BigTv News
December 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪೊಲೀಸರಿಂದ ಬಂಧಿತನಾಗಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿ, ಆತನ ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ನಶೆ ಬರುವ ಔಷಧಿ ಕೊಟ್ಟು ಬಲಾತ್ಕಾರ ಮಾಡಿದ ಆರೋಪ ಹೊರಿಸಲಾಗಿದೆ. ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ಆಕೆ ಮತ್ತೆ ಐದನೇ …
Read More »
BigTv News
December 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನ ಮಾಡಲಾಗಿದೆ.ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ.ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ ಎಂದರು.ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ,ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದರು.ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ.ದಲಿತರನ್ನ ಪ್ರಧಾನಿ ಅಭ್ಯರ್ಥಿಎಂದು ಘೋಷಣೆ ಮಾಡಿದವು ಆದರೆ …
Read More »
BigTv News
December 29, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಈಗ ಎಲ್ಲಿ ಕೇಳಿದರೂ ಎಲ್ಲಿ ನೋಡಿದರೂ ಒಂದೇ ಸೌಂಡು ಅದು ಕಾಟೇರ. ಹೌದು, ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಸಿ ಬೊಬ್ಬರಿಯುತ್ತಿದೆ. ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಟ ದರ್ಶನ ಅಭಿಮಾನಿಗಳು ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸಿನಿಮಾ ನೋಡಿದ ಪ್ರತಿಯೊಬ್ಬರಿಗೆ ಇಷ್ಟವಾಗುತ್ತಿದೆ. ಎಲ್ಲೆಡೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟಿದ್ದಾರೆ. ಅಲ್ದೇ ನಟ ದರ್ಶನ …
Read More »
BigTv News
December 29, 2023
ಕರ್ನಾಟಕ, ದಾವಣಗೆರೆ, ಸುದ್ದಿ
ದಾವಣಗೆರೆ: ಬಾಡಾ ರಸ್ತೆಯ ದ್ಯಾಮೇನಹಳ್ಳಿ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಟೊಮೆಟೋ ತುಂಬಿದ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹಾಗೂ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಉಮಾ ಪ್ರಶಾಂತ್ ಅವರು ಕರ್ತವ್ಯ ನಿಮಿತ್ತ ಸಂತೇಬೆನ್ನೂರು ಕಡೆ ಹೋಗುವಾಗ ಬಾಡಾ ರಸ್ತೆಯ ದ್ಯಾಮೇನಹಳ್ಳಿ ಗ್ರಾಮದ ಬಳಿ ರಾತ್ರಿ 9 ಗಂಟೆ ಸುಮಾರಿಗೆ …
Read More »
BigTv News
December 27, 2023
ದೇಶ-ವಿದೇಶ, ಸುದ್ದಿ
ಮುಂದಿನ ವರ್ಷ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಅಂತ ಈಗಾಗ್ಲೆ ಘೋಷಿಸಿಕೊಂಡಿದೆ. ಆದರೆ ಅಲ್ಲಿಯೂ ಹಿಂದೂ ಜನಾಂಗ ವಾಸವಿದೆ. ಇದೀಗ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಅಲ್ಲಿನ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪಾಕಿಸ್ತಾನದಲ್ಲಿ ಮಾತ್ರವಲ್ಲ ಭಾರತದಲ್ಲೂ ಅವರು ಸದ್ದು ಮಾಡ್ತಿದ್ದಾರೆ. ಫೆಬ್ರವರಿ 8, 2024 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ಇದೆ. ಇತ್ತ ಭಾರತಲ್ಲೂ ಈ ಚುನಾವಣೆ ಸಿಕ್ಕಾಪಟ್ಟೆ …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಡಿಸೆಂಬರ್ ತಿಂಗಳು ಕನ್ನಡ ಚಿತ್ರರಂಗಕ್ಕೆ ಅಶುಭ ಅನ್ನೋದು ಮತ್ತೊಮ್ಮೆ ಸಾಬೀತಾಗುತ್ತಿದೆ. ಇತ್ತೀಚೆಗೆ ಹಿರಿಯ ನಟಿ ಲೀಲಾವತಿ ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಇನ್ನೇನು ಸಿನಿಪ್ರೇಮಿಗಳು ಆ ನೋವನ್ನು ಮರೆಯಲು ಯತ್ನಿಸುತ್ತಿರುವಾಗಲೇ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಜನಪ್ರಿಯ ಸ್ಟಂಟ್ ಡೈರೆಕ್ಟರ್ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 26)ಹೃದಯಾಘಾತದಿಂದ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. 57 ವರ್ಷ ಜಾಲಿ ಬಾಸ್ಟಿನ್ ಕನ್ನಡದ …
Read More »
BigTv News
December 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಆದೇಶ 1/1/2024ರಿಂದ ಜಾರಿಗೆ ಬರುತ್ತದೆ. ಈ ಕುರಿತು ಕರಾರಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ. ವಿ. ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ/ ಅಧ್ಯಕ್ಷರು ಕರಾರಸಾ ನಿಗಮ ಪ್ರಯಾಣಿಕರ ಅಪನಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಅಪಘಾತ ಪರಿಹಾರ …
Read More »
BigTv News
December 27, 2023
ಕರ್ನಾಟಕ, ಸಿನಿಮಾ, ಸುದ್ದಿ
ಡಿಸೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಪಂದ್ಯಾವಳಿಗೆ ತೆರೆ ಬಿದ್ದಿದೆ.ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡವು ಶಿವರಾಜ್‌ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯಾವಳಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರು, ಧಾರಾವಾಹಿ ನಟರು, ತಂತ್ರಜ್ಞರ ಜೊತೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರು …
Read More »
BigTv News
December 27, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್‌ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್‌ಸಿಂಹ ಹಾಗೂ ಮನೋರಂಜನ್‌ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು …
Read More »