Shaikh BigTv
November 22, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅವಳಿ ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಸತತವಾಗಿ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಓಸಿ ಮಟ್ಕಾ, ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಇವುಗಳಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಅನಿರೀಕ್ಷಿತ …
Read More »
BigTv News
November 20, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕರಾದ ಸಂತೋಷ್ ಕೊಡಂಕೇರಿ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಶವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೇ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರವಿಕೆ ಸಿನಿಮಾದಲ್ಲಿ ಹೆಣ್ಣಿನ …
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಅವಳಿ ನಗರಕ್ಕೆ ಬಂತು ಭಾರತ್ ಬ್ರಾಂಡ್ ಕಡಿಮೆ ಬೆಲೆಯಲ್ಲಿ ಪದಾರ್ಥಗಳ ವಿತರಣೆ ಮಾಡಲಾಗಿತ್ತಿದೆ.ದೀಪಾವಳಿಯ ಉಡುಗೊರೆಯಾಗಿ “ಭಾರತ್ ಬ್ರಾಂಡ್” ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಜನತೆಗೆ ಉಡುಗೊರೆ ನೀಡುತ್ತಿರುವ ಕೇಂದ್ರ ಸರ್ಕಾರ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಬಂಪರ್ ಆಫರ್ ನೀಡಿದ್ದಾರೆ. ಪದಾರ್ಥಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಯೋಜನೆ ಹಾಕಿದ್ದಾರೆ.ಕಡಿಮೆ ಬೆಲೆಯಲ್ಲಿ ಈರುಳ್ಳಿ ತಲುಪಿಸುವ ಉದ್ದೇಶದ ಯೋಜನೆಯಲ್ಲಿದೆ.ಮೂರು ಸಂಚಾರಿ ವಾಹನಗಳಲ್ಲಿ ಜನರಿಗೆ ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆ. ₹80 ಇರುವ …
Read More »
BigTv News
November 10, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಸೇರಿದಂತೆ ಅಂದಾಜು 484 ಕೋಟಿ ವೆಚ್ಚದ 167 ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ …
Read More »
BigTv News
November 9, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಅಣ್ಣಿಗೇರಿ: ನವಲಗುಂದ ವಿಧಾನಸಭಾ ಮತಕ್ಷೇತ್ರದ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಪರಪ್ಪ ಮುಷಪ್ಪ ರೂಗಿ, ನ್ಯೂ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿನಿ ಕುಮಾರಿ ಸಂಜನಾ ನಾಗರಹಳ್ಳಿ ಅವರು ಬೆಳಗಾವಿ ವಿಭಾಗ ಮಟ್ಟದ ವಾಲಿಬಾಲ್ ತಂಡದಲ್ಲಿ ಸ್ಥಾನವನ್ನು ಪಡೆದಿದ್ದು ಇತ್ತೀಚೆಗೆ ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜಯರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರಿಗೆ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಶಾಸಕ ಕೋನರಡ್ಡಿ ಅವರು ಶುಭಾಶಯ ಕೋರಿದರು.
Read More »
BigTv News
November 9, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಣ್ಣಪ್ಪಿಸಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಬಕಾರಿ ಪ್ರಕರಣದಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಜನತಾ ಬಜಾರ ಬಳಿಯ ಚಾಂಗದೇವ ಮಹಾರಾಜ ಗುಡಿ ಹತ್ತಿರ ಮುಕುಂದಪ್ಪ ನಾರಾಯಣ ಓತಾಲಿ (ಹೊರಾಲಿ) ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಮಹಿಳೆ ಬಂಧನ 2010 ರಲ್ಲಿ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ …
Read More »
BigTv News
November 9, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿದ ಘಟನೆ. ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು ಮುಂಜಾನೆ ನಡೆದಿದೆ.ಈ ಘಟನೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗಿದ್ದು. ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇದ್ದಿದ್ದಾಗಿ ತಿಳಿದಿದೆ. ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪ ಮಾಡಿದ ವ್ಯಕ್ತಿಯ ಕುಟುಂಬಸ್ಥರುಸುಮಾರು 10 ವರ್ಷಗಳಿಂದ ಕಿಮ್ಸ್ ನಲ್ಲಿ ಈ ಮಹಿಳೆ,ಆಯಾ ಕೆಲಸ ಮಾಡುತ್ತಿದ್ದಾಗಿ ಹೇಳಲಾಗಿದ್ದು, ಕೆಲಸದಿಂದ …
Read More »
BigTv News
November 8, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಬಣದ ರಾಜಕಾರಣ ಆರಂಭವಾಗಿದೆ. ಇದೀಗ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಯಾವುದೇ ರೀತಿಯ ಆಪರೇಷನ್ ಕಮಲ ಮಾಡಿಲ್ಲ. ಜನರು ಬಿಜೆಪಿಗೆ ವಿಪಕ್ಷ ಸ್ಥಾನ ಕೊಟ್ಟಿದ್ದಾರೆ. ಹೀಗಾಗಿ ರಚನಾತ್ಮಕ ಹೋರಾಟ ಮಾಡತ್ತೇವೆ. ಕಾಂಗ್ರೆಸ್’ನವರು ಆಪರೇಷನ್ ಹಸ್ತದಲ್ಲಿ ಹಸ್ತ ಮಾಡಿಕೊಳ್ಳುವ ಕೆಲಸವನ್ನು ಅವರೇ ಮಾಡಿಕೊಂಡಿದ್ದಾರೆ ಎಂದರು. ಸದ್ಯ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು …
Read More »
BigTv News
November 7, 2023
News, ಕರ್ನಾಟಕ, ಕ್ರಿಕೆಟ್, ಕ್ರಿಕೆಟ್, ಕ್ರೀಡೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ …
Read More »
BigTv News
November 7, 2023
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಇಲ್ಲದಿದ್ದರೆ ಎರಡನೇ ಬಾರಿ ಶೇ.ಮೂವತ್ತರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡಬೇಕೆಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ ಸಜ್ಜನ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ಏಳನೇ ವೇತನ ಆಯೋಗವು ರಚನೆಯಾಗಿ ಒಂದು ವರ್ಷವಾಗುತ್ತಿದೆ. ಅಂದು ಆಯೋಗದ ಅನುಷ್ಠಾನಕ್ಕಾಗಿ ಹೋರಾಟಕ್ಕೆ ಇಳಿದ ಮೇಲೆ ಅಂದಿನ ರಾಜ್ಯ ಸರ್ಕಾರ ಶೇ. ೧೭ ರಷ್ಟು …
Read More »