಳ್ಳಿ: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೇವೆ. ಇದೇ ತಿಂಗಳಿನಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮೀಸಲಾತಿ ವಿಚಾರ ಇನ್ನೂ ನ್ಯಾಯಾಲಯದಲ್ಲಿದೆ. 2ಎ ಹಾಗೂ 2ಡಿ ಮೀಸಲಾತಿ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಸರ್ಕಾರಕ್ಕೂ ನಾವು ಮನವಿ ಮಾಡಿದ್ದೇವೆ. ಬಜೆಟ್ ಅಧಿವೇಶನದ ನಂತರ ಸಭೆ ಕರೆದು ಪರಿಶೀಲನೆ ಮಾಡುವುದಾಗಿ ಸಿಎಂ ಹೇಳಿದ್ದರು ಎಂದು ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. …

Read More »