admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಭಾರೀ ಮಳೆಯ ಪರಿಣಾಮ ನಡು ಗಡ್ಡೆಯಲ್ಲಿ ಸಿಲುಕಿದ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ. ಬಸವರಾಜ ಮಾಣಿಕ ಕಾಂಬಳೆ (15) ಎಂಬವವನು ಮೃತ ಯುವಕ. ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಪರಿಣಾಮ ಘಟನೆ ಜರುಗಿದೆ. ನಡುಗಡ್ಡೆಯಲ್ಲಿ ಸಿಲುಕಿದ ಯುವಕನ ಕಳೆಬರವನ್ನು ಸ್ಥಳೀಯರು ಶೋಧಿಸಿ ತೆಗೆದಿದ್ದಾರೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಪಟ್ಟಣದ ಪುರಸಭಾ ಮುಖ್ಯ ಅಧಿಕಾರಿಯಾದ ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಅಂಗಡಿಗಳು ಮೇಲೆ ದಾಳಿ 220 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ ..ನಂತರ ಮಾತನಾಡಿದ ಸತೀಶ್ ಕುಮಾರ್ ಅವರು ಬೆಳಿಗ್ಗೆ ಎರಡು ಅಂಗಡಿಯ ಮೇಲೆ ದಾಳಿ ಮಾಡಿದ್ದೇವೆ . ಪರಿಸರ ಹಾಳಾಗುತ್ತಿದ್ದು ದಿನನಿತ್ಯ ಪ್ಲಾಸ್ಟಿಕನ್ನು ಬಳಕೆಯಿಂದ ಹಲವಾರು ಕಾಯಿಲೆಗಳು ಬರುತ್ತಿದ್ದು , ದಿನೇ ದಿನೆ ಮಳೆ ಬರುತ್ತಿದ್ದು ಪ್ಲಾಸ್ಟಿಕ್ ಬಳಕೆಯಿಂದ ಮಲೇರಿಯಾ ಕಾಯಿಲೆಗಳು ಉಂಟಾಗುತ್ತದೆ , ಪರಿಸರ ಸಮೃದ್ಧಿ …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ನಿಂತಿದ್ದ ಟಿಪ್ಪರ್ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಸಾತನೂರು ರಸ್ತೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ಸಾತನೂರು ರಸ್ತೆಕಬ್ಬಾಳಿನಿಂದ ಚನ್ನಪಟ್ಟಣ ಮಾರ್ಗವಾಗಿ ಬರುತ್ತಿದ್ದ ಬಸ್ಸು ನಿಂತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಪರಿಣಾಮ15 ಜನರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಚನ್ನಪಟ್ಟಣ ಟೌನ್ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಟ್ರಾಫಿಕ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ.ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ, ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು, ಬಾಗಲಕೋಟ ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿಗಳು ಬಂದ್ ಆಗಿದೆ.ಅಲ್ಲದೇ ಮಳೆ ಪರಿಣಾಮವಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಅಥಣಿ ತಾಲೂಕಿನ ದರೂರ ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ ನೀಡಲಾಗಿದ್ದು, ಪೋಲಿಸ್ ಸಿಬ್ಬಂದಿ ಬ್ಯಾರಿಕೇಡ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ದಂಡೆಯ ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿಕೊಂಡಿದ್ದಾರೆ.ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ನದಿಗೆಇಂದು ಬೆಳಿಗ್ಗೆ 8 ಗಂಟೆಯವರೆಗೆ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದು 4 ಲಕ್ಷ ಕ್ಯೂಸೆಕ್ ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ಹಿಡಕಲ್ ಜಲಾಶಯ ಕೂಡ ಭರ್ತಿಯಾಗಿದ್ದು, …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಮಂಡ್ಯದ ಎಡದಂಡೆ ನಾಲೆ ಗೊರೂರ್ ಹೇಮಾವತಿ ನೀರನ್ನು ಕೆರೆ ಕಟ್ಟೆಗಳನ್ನು ತುಂಬಿಸಲು ಅನುಕೂಲವಾಗುವಂತೆ ನಾಳೆಯಿಂದಲೇ ಗೊರೂರು ಜಲಾಶಯದ ಎಡದಂಡೆನಾಲೆಯಾದ ಸಾಹುಕಾರ್ ಚನ್ನಯ್ಯ ಮುಖ್ಯನಾಲೆಯಲ್ಲಿ 1200ಕ್ಯೂಸೆಕ್ಸ್ ನೀರನ್ನು ಹರಿಸುವುದಾಗಿ ಹೇಮಾವತಿ ಜಲಾಶಯ ಯೋಜನೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಮೋಹನರಾಜ ಅರಸ್ ಘೊಷಣೆ ಮಾಡಿದರು.ರೈತರ ಹೋರಾಟಕ್ಕೆ ಮಣಿದ ಸರ್ಕಾರ ಹೇಮಾವತಿ ನದಿ ಕಾಲುವೆಗಳಾದ ಹೇಮಗಿರಿನಾಲೆ ಮತ್ತು ಮಂದಗೆರೆ ಎಡದಂಡೆ ಹಾಗೂ ಬಲದಂಡೆ ನಾಲೆಗಳಿಗೂ ನೀರು ಹರಿಸಲು ಕ್ರಮಕೈಗೊಳ್ಳುವುದಾಗಿ ಪ್ರತಿಭಟನಾನಿರತ ರೈತರಿಗೆ ಎಸ್ ಇ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಮಳೆ ಮತ್ತಷ್ಟು ತೀವ್ರಗೊಳ್ಳಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳ ಪದವಿ ತರಗತಿವರೆಗೆ ರಜೆ ಘೋಷಿಸಿಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ತಗ್ಗು ಇರುವ ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸುವಂತೆಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮೀನುಗಾರರು …
Read More »
admin
September 12, 2019
ಕರ್ನಾಟಕ, ಸುದ್ದಿ
ಕೂಡ್ಲಿಗಿ: ಆಂದ್ರಪ್ರದೇಶದ ರಾಯದುಗ೯ ಬಳಿಯ ಸೋಮಲಾಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಗೋಪುರಕ್ಕೆ ನೂತನ ಕಳಸ ಪ್ರತಿಷ್ಠಾಪನೆ ಕಾಯ೯ಕ್ರಮ ಜರುಗಿತು.ಧಾಮಿ೯ಕ ವಿಧಿ ವಿಧಾನಗಳೊಂದಿಗೆ ಕಾಯ೯ಕ್ರಮ ಜರುಗಿಸಲಾಯಿತು.ಸೋಮಲಾಪುರಗ್ರಾಮದ ಸುತ್ತಲಿನಗ್ರಾಮಗಳ ಹಾಗೂ ರಾಯದುಗ೯ ಭಾಗದ ಸಾವಿರಾರು ಭಕ್ತರು ಸೇರಿದಂತೆ ವಿವಿದ ಜಿಲ್ಲೆಗಳ.ನೆರೆ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರೆಂದು ಪ್ರತ್ಯಕ್ಷದಶಿ೯ ಕೂಡ್ಲಿಗಿಯ ದಿನಪತ್ರಿಕೆಗಳ ಏಜಂಟ್ ಹಾಗೂ ವರದಿಗಾರ ಕೆ.ಎಸ್.ಮುರುಳೀಧರಶೆಟ್ರುತಿಳಿಸಿದ್ದಾರೆ. ನೆರೆದಭಕ್ತರು ಕಾಯ೯ಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಕಾಯ೯ಕ್ರಮವನ್ನು ಯಶಸ್ವೀಗೊಳಿಸೋ ಮೂಲಕ ಶ್ರೀ ಆಂಜನೇಯಸ್ವಾಮಿ ಕೃಪೆಗೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮುಂದುವರೆದ ಬಾರೀ ಮಳೆಯಿಂದಾಗಿ ಚಿಕ್ಕೋಡಿ ಭಾಗದ ಜನ ತತ್ತರಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿಗ್ರಾಮ ಪಂಚಾಯತಿ ಒಳಗಡೆ ನೀರು ನುಗ್ಗಿದೆ.ಎಸ್ ಡಿ ಆರ್ ಎಪ್, ಭಾರತೀಯ ಸೇನೆ, ಪೊಲೀಸ್ ಇಲಾಖೆ ಸೇರಿ ಕಾರ್ಯಾಚರಣೆ ಮುಂದುವರೆದಿದ್ದು,ಬಾವನ ಸೌಂದತ್ತಿಯಲ್ಲಿ ೨೦ ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ(7) ಮೃತ ದುರ್ದೈವಿಯಾಗಿದ್ದಾರೆ.ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು.ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆ …
Read More »