ವಿಜಯಪುರ: ಮಾಸ್ಕ್, ಸಾಮಾಜಿಕ ಅಂತರ ಕಾಪಾಡದವರು ಯಾರೇ ಅಗಿರಲಿ ದಂಡ ಹಾಕಬೇಕು. ಮೊದಲು ಮಂತ್ರಿಗಳಿಗೆ, ಎಂಎಲ್ಎ ಗಳಿಗೆ ದಂಡ ಹಾಕಲು ಪ್ರಾರಂಭಿಸಬೇಕು. ಆಗ ಜನರಿಗೆ ಭಯ ಬರುತ್ತದೆ ಎಂದು ವಿಜಯಪುರದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಎಲ್‍ಎಗಳು ಬೀಕಾಬಿಟ್ಟಿ ಮದುವೆಗಳನ್ನು ಮಾಡಿದ್ರೆ ಸುಮ್ಮನಿರುತ್ತಾರೆ ಇದರಿಂದ ಜನರಿಗೆ ಏನು ಅನಿಸುತ್ತೆ. ಇವರೆಲ್ಲ ಅಲ್ಲಿ ಕುಳಿತು ಕಥೆ ಹೇಳುತ್ತಾರೆ. ಸಾರ್ವಜನಿಕರಿಗೆ ಮಾತ್ರ ಏಕೆ ದಂಡ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. …
Read More »ಸೋಲಿನ ಭಯ ಇದೆ ಅದಕ್ಕೆ ಸರ್ಕಾರ ತಾಪಂ-ಜಿಪಂ ಚುನಾವಣೆ ನೆಡಸ್ತಿಲ್ಲಾ-ಸಲೀಂ ಅಹ್ಮದ
ಐದು ಜಿಲ್ಲೆಗಳ ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …
Read More »ಇಂದು ಸಂಜೆ 6 ಗಂಟೆಯಿಂದಲೇ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿ
ಬೆಂಗಳೂರು,;– ಕೋವಿಡ್‍ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಸೂಚಿಸಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಪೊಲೀಸರು ನಗರದ ಆಯಕಟ್ಟಿನ ಜಾಗ ಗಳೂ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಆಯೋಜಿ ಸಲಾಗಿದೆ. ಪ್ರಮುಖವಾಗಿ ಪ್ರತಿ ವರ್ಷ ಅದ್ಧೂರಿ ವರ್ಷಾ ಚರಣೆ ನಡೆಯುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಆಯಕಟ್ಟಿನ ಜಾಗಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರಪೊಲೀಸ್ ಆಯುಕ್ತ ಕಮಲಪಂಥ್ ಅವರು ಇಂದು ಸಂಜೆ …
Read More »ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ
ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು …
Read More »ಎಂಇಎಸ್ ನಿಷೇದಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬೃಹತ್ ಮೆರವಣಿಗೆ
ಬೆಂಗಳೂರು: ಕರ್ನಾಟಕ ರಾಜ್ಯ ಬಂದ್‍ನಿಂದ ಹಿಂದೆ ಸರಿದ ಕನ್ನಡಪರ ಸಂಘಟನೆಗಳು ಇಂದು ಎಂಇಎಸ್ ನಿಷೇಧಿಸಬೇಕೆಂದು ಆಗ್ರಹಿಸಿ ಟೌನ್‍ಹಾಲ್‍ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದವು. ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವು, ಕನ್ನಡ ಸೇನೆಯ ಕುಮಾರ್, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್‍ಗೌಡ ಸೇರಿದಂತೆ ಹಲವು …
Read More »ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು …
Read More »ಕೊರಗ ಸಮುದಾಯದ ಮೇಲಿನ ಪೊಲೀಸರ ಪ್ರಕರಣ ಅಮಾನವೀಯ, ನಾಚಿಕೆಗೇಡಿನ ಸಂಗತಿ: ಸಿದ್ದರಾಮಯ್ಯ
ಬೆಂಗಳೂರು: ಕುಂದಾಪುರದ ಕೋಟ ತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ, ಅತ್ಯಂತ ನಾಚಿಕೆಗೇಡಿನ …
Read More »ನಾಳೆ ಕರ್ನಾಟಕ ಬಂದ್ ಇಲ್ಲ- ಹಲವು ವಿರೋಧಗಳ ನಡುವೆ ಬಂದ್ ಕರೆ ಹಿಂಪಡೆದ ಕನ್ನಡಪರ ಸಂಘಟನೆಗಳು
ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





