Shaikh BigTv
September 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಚೆನ್ನಮ್ಮ ವೃತ್ತದ ಬಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಡಿಸಿಪಿ ಸಿ.ಆರ್ ರವೀಶ್ ದಂಡ ವಿಧಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಕಾನ್ಸ್‌ಟೇಬಲ್‌ಗಳನ್ನು ತಡೆದು ದಂಡ ವಿಧಿಸುವಂತೆ ಡಿಸಿಪಿ ಸಿ.ಆರ್ ರವೀಶ್ ಅವರು ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಅವರಿಗೆ ಸೂಚಿಸಿದ್ದಾರೆ. ಬಳಿಕ ಪಿಐ ಡಿಸೋಜಾ ಅವರು ನಿಯಮ ಉಲ್ಲಂಘಿಸಿದ ಪೊಲೀಸರಿಗೆ ದಂಡ ವಿಧಿಸಿದ್ದಾರೆ. ಈ ಮೂಲಕ ಕಾನೂನು ಎಲ್ಲರಿಗೂ …
Read More »
Shaikh BigTv
September 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ದರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಗೆಲುವು ಶತಸಿದ್ದ. ಈ ಒಂದು ಪ್ರಕರಣದಿಂದ ಸಿದ್ದರಾಮಯ್ಯನವರ ಗೌರವಯುತವಾಗಿ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದು ಅವರು ಭರವಸೆ …
Read More »
Shaikh BigTv
September 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪಾಲಿಕೆಯಿಂದ ಮೂರು ದಿನಗಳ ಅನುಮತಿ ಪಡೆದು ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿಯನ್ನು ಇಂದು ವಿಸರ್ಜನೆಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿದಾಯ ಹೇಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ವಿಸರ್ಜನೆ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದ್ದು, ಸಕಲ ವಾದ್ಯ ವೈಭವದೊಂದಿಗೆ ಮೆರವಣಿಗೆ ಸಾಗಿದೆ. ಗಣಪತಿಯ ವಿಸರ್ಜನೆ ಮೆರವಣಿಗೆಗೆ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ, ಸಿ.ಟಿ.ರವಿ, ಮಹೇಶ ಟೆಂಗಿನಕಾಯಿ, ಶಂಕರಪಾಟೀಲ ಮುನೇನಕೊಪ್ಪ ,ಇನ್ನೂ ಸಾವಿರಾರು ಭಕ್ತರ ಸಮ್ಮುಖದಲ್ಲಿಯೇ ಅದ್ದೂರಿಯಾಗಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಅಲ್ಲದೇ …
Read More »
Shaikh BigTv
September 8, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಸಿದ್ಧ ಕಲ್ಯಾಣ ನಗರ ಉಣಕಲ್ಲದ ಶ್ರೀ ತ್ರಿಲಿಂಗೇಶ್ವರ ಸ್ವರೂಪ ಗಣಪತಿಯ ಪ್ರತಿಷ್ಠಾಪನೆಯನ್ನು ಅತಿ ವಿಜೃಂಭಣೆಯಿಂದ ಮಾಡಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಭಾಗಿಯಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿದ್ದಲಿಂಗೇಶ್ವರ ನಗರದ ನಿವಾಸಿಗಳು ಹಾಗೂ ನೂರಾರು ಯುವಕರು ಸೇರಿದಂತೆ ಹಿರಿಯ ಮುಖಂಡರು ಭಾಗಿಯಾಗಿದ್ದರು.
Read More »
Shaikh BigTv
September 8, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಟ ದರ್ಶನ್ ಪ್ರಕರಣದ ಜಾರ್ಜ್ ಶೀಟ್ ಸಾಕ್ಷಿಗಳು, ಫೋಟೊಗಳು ಸದ್ಯ ನ್ಯಾಯಾಲಯದ ಬಳಿ ಇವೆ. ಇಂದು ಅವು ಹೊರಗಡೆ ಬಂದಿವೆ. ಅಂದರೆ, ಇದರಲ್ಲಿ ರಾಜ್ಯ ಸರ್ಕಾರ, ಸಂಬಂಧಿತ ಇಲಾಖೆಯೇ ಬಿಡುಗಡೆ ಮಾಡಿದೆ. ಜನರ ಮನಸ್ಸನ್ನು ಡೈವರ್ಟ್ ಮಾಡಲು ಇದನ್ನು ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಯಾವಾಗಲೂ ಡೈವರ್ಟ್ಮಾ ಮಾಡುವ ಪ್ರಯತ್ನ ಮಾಡುತ್ತದೆ. ಅದರ ಒಂದು ಭಾಗವಾಗಿ ಫೋಟೊ ಬಿಡುಗಡೆ ಮಾಡಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ …
Read More »
Shaikh BigTv
September 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಐತಿಹಾಸಿಕ ರಾಣಿ ಚನ್ನಮ್ಮ ಮೈದಾನದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿರುವ ಶ್ರೀ ಗಣೇಶ ಹಬ್ಬದ ಅಂಗವಾಗಿ, ಇಂದು ರಾಣಿ ಚನ್ನಮ್ಮ ಮೈದಾನ ಗಜಾನನ ಮಹಾಮಂಡಳದಿಂದ ಹಾಲಗಂಬ ಪೂಜೆಯನ್ನು ನೆರವೇರಿಸಲಾಯಿತು. ರಾಣಿ ಚನ್ನಮ್ಮ ಮೈದಾನದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಠಾಪಿಸಲ್ಪಡುವ ಗಣೇಶನಿಗೆ ವಿಶೇಷ ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಶಾಸಕ ಮಹೇಶ್ ಟೆಂಗಿನಕಾಯಿ, ರಾಣಿ ಚನ್ನಮ್ಮ ಮೈದಾನ ಗಜಾನನ ಮಹಾಮಂಡಳದ ಅಧ್ಯಕ್ಷ ಸಂಜೀವ್ ಬಡಸ್ಕರ್, ಸ್ವಾಗತ …
Read More »
Shaikh BigTv
September 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕಿನ ಹಣವನ್ನು ಸುಲಿಗೆ ಮಾಡುವ ಉದ್ದೇಶದಿಂದ ಬ್ಯಾಂಕ್ ದರೋಡೆ ಯತ್ನಿಸಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಎಪಿಎಂಸಿ ನವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾಲ ತೀರಿಸುವ ಸಲುವಾಗಿ ಬ್ಯಾಂಕ್ ದರೋಡೆಗೆ ಮಾಡಲು ಯತ್ನಿಸಿದರು.ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೈಯಲ್ಲಿ ಚಾಕು ಹಿಡಿದುಕೊಂಡು ಬ್ಯಾಂಕ್ ನೌಕರರೊಬ್ಬರ ಕುತ್ತಿಗೆಗೆ ಚಾಕು ಹಿಡಿದು, ಪ್ರಾಣ ಬೆದರಿಕೆ ಒಡ್ಡಿ ’10 ಲಕ್ಷ ರೂ ಹಣ ಕೊಡಿ’ ಎಂದು ಹೇಳುತ್ತಾ …
Read More »
Shaikh BigTv
September 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕರ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ್ ವೈಯಕ್ತಿಕ ನಂಬಿಕೆಯ ಮೇಲೆಯೇ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೆಪ್ಟಿಸ್ಟ್ ಪರವಾಗಿಯೇ ಇದೆ. ಭಾರತದ ಸಂಸ್ಕೃತಿ ಆಚಾರ ವಿಚಾರ ವಿರೋಧಿಸುವವರ ಪರವಾಗಿಯೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಕಿಡಿ ಕಾರಿದರು. ಹಿಜಾಬ್ ಪ್ರಕರಣದಲ್ಲಿ ಭಾಗಿಯಾದ ಕಾರಣ ಉಡುಪಿ ಪ್ರಾಂಶುಪಾಲ ರಾಮಕೃಷ್ಣ …
Read More »
Shaikh BigTv
September 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ, ನಿರುದ್ಯೋಗ, ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಮಾತನಾಡದೇ ಬಿಜೆಪಿಯವರು ಬೇರೆಯದೇ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವು ದಿನಕ್ಕೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಾರೆ. ನಿಮ್ಮ ಅಧಿಕಾರದ ಅವಧಿಯಲ್ಲಿ ನೀವು ಏನು ಮಾಡಿ ಬಂದಿದ್ದೀರಾ? ನಿಮ್ಮ …
Read More »
Shaikh BigTv
September 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪೋಷಕರು ಮೊಬೈಲ್ ಬಿಡು ಸ್ಟಡಿ ಮಾಡು ಅಂತಾ ಬುದ್ದಿವಾದ ಹೇಳಿದ ಕಾರಣ ಬಾಲಕ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕನ ಹೆಸರು ಸಮೃದ್ಧ ವಯಸ್ಸು 13. ಈ ಬಾಲಕ ಎಂಟನೇ ತರಗತಿಯಲ್ಲಿ ಅಭ್ಯಾಸವನ್ನು ಮಾಡುತ್ತಿದ್ದ,ಮನೆಯಲ್ಲಿ ಸದಾ ಮೊಬೈಲ್ ಹಿಡಿದುಕೊಂಡಿರುತ್ತಿದ್ದ ಈತನಿಗೆ ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಕಿಗೆ ಬರುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ನವನಗರ ಠಾಣೆಯ ಪೊಲೀಸರು ಭೇಟಿ …
Read More »