Welcome to bigtvnews   Click to listen highlighted text! Welcome to bigtvnews
Breaking News

ರಾಜಕೀಯ

ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

ಚಿತ್ರದುರ್ಗ: ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವೆಂದೇಮಾತರಂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕಾರ್ಯಕರ್ತರು ಇಂದು ಚಿತ್ರದುರ್ಗದ ಬಾಜಪಾ ಕಛೇರಿ ಮುಂದೆ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.ಕಳೆದ 5 ಬಾರಿ ಚಿತ್ರದುರ್ಗ ನಗರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರ ಹಿರಿಯತಕ್ಕೆ ಅನುಗುಣಗಾಗಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

Read More »

ಬಿಜೆಪಿಗೆ ಒಂದು ವಾರದೊಳಗೆ ಬಹುಮತ ಸಾಬೀತಿಗೆ ರಾಜ್ಯಪಾಲ ವಜೂಬಾಯಿ ವಾಲಾ ಸೂಚನೆ

ಬೆಂಗಳೂರು: ಹೊಸ ಸರಕಾರ ರಚನೆಗೆ ಹಕ್ಕು ಮಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಒಂದು ವಾರದೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಸೂಚನೆ ನೀಡಿದ್ದಾರೆ. 2018ರಲ್ಲಿ ಯಡಿಯೂರಪ್ಪ ಸರಕಾರ ರಚನೆಗೆ ಹಕ್ಕು ಮಂಡಿಸಿದ ಸಂದರ್ಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ 15 ದಿನಗಳ ಕಾಲಾವಕಾಶ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ವಿಧಾನಸಭೆಯಲ್ಲಿ ಸದ್ಯದ ಒಟ್ಟು ಸದಸ್ಯ ಬಲ ಸ್ಪೀಕರ್ ಸೇರಿ 222. ಓರ್ವ ಪಕ್ಷೇತರ ಸದಸ್ಯನ …

Read More »

ಇಂದೇ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ವೈ

ಬೆಂಗಳೂರು:ಬಿಎಸ್​​ ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ಬಾಲಾಂಜನೇಯ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದ ಬಿಎಸ್​​ ಯಡಿಯೂರಪ್ಪ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ್ರು. ಪುತ್ರ ರಾಘವೇಂದ್ರ, ಶಾಸಕರಾದ ರಘುಪತಿ ಭಟ್ ಸಹಿತ ಹಲವು ಶಾಸಕರೊಂದಿಗೆ ರಾಜ್ಯಪಾಲರನ್ನ ಭೇಟಿಯಾಗಿ ಸರ್ಕಾರ …

Read More »

ಸರ್ಕಾರ ರಚನೆಯ ತವಕದಲ್ಲಿರುವ ಬಿಜೆಪಿಗೆ ಎದುರಾಗಿದೆಯಾ ಬಿಗ್ ಶಾಕ್..!?

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ ನಾಯಕರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.ದೆಹಲಿ ಕಡೆಗೆ ಮುಖ ಮಾಡಿರುವ ರಾಜ್ಯ ಬಿಜೆಪಿ ನಾಯಕರು ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದಾರೆ. ಆದರೆ, ರಾಜ್ಯದ ಬೆಳವಣಿಗೆಗಳ ಮೇಲೆ ನಿಗಾ ವಹಿಸಿರುವ ಬಿಜೆಪಿ ವರಿಷ್ಠರು ಅಷ್ಟು ಸುಲಭಕ್ಕೆ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಗ್ಯಾರಂಟಿ ಎನ್ನಲಾಗಿದೆ. ಸ್ಪೀಕರ್ …

Read More »

ರಾಜೀನಾಮೆ ನೀಡಿದ್ದ 8 ಅತೃಪ್ತ ಶಾಸಕರು ಯು ಟರ್ನ್.?

ಬೆಂಗಳೂರು: ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಪಕ್ಷಾಂತರ ನಿಷೇಧ ಮಸೂದೆ ಉಲ್ಲಂಘಿಸಿದ ಕಾರಣ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದಾರೆ.ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ ಕುಮಟಳ್ಳಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿದ್ದ ಕೆಪಿಜೆಪಿ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ. ಉಳಿದ ಶಾಸಕರ ಮೇಲೆಯೂ ತೂಗುಕತ್ತಿ ಇದ್ದು ಅನರ್ಹಗೊಂಡರೆ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಒಂದಿಷ್ಟು ಅತೃಪ್ತ ಶಾಸಕರು ವಾಪಸ್ ಬರಲು ಮುಂದಾಗಿದ್ದಾರೆ ಎನ್ನಲಾಗಿದೆ.ಉಳಿದ ಶಾಸಕರ ಬಗ್ಗೆಯೂ ಶೀಘ್ರವೇ ತೀರ್ಮಾನ …

Read More »

ರಾಜೀನಾಮೆ ನೀಡಿದ ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ನಿರ್ಧಾರ

ಬೆಂಗಳೂರು:ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ವಾತಾವರಣ ಕಂಡುಬಂದಿದೆ. ಮಧ್ಯಂತರ ಚುನಾವಣೆ ಎದುರಾದರೂ ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಜೆಡಿಎಸ್ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ಪಕ್ಷದ ನಾಯಕರ ಸಭೆ ನಡೆದಿದ್ದು, ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಬೇಕು. ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ಎಲ್ಲಾ ನಾಯಕರು ಶ್ರಮಿಸಬೇಕು ಎಂದು ಸೂಚನೆ ನೀಡಲಾಗಿದೆ.ಇನ್ನು ಸರ್ಕಾರ ಪತನಗೊಂಡು ಅನಿಶ್ಚಿತ ವಾತಾವರಣ ನಿರ್ಮಾಣವಾಗಿರುವುದರಿಂದ …

Read More »

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಬೆಂಗಳೂರು: ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದುಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು …

Read More »

ಹಠಮಾರಿತನದಿಂದ ಗೆದ್ದು ಸೋಲನ್ನು ಅನುಭವಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ: ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡೂ ದಶಕಗಳಿಂದ ಬೇರುಮಟ್ಟದಲ್ಲಿ ಕಾಂಗ್ರೆಸ್ ಬೆಳೆಸಿ ಬೆಳಗಾವಿ ಜಿಲ್ಲೆಗೆ ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಕೇವಲ ಬೆಳಗಾವಿ ತಾಲೂಕಿನ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ಸಲುವಾಗಿ ತನ್ನ ಹಠಮಾರಿತನದಿಂದ ಸರಕಾರ ಪತನಗೊಳಿಸಿ ಗೆಲವು ಸಾಧಿಸಿದರೂ ಕೊನೆ ಗಳಿಯಲ್ಲಿ ಸೋಲುವಂತಾಯಿತು.ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿ ಬುನಾದಿ ಹಾಕಿಕೊಟ್ಟ ಶ್ರೇಯ ಗೋಕಾಕ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಸಲ್ಲುತ್ತದೆ. ದಶಕಗಳಿಂದಲೂ ಬೆಳಗಾವಿ …

Read More »

ಅಮಂಗಳ ವಾರ ಮೈತ್ರಿ ಸರ್ಕಾರ ಪತನ! ಕುರ್ಚಿಯಿಂದ ಕೆಳಗಿಳಿದ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸ ಬಹು ಮತ ಪಡೆಯಲು ಫೇಲ್ ಆಗಿದ್ದು, ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮಂಗಳವಾರ ಸಂಜೆ ಪತನವಾಗಿದೆ.ಕಾಂಗ್ರೆಸ್ ಮತ್ತು ಜೆಡಿಎಸ್ ಅತೃಪ್ತ ಶಾಸಕರು ಮುಂಬೈನಲ್ಲಿದ್ದು, ಸರಕಾರ ಅಲ್ಪ ಮತಕ್ಕೆ ಕುಸಿದು ಸದನದಲ್ಲಿ ಕುಮಾರಸ್ವಾಮಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.ಮ್ಯಾಜಿಕ್ ನಂಬರ್ 103 ಆಗಿದ್ದು ಬಿಜೆಪಿ 105 ಶಾಸಕರ ಬೆಂಬಲ ಹೊಂದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪರ 99 ಶಾಸಕರು ಇದ್ದು ಕುಮಾರಸ್ವಾಮಿಗೆ ಸೋಲು …

Read More »

ಮೈತ್ರಿ ಸರ್ಕಾರದ ಪತನ ನಿಶ್ಚಿತ: ಈಶ್ವರಪ್ಪ ವಿಶ್ವಾಸ

ಕೋಲಾರ: ಮೈತ್ರಿ ಸರ್ಕಾರ ಸೋಮವಾರಕ್ಕೆ ಕೊನೆಯಾಗಲಿದೆ. ಹಾಗೂ ಬಿಜೆಪಿ ವಿಶ್ವಾಸ ಮತ ಯಾಚನೆ ಗೆಲ್ಲುವ ನಂಬಿಕೆಯಿದೆ ಎಂದು ಬಿಜೆಪಿ ಮುಖಂಡ ಕೆಎಸ್.ಈಶ್ವರಪ್ಪ ಹೇಳಿದರು.ಕೋಲಾರದಲ್ಲಿಂದು ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕುರುಡುಮಲೆಯ ಗಣಪತಿಯ ಆಶೀರ್ವಾದ ಬಿಜೆಪಿ ಮೇಲಿದೆ ಎಂದರು.‌ಬಳಿಕ ಮಾತನಾಡಿದ ಬಿಜೆಪಿ ಮುಖಂಡ ಸಿಟಿ.ರವಿ ಅವರು, ರಾಜ್ಯದಲ್ಲಿರುವುದು ದೋಸ್ತಿ ಸರ್ಕಾರವಲ್ಲ, ದುಶ್ಮನ್ ಗಳ ಸರ್ಕಾರ. ದೋಸ್ತಿಗಳು ಪರಸ್ಪರ ಮುಗಿಸಲು ಹೊರಟಿರುವುದು ಸ್ಪಷ್ಟ.ಈಗಿನದು ಆಪರೇಷನ್ ಕಮಲವಲ್ಲ, ರಾಜಕೀಯ …

Read More »
You cannot copy content of this page
Click to listen highlighted text!