Breaking News

ಸುದ್ದಿ

ಮದುವೆ ಆಗೋಕೆ ನಿರಾಕರಿಸಿದ್ದಕ್ಕೆ ಈ ರೀತಿ ಮಾಡೋದಾ ? ಆಟೋ,ಮನೆಗೆ ಬೆಂಕಿ ಇಟ್ಟ ಮಹಿಳೆ

ಬೀದರ್: ಮದುವೆಯಾಗಲು ನಿರಾಕರಿಸಿದ ವ್ಯಕ್ತಿಯ ಮನೆ ಹಾಗೂ ಆಟೋಗೆ ಮಹಿಳೆ ಬೆಂಕಿ ಹಚ್ಚಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಾಗ್ ಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಭೀಮರಾವ್ ಎಂಬಾತ ಸುಮಾ ಎಂಬ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದರು. ಈ ಸಿಟ್ಟಿನಿಂದ ಊರು ಬಿಟ್ಟರೂ ವ್ಯಕ್ತಿ ನೆಲೆಸಿದ್ದ ಸ್ಥಳಕ್ಕೆ ಹೋಗಿ ಮಹಿಳೆ ಮನೆ ಹಾಗೂ ಆಟೋಗೆ ಬೆಂಕಿ ಹಾಕಿದ್ದಾಳೆ. ಮೂಲತಃ ಚಿಕನಾಗಾಂವ್ ಗ್ರಾಮದ ನಿವಾಸಿಯಾಗಿದ್ದ ಭೀಮರಾವ್ ಕೆಲವು ದಿನಗಳಿಂದ ಸಸ್ತಾಪೂರ್ ಗ್ರಾಮದ ಸಮೀಪದ ಅಡವಿಯಲ್ಲಿ …

Read More »

ವರಿಷ್ಠರ ನಂಬಿಕೆಯಂತೆ ಕೆಲಸ ಮಾಡುತ್ತೇನೆ: 2023ರ ಚುನಾವಣೆಯಲ್ಲಿ ಜಯದ ಭರವಸೆ ನೀಡಿದ ಸಿಎಂ

ಹುಬ್ಬಳ್ಳಿ: 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿ. ಇವಾಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಸ್ಟಾರ್ಟ್ ಮಾಡುತ್ತೇನೆ. ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ‌. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ. ಕಾರ್ಯಕಾರಣಿಯಲ್ಲಿ ಕೆಲ …

Read More »

ಪತಿ ಬಿಟ್ಟಾಕೆ ಪ್ರಿಯಕರನೊಂದಿಗೂ ಜಗಳ ಮಾಡಿಕೊಂಡು ಕೊಲೆಯಾದ್ಲು!

ಆನೇಕಲ್: ಪತಿಯಿಂದ ದೂರವಾಗಿದ್ದ ಮಹಿಳೆ ಆಸ್ತಿ ವಿಚಾರಕ್ಕೆ ಪ್ರಿಯಕರನೊಂದಿಗೆ ಜಗಳ ಮಾಡಿಕೊಂಡು ಆತನಿಂದಲೇ ಕೊಲೆಯಾಗಿರುವ ಘಟನೆ ಬೆಂಗಳೂರು ಹೊಸೂರು ಮುಖ್ಯ ರಸ್ತೆ ಹೊಸರೋಡ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ. ಪ್ರಿಯಕರ ನವೀನ್ ಕುಮಾರ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇವರು ಆನೇಕಲ್ ತಾಲೂಕಿನ ಜಿಗಣಿ ನಿವಾಸಿಯಾಗಿದ್ದರು.ಅರ್ಚನಾ ರೆಡ್ಡಿ 5 ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದು, ನಂತರದ ದಿನಗಳಲ್ಲಿ ಪ್ರಿಯಕರ ನವೀನ್ ಕುಮಾರ್ ಜೊತೆ ಇದ್ದಳು. ಇತ್ತೀಚೆಗೆ ಚನ್ನಪಟ್ಟಣ ಬಳಿಯ ಆಸ್ತಿಯೊಂದರ …

Read More »

ಬಿಜೆಪಿ ಕಾರ್ಯಕಾರಣಿ ಸಭೆಗೆ ಸಕಲ ಸಿದ್ಧತೆ: ಮಹತ್ವದ ಚರ್ಚೆ ಕ್ಷಣಗಣನೆ…!

ಹುಬ್ಬಳ್ಳಿ: ಸತತ 10 ವರ್ಷಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಸಜ್ಜುಗೊಂಡಿದ್ದು, ಕಮಲ ಪಡೆಯ ನಾಯಕರ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಕಲ‌ ಸಿದ್ಧತೆ ನಡೆದಿದ್ದು, ಇಡೀ ನಗರ ಕೇಸರೀಮಯವಾಗಿ ರಾರಾಜಿಸುತ್ತಿದೆ. ಸತತ 10 ವರ್ಷಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ …

Read More »

ಹೊಸ ವರ್ಷಕ್ಕೆ ಜನ ಓಡಾಡುವಂತಿಲ್ಲ; ಕರ್ಫ್ಯೂ ಉಲ್ಲಂಘಿಸಿದರೆ NDMA ಅಡಿ ಕೇಸ್ ದಾಖಲು; ಕಮಲ್ ಪಂತ್ ಎಚ್ಚರಿಕೆ

ಬೆಂಗಳೂರು: ಒಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಡಿಸೆಂಬರ್ 28ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಯಾರೂ ಹೊರಗಡೆ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಎಲ್ಲೆಡೆ ನಾಕಾಬಂದಿ ಹಾಕಿ ನಿರ್ಬಂಧ ವಿಧಿಸಲಾಗುತ್ತಿದೆ ಎಂದರು. ಬಸ್, ಕ್ಯಾಬ್ ಸೇವೆ ಇರಲಿದೆ. …

Read More »

ಮಾತೃ ಭಾಷೆ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ-ಕುಮಾರಸ್ವಾಮಿ

ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು …

Read More »

ಮಹಾತ್ಮ ಗಾಂಧಿಯನ್ನು ತೆಗಳಿದ್ದ ಹಿಂದೂ ಧಾರ್ಮಿಕ ಮುಖಂಡನ ವಿರುದ್ಧ ಎಫ್‌ಐಆರ್

ರಾಯ್‌ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ ‘ದ್ವೇಷಪೂರಿತ ಹಾಗೂ ಪ್ರಚೋದನಕಾರಿ’ ಹೇಳಿಕೆ ನೀಡಿದ ಆರೋಪದ ಮೇಲೆ ಛತ್ತೀಸ್‌ಗಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ರಾಯ್‌ಪುರದಲ್ಲಿ ನಡೆದ ಎರಡು ದಿನಗಳ ಧರ್ಮ ಸಂಸದ್‌ ಸಮ್ಮೇಳನದಲ್ಲಿ ಕಾಳಿಚರಣ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಿದ್ದರು ಮತ್ತು …

Read More »

ವಿ.ಡಿ. ಸಾವರ್ಕರ್ ಕುರಿತ ಹೇಳಿಕೆ ವಿವಾದ: ಸಮಾಜವಾದಿ ನಾಯಕನಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಅಪರಿಚಿತ

ಪಾಟ್ನಾ: ಬಿಹಾರದ ಹಿರಿಯ ಸಮಾಜವಾದಿ ನಾಯಕ ಶಿವಾನಂದ ತಿವಾರಿ ಅವರೆ ಫೋನ್ ಕರೆ ಮಾಡಿದ ದುಷ್ಕರ್ಮಿಯೋರ್ವ ನಿಂದಿಸಿದ್ದಲ್ಲದೆ, ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಶಿವಾನಂದ ತಿವಾರಿ ಅವರು ಇತ್ತೀಚಿಗಷ್ಟೆ ಪತ್ರಿಕಾ ಸಂದರ್ಶನವೊಂದರಲ್ಲಿ ವಿ.ಡಿ ಸಾವರ್ಕರ್ ಕುರಿತಾಗಿ ಹೇಳಿಕೆಯನ್ನು ನೀಡಿದ್ದರು. ಆ ಸಂದರ್ಶನದಲ್ಲಿ ಸಾವರ್ಕರ್ ಅವರಿಗೆ ಗೋವನ್ನು ಪೂಜಿಸುವ ಪರಿಕಲ್ಪನೆ ಸುತಾರಾಂ ಇಷ್ಟವಿರಲಿಲ್ಲ ಎಂದಿದ್ದರು. ಶಿವಾನಂದ ತಿವಾರಿ ಅವರು ಜಯಪ್ರಕಾಶ್ ನಾರಾಯಣ್ ಹಾಗೂ ರಾಮಮನೋಹರ್ ಲೋಹಿಯ ಥರದ ಮಹಾನ್ ನಾಯಕರೊಡನೆ ಅವರೊಂದಿಗೆ ಕೆಲಸ …

Read More »

ಕೆಲಗೇರಿ ಕೆರೆಯಲ್ಲಿ ಹಾರಿ ಗೃಹಿಣಿಯೊರ್ವಳು ಆತ್ಮಹತ್ಯೆ

ಧಾರವಾಡ: ಧಾರವಾಡದ ಕೆಲಗೇರಿ ಕೆರೆಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಧಾರವಾಡ ಸಂತೋಷನಗರದ ನಿವಾಸಿ ಅನಿತಾ ಹೆಗಡೆ ಎಂಬುವವರೇ ಸಾವನ್ನಪ್ಪಿದವರು. ಅನಿತಾ ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಹಲವು ದಿನಗಳಿಂದ ಧಾರವಾಡದ ಡಿಮಾನ್ಸ್‌ನಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗಿನಜಾವ ಏಕಾಏಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Read More »

ಕೋವಿಡ್ ಪ್ರಕರಣಗಳ ಹೆಚ್ಚಳ: ದೆಹಲಿಯಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಮತ್ತು ಓಮೈಕ್ರಾನ್ ಆತಂಕದ ನಡುವೆ ದೆಹಲಿಯಲ್ಲಿ ಇಂದಿನಿಂದ (ಡಿ.27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫ್ಯೂ ವಿಧಿಸಿ ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಆದೇಶಿಸಿದೆ. ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಅಧಿಕ 142 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ನ್ಯಾಯಾಂಗದ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಗರ್ಭಿಣಿಯರು ಮತ್ತು …

Read More »