Breaking News

ರಾಜಕೀಯ ಸುದ್ದಿ

ಸ್ವಾಮಿನಾಥನ್ ವರದಿ ಜಾರಿಗೆ ಪಟ್ಟು ಹಿಡಿದ ಅನ್ನದಾತ-ರಾಷ್ಟ್ರೀಯ ಹೆದ್ದಾರಿ ತಡೆದ ರೈತ ಮುಖಂಡರು

ಹುಬ್ಬಳ್ಳಿ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳಸಾ ಬಂಡೂರಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ ರೈತ ಮುಖಂಡರು ಹುಬ್ಬಳ್ಳಿಯ ಗಬ್ಬೂರು ಟೋಲ್ ಬಳಿ ಹೆದ್ದಾರಿ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸ್ವಾಮಿನಾಥನ್ ಆಯೋಗದ …

Read More »

ಮಳೆಗೆ ಮನೆಯೂ ಹೋಯ್ತು,ಬೆಳೆಯೂ ಹೋಯ್ತು

ಧಾರವಾಡ: ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುರಿದ ಮಳೆ ರೈತರನ್ನು ಅಕ್ಷರಶಃ ನಿದ್ದೆಗೆಡಿಸಿದೆ. ಒಂದೆಡೆ ಪೀಕುಗಳು ಮಳೆಗೆ ಹಾನಿಗೀಡಾದರೆ, ಮತ್ತೊಂದೆಡೆ ಮನೆಗಳು ನೆಲಕ್ಕುರುಳಿ ಜನರನ್ನು ಸಂಕಷ್ಟಕ್ಕೆ ದೂಡಿದೆ. ಧಾರವಾಡ ಜಿಲ್ಲೆಯಾದ್ಯಂತ ಅನೇಕ ಮನೆಗಳು ನೆಲಕ್ಕುರುಳಿದ್ದು, ಮನೆ ಕಳೆದುಕೊಂಡವರೆಲ್ಲ ಇದೀಗ ಸರ್ಕಾರದ ಮುಂದೆ ಕೈಚಾಚಬೇಕಾಗಿದೆ.ಧಾರವಾಡ ತಾಲೂಕಿನ ಮನಸೂರು, ಉಪ್ಪಿನ ಬೆಟಗೇರಿ, ಅಮ್ಮಿನಬಾವಿ ಸೇರಿದಂತೆ ಅನೇಕ ಕಡೆಗಳಲ್ಲಿ ಮನೆಗಳು ನೆಲಕಚ್ಚಿವೆ.ಮೂರ್ನಾಲ್ಕು ದಿನ ಬಿಟ್ಟೂ ಬಿಡದೇ ಸುರಿದ ಮಳೆ ಬೆಳೆಗಳಿಗೆ ಮಾತ್ರ ನಷ್ಟವನ್ನುಂಟು ಮಾಡಿಲ್ಲ. …

Read More »

ಬೆಳಗಾವಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ‘ಕೈ’ ಅಭ್ಯರ್ಥಿ,

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರಿಂದು ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಅವರು ಚುನಾವಣೆ ಅಧಿಕಾರಿ ಆರ್. ವೆಂಕಟೇಶಕುಮಾರ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎ.ಬಿ.ಪಾಟೀಲ್, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ವೀರಕುಮಾರ ಪಾಟೀಲ, ಶ್ಯಾಮ ಘಾಟಗೆ ಉಪಸ್ಥಿತರಿದ್ದರು. ಕಾಂಗ್ರೆಸ್‌, ಬಿಜೆಪಿ ಶಕ್ತಿ ಪ್ರದರ್ಶನಪರಿಷತ್ ಚುನಾವಣೆಗಿಂದು ನಾಮಪತ್ರ ಸಲ್ಲಿಕೆಗೆ …

Read More »

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಥೂ.. ಥೂ.. ಎಂದು ಗೇಲಿ ಮಾಡಿದ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಧ್ಯಮ ಕೇಳಲಾದ ಪ್ರಶ್ನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಥೂ ಥೂ ಎಂದು ಗೇಲಿ ಮಾಡಿದ ಪ್ರಸಂಗ ನಗರದಲ್ಲಿ ನಡೆಯಿತು. ಪರಿಷತ್ ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ‌ ಎಂಬ ಮಾಧ್ಯಮಗಳ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಗೊಂಡ ರಮೇಶ್ ಜಾರಕಿಹೊಳಿ‌ ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ …

Read More »

ನೇರೆಪೀಡಿತ ಪ್ರದೇಶಕ್ಕೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ- ರೈತರ ಅಹವಾಲು ಸ್ವಿಕರಿಸಿದ ಸಚಿವರು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಿನ್ನೆಲೆಯಲ್ಲಿ ನೇರಪೀಡಿತ ಪ್ರದೇಶಕ್ಕೆ ಸಕ್ಕರೆ, ಜವಳಿ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಕುಂದಗೋಳ ತಾಲೂಕಿನ ಯರಿನಾರಾಯಪುರ ಗ್ರಾಮಕ್ಕೆ ಭೇಟಿ ನೀಡಿ ಬೆಣ್ಣೆ ಹಳ್ಳಿ ಪ್ರವಾಹಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ಗ್ರಾಮದ ರೈತರಿಂದ ಅಹವಾಲು ಸ್ವೀಕರಿಸಿದರು.ನಂತರ ಮಾತನಾಡಿದ ಅವರು ಈ ಬಾರಿ ಅನಿರೀಕ್ಷಿತ ಮಳೆಯಿಂದ ತೀವ್ರ ತೊಂದರೆಯಾಗಿದೆ.ಸರಾಸರಿಗಿಂತ ನಾಲ್ಕೈದು ಪಟ್ಟು ಮಳೆಯಾಗಿದೆ. ಹಿಗಾಗಿ ಅಪಾರ ಪ್ರಮಾಣದ ಮಳೆಯಾಗಿದೆ.ಕೂಡಲೇ …

Read More »

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ-ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರು: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ. ರಾಜ್ಯಪಾಲರು ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಪತ್ರ ಬರೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕಾಮಗಾರಿ ತೆಗೆದುಕೊಳ್ಳಬೇಕಾದರೆ ಮಂತ್ರಿಗಳಿಗೆ, ಎಂಎಲ್​ಎಗಳಿಗೆ 40 ಪರ್ಸೆಂಟ್ ಕಮಿಷನ್​ ಕೊಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದಿದೆ ಎಂದರು. ಇಷ್ಟೊಂದು ಕಮಿಷನ್​ ತೆಗೆದುಕೊಳ್ಳುವ ಸರ್ಕಾರವನ್ನು …

Read More »

ಬಿಜೆಪಿಯವರು ರೈತರಲ್ಲಿ ಕ್ಷಮೆಯಾಚಿಸಲಿ: ಶಾಸಕ ಯು.ಟಿ.ಖಾದರ್

ಮಂಗಳೂರು: ಕೇಂದ್ರ ಸರ್ಕಾರವು ದೇಶಕ್ಕೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ರೈತರ ಜನಾಂದೋಲನಕ್ಕೆ ಮಣಿದು ಹಿಂಪಡೆದಿದೆ. ಆದರೆ 1 ವರ್ಷ 2 ತಿಂಗಳಲ್ಲಿ ಎಷ್ಟು ಶ್ರೀಮಂತರು ಈ ಕಾಯ್ದೆಯಿಂದ ಲಾಭ ಪಡೆದುಕೊಂಡಿದ್ದಾರೆಂದು ಸರ್ಕಾರ ಬಹಿರಂಗಪಡಿಸಲಿ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ‘ಬಿಜೆಪಿ ಮುಖಂಡರು ಕ್ಷಮೆ ಯಾಚಿಸಲಿ’: ಕಾಂಗ್ರೆಸ್ ಸರ್ಕಾರ ರೈತ ಮಸೂದೆಯನ್ನು ಜಾರಿಗೊಳಿಸಿತ್ತು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಕಾನೂನನ್ನು ತಿದ್ದುಪಡಿ ಮಾಡಿತು. ಹಾಗಾಗಿ ರೈತರು ನಿರಂತರ …

Read More »

ಸೋಮಶೇಖರ್​ ಆಪ್ತ ಸಹಾಯಕನಿಗೆ ಕೈ ಟಿಕೆಟ್.. ಕಾಂಗ್ರೆಸ್ ಬಿಜೆಪಿಯ ‘ಸಿ’ ಟೀಂ.. HDK ವ್ಯಂಗ್ಯ

ಬೆಂಗಳೂರು : ಸಚಿವ ಎಸ್‌ ಟಿ ಸೋಮಶೇಖರ್​ ಅವರ ಆಪ್ತ ಸಹಾಯಕ ದಿನೇಶ್ ಗೂಳಿಗೌಡ ಅವರಿಗೆ ಮಂಡ್ಯದಿಂದ ವಿಧಾನಪರಿಷತ್ತಿಗೆ ಟಿಕೆಟ್ ನೀಡಲು ಹೊರಟಿರುವ ಕಾಂಗ್ರೆಸ್​ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾಂಗ್ರೆಸ್ ಬಿಜೆಪಿಯ ಸಿ ಟೀಂ​ ಎಂಬುದನ್ನು ಕಾಂಗ್ರೆಸ್ ನಾಯಕರೇ ಹೇಳಬೇಕು ಎಂದರು. ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಸ್.ಟಿ. ಸೋಮಶೇಖರ್ ಆಪ್ತ ಸಹಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ನಮ್ಮ …

Read More »

ಪ್ರತಿಷ್ಠೆಗೆ ಮಣಿದು ಕಾಯಿದೆ ಹಿಂಪಡೆದಿಲ್ಲ ರೈತರ ಹಿತ ಮುಖ್ಯ: ಬಿ.ಎಸ್.ವೈ…!

ಹುಬ್ಬಳ್ಳಿ: ಯಾವುದೇ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ.ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು, ನಿಜ. ಆದರೆ ರೈತರ ಹಿತಕ್ಕಾಗಿ ಕೃಷಿ ಕಾಯಿದೆ ನಿಷೇಧ ಮಾಡಲಾಗಿದೆ. ಇದರಲ್ಲಿ ಸೋಲು ಗೆಲುವು ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕೇಂದ್ರ ಸರ್ಕಾರ ಕೃಷಿ ಕಾಯಿದೆ ಹಿಂಪಡೆದ ಹಿನ್ನೆಲೆಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಐತಿಹಾಸಿಕ ತೀರ್ಮಾನವನ್ನು ಈಗ ತೆಗೆದುಕೊಂಡಿದ್ದಾರೆ. …

Read More »

ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದೆ. ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇವತ್ತು ಬಹಳ ಐತಿಹಾಸಿಕ ದಿನ. …

Read More »