admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ವಿಶೇಷ ಸುದ್ದಿ, ಶಿವಮೊಗ್ಗ
ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ …
Read More »
admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಇಂದು ಪರಿಹಾರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಜನ ಬಸ್ಗಳ ಮೂಲಕ ಗುಂಪು, ಗುಂಪಾಗಿ ಆಗಮಿಸಿದ್ದು, ಕೊರೊನಾ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ. ಬಸವಗುಡಿ ಮೈದಾನದಲ್ಲಿ ಇಂದು ಬೆಳಗ್ಗೆ 11:30ಕ್ಕೆ ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ನೂರಾರು ಮಂದಿ ಬಸ್ ಏರಿ ಬಂದಿದ್ದರು. ಅಲ್ಲದೇ ಈ ವೇಳೆ ಎಲ್ಲರೂ ಮಾಸ್ಕ್ …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ನವದೆಹಲಿ:ಜನತಾ ದಳ (ಯುನೈಟೆಡ್) ನ ರಾಜ್ಯಸಭಾ ಸಂಸದ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಪ್ರಸಾದ್ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಸಂಸತ್ತಿನ ಶ್ರೀಮಂತ ಸದಸ್ಯರಲ್ಲಿ ಒಬ್ಬರು ಎಂದು ಅಂದಾಜಿಸಲಾಗಿದೆ. ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಮ್ಮೆ ಲೋಕಸಭೆಗೆ ಚುನಾಯಿತರಾಗಿದ್ದರು.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. …
Read More »
admin
December 27, 2021
Breaking News, ಕರ್ನಾಟಕ, ಚಿಕ್ಕಮಗಳೂರು, ಬೆಂಗಳೂರು, ರಾಜಕೀಯ ಸುದ್ದಿ
ಚಿಕ್ಕಮಗಳೂರು: ರಾಜ್ಯ ಸರ್ಕಾರ ನಾಳೆಯಿಂದ ಜಾರಿಗೊಳಿಸುತ್ತಿರುವಂತ ನೈಟ್ ಕರ್ಪ್ಯೂ ಆದೇಶದ ಬಗ್ಗೆ ಹೋಟೆಲ್ ಮಾಲೀಕರು, ಚಿತ್ರಮಂದಿರದ ಮಾಲೀಕರು ಸೇರಿದಂತೆ ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಇತ್ತ ಬಿಜೆಪಿ ಸರ್ಕಾರದ ಈ ಆದೇಶ ವಿರುದ್ಧವೇ ಸ್ವಪಕ್ಷೀಯ ನಾಯಕ ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಓಮಿಕ್ರಾನ್ ವೈರಸ್ ಬಗ್ಗೆ ಭಯಪಡಬೇಡಿ ಎಂಬುದಾಗಿ ವಿಜ್ಞಾನಿಗಳೇ ತಿಳಿಸಿದ್ದಾರೆ. ಅಲ್ಲದೇ ಮೂಗು …
Read More »
admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿಕ್ಷಣ, ಸುದ್ದಿ
ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದರೆ, ಆಲ್ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಹಿಂದೂಗಳ ಜನಿವಾರವನ್ನು ಧರಿಸುತ್ತಾರೆ ಎಂದು ಯುಪಿಯ ಪಂಚಾಯತ್ರಾಜ್ ಸಚಿವ ಭೂಪೇಂದ್ರ ಸಿಂಗ್ ಚೌಧರಿ ಹೇಳಿದ್ದಾರೆ. ಚೌಧರಿ ಅವರು ಶಾಮ್ಲಿಯಲ್ಲಿ ನಡೆದ ಯುವಜನರ ಸಮಾವೇಶದಲ್ಲಿ ಯೋಗಿ ಆದಿತ್ಯನಾಥನ್ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆ ಮತ್ತು ಭಗವಾನ್ ರಾಮನ ಹೆಸರನ್ನು ಜಪಿಸುತ್ತಾರೆ ಎಂದಿದ್ದಾರೆ.ಬಿಜೆಪಿಯ ಸಿದ್ಧಾಂತವನ್ನು ಬಲಪಡಿಸುವ ಮಧ್ಯೆ, …
Read More »
admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹು-ಧಾ ಮಹಾನಗರ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಹಾಗೂ ನಗರದೆಲ್ಲೆಡೆ ತೆರೆದುಕೊಂಡಿರುವ ಗುಂಡಿಗಳನ್ನು ಕೂಡಲೇ ಮುಚ್ಚಬೇಕೆಂದು ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಕೊಪ್ಪಿಕರ ರಸ್ತೆಯ ಮಧ್ಯದಲ್ಲಿ ಹೋಮ ಕುಂಡ ನಿರ್ಮಿಸಿ, ಸಂಕಲ್ಪ ಗಣಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ಈ ವೇಳೆ ಇಬ್ಬರು ಅರ್ಚಕರಿಂದ ಮಂತ್ರಘೋಷ ಪಟಣದ ಮೂಲಕ ಶಾಸ್ತ್ರೋಕ್ತವಾಗಿ ಗಣಹೋಮ ನೆರವೇರಿಸಿದರು. ಈ ವೇಳೆ ಮಾತನಾಡಿದ ಹು-ಧಾ ಮಹಾನಗರ …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಕಾಬೂಲ್: ಅಫ್ಗಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್ ಸರ್ಕಾರವು, ಅಲ್ಲಿನ ಚುನಾವಣಾ ಆಯೋಗಗಳು ಹಾಗೂ ಶಾಂತಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವನ್ನು ವಿಸರ್ಜಿಸಿದೆ. ದೇಶದ ಸ್ವತಂತ್ರ ಚುನಾವಣಾ ಆಯೋಗ, ಚುನಾವಣಾ ದೂರು ಆಯೋಗ ಹಾಗೂ ಶಾಂತಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವನ್ನು ವಿಸರ್ಜಿಸಲಾಗಿದೆ ಎಂದು ಸರ್ಕಾರದ ಉಪ ವಕ್ತಾರ ಬಿಲಾಲ್ ಕರೀಮಿ ತಿಳಿಸಿದ್ದಾರೆ. ‘ಅಫ್ಗಾನಿಸ್ತಾನದ ಸದ್ಯದ ಸನ್ನಿವೇಶಕ್ಕೆ ಅವು ಅನಗತ್ಯ ಸಂಸ್ಥೆಗಳಾಗಿವೆ’ ಎಂದು ಹೇಳಿರುವ ಕರೀಮಿ, ಭವಿಷ್ಯದಲ್ಲಿ ಅವುಗಳ ಅಗತ್ಯವಿದೆ ಎನಿಸಿದರೆ, ತಾಲಿಬಾನ್ ಸರ್ಕಾರ …
Read More »
admin
December 27, 2021
Breaking News, ಉಡುಪಿ, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ. ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ತಮ್ಮ ಮಗಳ ನಿಶ್ಚತಾರ್ಥದ ಫೋಟೋವನ್ನು ಡಿಸೆಂಬರ್ 25ರಂದು ಇನ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಪುತ್ರಿ ಶಾನೆಲ್ಲೆ ಇರಾನಿ ನಿಶ್ಚಿತಾರ್ಥಕ್ಕೆ ಶುಭಕೋರಿದ್ದಾರೆ. ಸ್ಮೃತಿ ಇರಾನಿ ಹಂಚಿಕೊಂಡಿರುವ ಮೊದಲ ಫೋಟೋದಲ್ಲಿ ಶಾನೆಲ್ಲೆಗೆ ಅರ್ಜುನ್ ಮೊಣ ಕಾಲಿನ ಮೇಲೆ ಕುಳಿತು ಪ್ರೀತಿಯ ನಿವೇದನೆ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಎರಡನೇ ಚಿತ್ರದಲ್ಲಿ ಅರ್ಜುನ್ ಭಲ್ಲಾ ಮತ್ತು ಶಾನೆಲ್ಲೆ ನಿಶ್ಚಿತಾರ್ಥದ ಬಳಿಕ ತೆಗೆದುಕೊಂಡಿರುವ ಸೆಲ್ಫಿ ಫೋಟೋ ಕಾಣಬಹುದಾಗಿದೆ. ಫೋಟೋ ಶೇರ್ ಮಾಡುವುದರೊಂದಿಗೆ …
Read More »