Breaking News

ರಾಜಕೀಯ

ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ

ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ ಹುಬ್ಬಳ್ಳಿ: ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ ನಿರ್ಮಾಣವಾಗಿರುವ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ನಿರ್ಮಾಣ …

Read More »

ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಗೆ ಕೇಂದ್ರ ಅಡ್ಡಗಾಲು: ಸಚಿವ ಸಂತೋಷ ಲಾಡ್

ಹುಬ್ಬಳ್ಳಿ 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೇ ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ. ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು …

Read More »

ರಾಜ್ಯದ ಮೂರು ನಿಗಮ ಮಂಡಳಿ ಅಧ್ಯಕ್ಷರಾಗಿ ಸಚಿವ ಎಚ್.ಪಾಟೀಲ್ ಆಯ್ಕೆ

ರಾಜ್ಯ ಸರ್ಕಾರ ಮೂರು ನಿಗಮಗಳಿಗೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಸಚಿವ ಹೆಚ್ …

Read More »

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ …

Read More »

ತುಷ್ಟೀಕರಣ ರಾಜಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿ ವಾಪಸ್- ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನ ಒಲೈಸಿಕೊಳ್ಳಲು ತುಷ್ಟೀಕರಣ ರಾಜಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿ ವಾಪಸ್ ಪಡೆಯಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಸ್ವರೂಪದ ಆರೋಪ ಮಾಡಿದರು.ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮತಾಂತರ ಕಾಯ್ದೆ ಜಾರಿಗೆ ಸ್ವತಃ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯಾನವರೇ ಪ್ರಸ್ತಾಪ ಮಾಡಿದ್ದರು. ಈಗ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಅಗತ್ಯವಿರಲಿಲ್ಲ. …

Read More »

ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರಕಾರದಿಂದ ಅನ್ಯಾಯ ,ಡಿ.ಕೆ.ಶಿವಕುಮಾರ್ ಆಕ್ರೋಶ

ಮೈಸೂರು: ‘ನಾವು ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಉಚಿತವಾಗೇನೂ ಕೇಳಿರಲಿಲ್ಲ. ಆದರೆ, ಕೊಡುವುದಿಲ್ಲ ಎಂದು ಹೇಳಿದೆ. ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟವನ್ನೇ ರೂಪಿಸುತ್ತೇವೆ. ಈ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಮಾಹಿತಿ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.‘ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿಯನ್ನು ಜುಲೈ 1ರಿಂದ ಕೊಡಬೇಕೆಂದು ತೀರ್ಮಾನಿಸಿದ್ದೇವೆ. ನಮ್ಮ ಬಳಿ ಅಕ್ಕಿ ಇಲ್ಲ ಎಂದು ಕೇಂದ್ರ …

Read More »

ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ ಭಗವಂತ ಖುಬಾ

ಹುಬ್ಬಳ್ಳಿ: ದೇಶದ ಯುವ ಪೀಳಿಗೆಗಳಿಗೆ ಸುಮಾರು 10 ಲಕ್ಷ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ನೀಡುವ ಸಲುವಾಗಿ ರೋಜ್ ಗಾರ್ ಮೇಳ ಆರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಹೊಸ ಹೊಸ ವಿಚಾರಗಳನ್ನು ತಿಳಿಸುತ್ತಿದ್ದಾರೆಂದು ಕೇಂದ್ರ ಸಚಿವ ಭಗವಂತ ಖುಬಾ ಹೇಳಿದರು. ನಗರದ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೋದಿಯವರ ವ್ಯಕ್ತಿತ್ವದಿಂದ ಇವತ್ತು ದೇಶ ಆರ್ಥಿಕವಾಗಿ ಮುಂದೆ ಬರುತ್ತಿದೆ. ಬರುವಂತಹ ದಿನಗಳಲ್ಲಿ 2030-47 ರಲ್ಲಿ ಭಾರತ ಜಗತ್ತಿನಲ್ಲಿ ಆರ್ಥಿಕವಾಗಿ ಮೂರನೇ ಬಲಿಷ್ಠ …

Read More »

ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್  ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಸಮಾಧಾನ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ಮಳೆ ತಡವಾಗಿದ್ದರಿಂದ ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಮಳೆ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. …

Read More »

ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾದ ಸಚಿವರು

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದರು.ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷ …

Read More »

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಸಂತೋಷ ಲಾಡ್

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ‌ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು …

Read More »