Breaking News

ಸುದ್ದಿ

ಪಾಠ ಮಾಡುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ- ಮಕ್ಕಳ ಆಕ್ರಂದನ

ಮಂಡ್ಯ: ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) ಎಂಬುವವರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಶಿಕ್ಷಕರು.

Read More »

ರಾಮಮಂದಿರ ಟ್ರಸ್ಟ್ ಭೂ ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿ – ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ

ನವದೆಹಲಿ : ಮರ್ಯಾದ ಪುರುಷೋತ್ತಮ ಶ್ರೀರಾಮ ಹೆಸರಿನಲ್ಲಿ ಅಯೋಧ್ಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಬಾರಿ ಬೆಲೆಗೆ ಶ್ರೀರಾಮ ಮಂದಿರ ನಿರ್ಮಾಣ ಟ್ರಸ್ಟ್ ಭೂಮಿ ಖರೀದಿಸುತ್ತಿದೆ ಎಂದು ಹೇಳಿದ್ದಾರೆ.ಶ್ರೀರಾಮ ಮಂದಿರ ನಿರ್ಮಾಣ ಘೋಷಣೆ ಬಳಿಕ ದೇವಸ್ಥಾನದ ಸುತ್ತಲಿನ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ಇದನ್ನೇ ಬಂಡವಾಳ …

Read More »

ಸಾರಿಗೆ ಸಂಸ್ಥೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಧಾರವಾಡ: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಸಮೀಪ ನಡೆದಿದೆ. ಮುಳಮುತ್ತಲ ಗ್ರಾಮದ ಚನ್ನಪ್ಪ ಬಸಪ್ಪ ಬನವಣ್ಣವರ (21) ಎಂಬ ಯುವಕನೇ ಸಾವನ್ನಪ್ಪಿದವನು. ಈತ ಬೈಕ್ ತೆಗೆದುಕೊಂಡು ಧಾರವಾಡ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಧಾರವಾಡ ಕಡೆಯಿಂದ ಯಾದವಾಡ ಕಡೆಗೆ ಬರುತ್ತಿದ್ದ ಬಸ್ಸು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯುವಕ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. …

Read More »

ಉದ್ಯಾನವನದ ಜಾಗದಲ್ಲಿ ಗುಡಿಸಲು : ಮಹಾನಗರ ಪಾಲಿಕ ಅಧಿಕಾರಿಗಳಿಂದ ತೆರವು

ನೂರಾರು ಸ್ಲಂ ನಿವಾಸಿಗಳಿಂದ ಕಟ್ಟಿ ಕೊಂಡಿದ್ದ ಗುಡಿಸಲು ಮಹಾನಗರ ಪಾಲಿಕೆ ಅಧಿಕರಿಗಳು ಪೊಲೀಸರು ಸೇರಿ ತೆರವು ನಂದಿನಿ ಲೇಔಟ್‌ನ ಉದ್ಯನವನದಲ್ಲಿ ಗುಡಿಸಲು ಹಾಕಿಕೊಂಡು ವಾಸಿಸಲು ಪ್ರಯತ್ನ ಈ ಸಮಯದಲ್ಲಿ ಪಾಲಿಕೆ ಅಧಿಕಾರಿಗಳಿಗೆ ಮತ್ತು ಸ್ಲಂ ನಿವಾಸಿಗಳ ಮಾತಿ ಚಕಮಕಿಯಾಯಿತು. ಹುಬ್ಬಳ್ಳಿ: ಪಾಲಿಕೆಯ ಉದ್ಯನವನದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡು ವಾಸಿಸಲು ಸೇರಿದ್ದ ನೂರಾರು ಸ್ಲಂ ನಿವಾಸಿಗಳನ್ನು ಅಲ್ಲಿಂದ ಮಹಾನಗರ ಪಾಲಿಕೆ ಅಕಾರಿಗಳು ಪೊಲೀಸರು ಸೇರಿ ತೆರವುಗೊಳಿಸಿದ್ದಾರೆ.ಇಲ್ಲಿಯ ಅಕ್ಷಪಾರ್ಕ್‌ನಿಂದ ಆನಂದ ನಗರಕ್ಕೆ …

Read More »

ದೈಹಿಕ ಶಿಕ್ಷಕರ ಪ್ರತಿಭಟನೆ ಬೆಳಗಾವಿಯ ಸುವರ್ಣ ಸೌಧ ದ ಮುಂದೆ ಹೋರಾಟ

ಬೆಳಗಾವಿ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದೈಹಿಕ ಶಿಕ್ಷಕರ ಪ್ರತಿಭಟನೆ ಮುಂದುವರೆದಿದೆ.ಹೌದು ಕಳೆದ ಒಂದು ವಾರದಿಂದ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ದೈಹಿಕ ಶಿಕ್ಷಕರು ಬೇಡಿಕೆಗಳನ್ನು ಈಡೇರಿಕೆಗೆ ಪಟ್ಟು ಹಿಡಿದು ಈ ಒಂದು ಪ್ರತಿಭಟನೆ ಮಾಡತಾ ಇದ್ದಾರೆ ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಈ ಒಂದು ಪ್ರತಿಭಟನೆ ನಡೆಯುತ್ತಿದ್ದು ಇಂದು ಕೂಡಾ ಮುಂದುವರಿದಿ ದ್ದು ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಪ್ರತಿಭಟ ನೆಯಲ್ಲಿ ನೂರಾರು ಶಿಕ್ಷಕರು ಭಾಗಿಯಾಗಿದ್ದಾರೆ. ದೈಹಿಕ …

Read More »

ಹರ್ಷ ಕಾಂಪ್ಲೆಕ್ಸ್ ನ ಎಲೆಕ್ಟ್ರಾನಿಕ್ ವಸ್ತುಗಳ ಮಳಿಗೆಗೆ ಬೆಂಕಿ- ಲಕ್ಷಾಂತರ ಹಾನಿ‌..

ಹುಬ್ಬಳ್ಳಿ ನಗರದ ಹರ್ಷ ಕಾಂಪ್ಲೆಕ್ಸ್ ನಲ್ಲಿರುವ ಇಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಹರ್ಷ ಕಾಂಪ್ಲೆಕ್ಸ ನ ಎರಡನೇ ಮಹಡಿಯಲ್ಲಿರುವ ಹರ್ಷ ಎಲೆಕ್ಟ್ರಾನಿಕ್ ವಸ್ತುಗಳ ಸರ್ವಿಸ್ ಸೆಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಸೆಂಟರ್ ನಲ್ಲಿನ ವಸ್ತುಗಳಿಗೆ ವ್ಯಾಪಿಸಿದ ಪರಿಣಾಮ ಲಕ್ಷಾಂತರ ರೂಪಾಯಿ‌ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇದೇ ಕಾಂಪ್ಲೆಕ್ಸ್ …

Read More »

2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ

ಪಟ್ನಾ: ಎರಡು ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಸಂದೇಶ ಬಂದಿರುವುದು ಅಚ್ಚರಿ ಮೂಡಿಸಿದೆ. ಮೃತ ಮಹಿಳೆಯ ಪತಿ ಬಳಿ ಇದ್ದ ಮೊಬೈಲ್‍ಗೆ ಈ ಸಂದೇಶ ಬಂದಿದೆ. ಲಾಲೊ ದೇವಿ ಅವರ ಪತಿ ರಾಮ್ ಉದ್ಗಾರ್ ಥಾಕೂರ್ ಈ ಕುರಿತು ಪ್ರತಿಕ್ರಿಯಿಸಿ, ನನ್ನ ಪತ್ನಿ ಜ್ವರ, ಅಸ್ವಸ್ಥತೆ ಕಾರಣದಿಂದಾಗಿ ಸೆಪ್ಟೆಂಬರ್ 19ರಂದು ನಿಧನರಾದರು. ಬಿಹಾರ್‍ನ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯಿಂದ ನೀಡಲಾಗಿರುವ ಮರಣ ಪ್ರಮಾಣ …

Read More »

ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ ಬಾಗಿಲು ಮುಚ್ಚಿ ನವವಧುವಿನ ಕೊಲೆ?

ಹಾಸನ: ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನಮ್ಮ ಮಗಳು …

Read More »

ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್

ಲಕ್ನೋ: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ. ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ …

Read More »

ಜನರ ಭಾವನೆಗಳನ್ನು ಬೇರೆಡೆ ಸೆಳೆಯಲು ಬಿಜೆಪಿ ಸಂವಿಧಾನ ಬಾಹಿರ ಕಾನೂನು ಜಾರಿಗೆ ತರುತ್ತಿದೆ-ಸಿದ್ಧರಾಮಯ್ಯ

ಬೆಳಗಾವಿ: ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಕಳ್ಳರ ಹಾಗೆ ಜಾರಿಗೆ ತಂದಿದ್ದಾರೆ. ಹೀಗಾಗಿ, ಸದನದ ಹೊರಗೆ ಮತ್ತು ಒಳಗೂ ಕಾನೂನು‌ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದವರು ಸಂವಿಧಾನ ಬಾಹಿರ ಕಾನೂನು ಜಾರಿಗೆ ತರುತ್ತಿದ್ದಾರೆ. ಇವತ್ತಿನವರೆಗೆ ಆಮಿಷ ಹಾಗೂ ಪ್ರಚೋದನೆಗಳಿಗೆ ಮತಾಂತರವಾಗಿದ್ದು ಬಹಳ ಕಡಿಮೆ. ಏನಾದರೂ ಮತಾಂತರವಾಗಿದ್ದರೆ ಜಾತಿ ವ್ಯವಸ್ಥೆ, ಅಸ್ಪೃಶ್ಯತೆಯಿಂದ ಅವಮಾನವಾಗಿ ಆರ್ಥಿಕ …

Read More »