admin
January 4, 2022
Breaking News, SPECIAL NEWS, ರಾಜಕೀಯ
ಸುಲ್ತಾನಪುರ್: ಕಳೆದ ವರ್ಷದ ನವೆಂಬರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶಕ್ಕೆ ಪೂರ್ವಾಂಚಲ್ ಎಕ್ಸಪ್ರೆಸ್‍ವೇ ಉದ್ಘಾಟನೆಗೆ ಆಗಮಿಸಿದ್ದರು. ಅದೇ ವೇಳೆ ವೇದಿಕೆ ಸಮೀಪವೇ ಅವರಿಗೆ ಕರಿ ಪತಾಕೆ ಪ್ರದರ್ಶಿಸಿದ್ದೇ ಅಲ್ಲದೆ ʼಯೋಗಿ ಮುರ್ದಾಬಾದ್ʼ ಘೋಷಣೆಗಳನ್ನು ಕೂಗಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ಕಾರ್ಯಕರ್ತೆ ರೀಟಾ ಯಾದವ್ ಅವರ ಮೇಲೆ ಸೋಮವಾರ ಸಂಜೆ ಗುಂಡಿನ ದಾಳಿ ನಡೆದಿದೆ.
Read More »
BigTv News
January 3, 2022
Breaking News, News, ರಾಜಕೀಯ, ಹಾವೇರಿ
ಹಾವೇರಿ: ರಾಜ್ಯದಲ್ಲಿ ಲಾಕ್‌ಡೌನ್ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಆದರೆ ಜನರು ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ, ಸಹಕಾರ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕೋವಿಡ್ ಕಡಿಮೆಯಿದೆ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
Read More »
BigTv News
December 10, 2021
Breaking News, ಅಸೆಂಬ್ಲಿ ಚುನಾವಣೆಗಳು, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಹಾಗೂ ಚುನಾಯಿತ ಸದಸ್ಯರು ಉತ್ಸುಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ.
Read More »
admin
December 9, 2021
Breaking News, ಅಸೆಂಬ್ಲಿ ಚುನಾವಣೆಗಳು, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ 20 ದಿನಗಳಿಂದ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರುಇಂದು ಆಯಾ ತಹಶೀಲ್ದಾರ ಕಚೇರಿಲ್ಲಿ ಮಸ್ಟರಿಂಗ್ ಕಾರ್ಯ ನಾಳೆ ಮುಂಜಾನೆ 8 ರಿಂದ ಸಂಜೆ 4 ರ ವರೆಗೆ ನಡೆಯಲಿರೋ ಮತದಾನಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿ ಬರಲಿರೊ ಮೂರು ಜಿಲ್ಲೆಗಳು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿರೋ ಮತದಾನ ಮತಪೆಟ್ಟಿಗೆಗಳನ್ನು ಪಡೆದುಕೊಂಡು ಮತದಾನ ಕೇಂದ್ರಗಳತ್ತ ಸಾಗಿದ ಸಿಬ್ಬಂದಿಕಚೇರಿಗಳಿಗೆ ತೆರಳುತ್ತಿದ್ದಾರೆ. ಪ್ರತಿ ಬೂತ್‌ಗೆ …
Read More »
admin
December 8, 2021
Breaking News, ಅಸೆಂಬ್ಲಿ ಚುನಾವಣೆಗಳು, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ
ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಾಗೂ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಮತದಾನ ನೆಡೆಯುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಡಿ.8 ರಂದು ಸಂಜೆಯಿಂದ ಡಿ.10 ರವರೆಗೆ ಜಿಲ್ಲೆಯಲ್ಲಿ ಮದ್ಯದ ಅಂಗಡಿ ಹಾಗೂ ಬಾರ್ ಗಳನ್ನು ಬಂದ್ ಮಾಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ಧಾರೆ. ಜೊತೆಗೆ ಎಲ್ಲ ರೀತಿ ಮದ್ಯ ಸಂಗ್ರಹಣಾ ,ತಯಾರಿಕಾ ಘಟಕ, ಮದ್ಯಸಾಗಾಣಿಕೆ ನಿಷೇಧಿಸಲಾಗಿದೆ.ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
Read More »
admin
September 12, 2019
ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ ನಾಯಕರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.ದೆಹಲಿ ಕಡೆಗೆ ಮುಖ ಮಾಡಿರುವ ರಾಜ್ಯ ಬಿಜೆಪಿ ನಾಯಕರು ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದಾರೆ. ಆದರೆ, ರಾಜ್ಯದ ಬೆಳವಣಿಗೆಗಳ ಮೇಲೆ ನಿಗಾ ವಹಿಸಿರುವ ಬಿಜೆಪಿ ವರಿಷ್ಠರು ಅಷ್ಟು ಸುಲಭಕ್ಕೆ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಗ್ಯಾರಂಟಿ ಎನ್ನಲಾಗಿದೆ. ಸ್ಪೀಕರ್ …
Read More »
admin
September 12, 2019
ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಪಕ್ಷಾಂತರ ನಿಷೇಧ ಮಸೂದೆ ಉಲ್ಲಂಘಿಸಿದ ಕಾರಣ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದಾರೆ.ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ ಕುಮಟಳ್ಳಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿದ್ದ ಕೆಪಿಜೆಪಿ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ. ಉಳಿದ ಶಾಸಕರ ಮೇಲೆಯೂ ತೂಗುಕತ್ತಿ ಇದ್ದು ಅನರ್ಹಗೊಂಡರೆ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂಬ ಭೀತಿಯಿಂದ ಒಂದಿಷ್ಟು ಅತೃಪ್ತ ಶಾಸಕರು ವಾಪಸ್ ಬರಲು ಮುಂದಾಗಿದ್ದಾರೆ ಎನ್ನಲಾಗಿದೆ.ಉಳಿದ ಶಾಸಕರ ಬಗ್ಗೆಯೂ ಶೀಘ್ರವೇ ತೀರ್ಮಾನ …
Read More »
admin
September 12, 2019
ರಾಜಕೀಯ, ರಾಜಕೀಯ ಸುದ್ದಿ
ಚಿತ್ರದುರ್ಗ: ಶಾಸಕ ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವೆಂದೇಮಾತರಂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕಾರ್ಯಕರ್ತರು ಇಂದು ಚಿತ್ರದುರ್ಗದ ಬಾಜಪಾ ಕಛೇರಿ ಮುಂದೆ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.ಕಳೆದ 5 ಬಾರಿ ಚಿತ್ರದುರ್ಗ ನಗರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರ ಹಿರಿಯತಕ್ಕೆ ಅನುಗುಣಗಾಗಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
Read More »
admin
September 12, 2019
ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಹೊಸ ಸರಕಾರ ರಚನೆಗೆ ಹಕ್ಕು ಮಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಒಂದು ವಾರದೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಸೂಚನೆ ನೀಡಿದ್ದಾರೆ. 2018ರಲ್ಲಿ ಯಡಿಯೂರಪ್ಪ ಸರಕಾರ ರಚನೆಗೆ ಹಕ್ಕು ಮಂಡಿಸಿದ ಸಂದರ್ಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ 15 ದಿನಗಳ ಕಾಲಾವಕಾಶ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ವಿಧಾನಸಭೆಯಲ್ಲಿ ಸದ್ಯದ ಒಟ್ಟು ಸದಸ್ಯ ಬಲ ಸ್ಪೀಕರ್ ಸೇರಿ 222. ಓರ್ವ ಪಕ್ಷೇತರ ಸದಸ್ಯನ …
Read More »
admin
September 12, 2019
ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು:ಬಿಎಸ್ ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ಬಾಲಾಂಜನೇಯ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದ ಬಿಎಸ್ ಯಡಿಯೂರಪ್ಪ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ್ರು. ಪುತ್ರ ರಾಘವೇಂದ್ರ, ಶಾಸಕರಾದ ರಘುಪತಿ ಭಟ್ ಸಹಿತ ಹಲವು ಶಾಸಕರೊಂದಿಗೆ ರಾಜ್ಯಪಾಲರನ್ನ ಭೇಟಿಯಾಗಿ ಸರ್ಕಾರ …
Read More »