Breaking News

ಹುಬ್ಬಳ್ಳಿ

ವಿದ್ಯುತ್ ತಂತಿ ತಗುಲಿ ಎಮ್ಮೆ ಸಾವು….

ಹುಬ್ಬಳ್ಳಿ : ವಿದ್ಯುತ್ ತಂತಿ ತಗುಲಿ ಮೂಕಪ್ರಾಣಿ ಎಮ್ಮೆ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿಯ ಇಂಡಿಪಂಪ್ ಬಳಿ ನಡೆದಿದೆ. ಮಳೆಗಾಲ ಹಿನ್ನೆಲೆಯಲ್ಲಿ ವಿದ್ಯುತ್ ಕಂಬದಿಂದ ಹರಿದು ಬಿದ್ದ ವಿದ್ಯುತ್ ತಂತಿ. ಕಂಬದ ಬಳಿ ಮೇಯಲು ಹೋಗಿದ್ದ ಎಮ್ಮೆ ವಿದ್ಯುತ್ ತಗುಲಿ ಸಾವನ್ನಪ್ಪಿದೆ. ಹೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಮೂಕಪ್ರಾಣಿ ಬಲಿಯಾಗಿದೆ. ಸ್ಥಳಕ್ಕೆ ಹೆಸ್ಕಾಂ ಸಿಬ್ಬಂಧಿ ಹಾಗೂ ಪಾಲಿಕೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಹೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು …

Read More »

ಹುಬ್ಬಳ್ಳಿ ಸಂಜೀವಿನಿ ಪಾರ್ಕ್ ಬಳಿ ಗೂಡ್ಸ್ ವಾಹನ ಪಲ್ಟಿ..

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ವಾಹನ ಅಪಘಾತಗಳ ಪ್ರಮಾಣ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿ ಸಂಜೀವಿನಿ ಪಾರ್ಕ್ ಬಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Read More »

ಮಾಯವಾದ ಮೇಯರ. ಸುವರ್ಣ ಕಲಕುಂಟ್ಲ ಆರೋಪ ಪಾಲಿಕೆ ಸದಸ್ಯರಿಗೆ ಬೆಲೆ ಕೊಡದ ಆಯುಕ್ತರು.

ಹುಬ್ಬಳ್ಳಿ .ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯೆ ಹಾಗೂ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಇವರು ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬುಧವಾರ 26 ರಂದು ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕಿಯ ಕಾರ್ಯಾಲಯದ ಉದ್ಘಾಟನೆಯನ್ನು ಹಮ್ಮಿಕೊಂಡಿದ್ದೇವೆ. ನೂತನ ಕಾರ್ಯಾಲಯವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರು, ಮಾಜಿ ಮುಖ್ಯಮಂತ್ರಿಗಳಾದ …

Read More »

ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್ ನಡೆಸಲು ನೋಂದಾಯಿತ ಶಿಕ್ಷಣ ಸಂಸ್ಥೆಗಳು ವಿವಿಯ ಜೊತೆ ಒಡಂಬಡಿಕೆಗೆ ಅವಕಾಶ

ಹುಬ್ಬಳ್ಳಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಸ್ಥಾನದಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸುಗಳನ್ನು ರಾಜ್ಯವ್ಯಾಪಿ ನಡೆಸಲು ಸಂಸ್ಥೆಗಳಿಗೆ ಅವಕಾಶವಿದೆ. ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ಪರಿನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರಕಿದೆ. ಈಗಾಗಲೇ ರಾಜ್ಯದ ಏಳು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡು ಕೋರ್ಸುಗಳನ್ನು ನಡೆಸುತ್ತಿವೆ …

Read More »

ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಲ್ ಜೀವಣ್ಣವರ ಅವರಿಗೆ ಸನ್ಮಾನ.

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಲ್ ಜೀವಣ್ಣವರ ಅವರಿಗೆ ಶಾಲ ಹೊದಿಸಿ ಸನ್ಮಾನಿಸಲಾಯಿತು ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್ ಎಲ್ ಜಿವಣ್ಣವರ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಲ್ಲರೂ ನನ್ನ ಮೇಲೆ ಪ್ರೀತಿ ವಿಶ್ವಾಸದಿಂದ ನೋಡಿಕೊಂಡಿದ್ದಾರೆ ಅವರನ್ನು ಎಂದಿಗೂ ನಾನು ಮರೆಯುವುದಿಲ್ಲ ಎಂದು ಹೇಳಿದ ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ …

Read More »

ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ಲಘು ರೈಲು ಸಾರಿಗೆ.

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ, ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರಗಳು …

Read More »

ಅಮಾನವಿಯತೆ ಮತ್ತು ಜೀವ ಬೆದರಿಕೆ ಹಾಕಿದ ಪುಂಡರು.

ದಿನೇ ದಿನೇ ತಿರುವು ಪಡೆಯುತಿರುವ ಯುವಕನ ಬೆತ್ತಲೆ ಪ್ರಕರಣ.ಯುವಕನ ಬೆತ್ತಲೆಗೊಳಿಸಿದ ಹಲ್ಲೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ಐದು ಜನ ಯುವಕರು ಹಲ್ಲೆ ಮಾಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು, ಆದರೆ ಹಲ್ಲೆ ಮಾಡಿದ್ದು ಮಾ ತ್ರ 20ಕ್ಕೂ ಯುವಕರ ಟೀಮ್ ಎಂದು ಹೊಸ ವಿಡಿಯೋ ಈಗ ವೈರಲ್ ಆಗಿದೆ. ಯುವಕನ ಮೇಲೆ ಹಲ್ಲೆ ಮಾಡಿದ್ದು ಐದು ಜನ ಯುವಕರ ಟೀಮ್ ಅಲ್ಲವೇ ಅಲ್ಲ ,ಹಲ್ಲೆ ಮಾಡಿದ್ದು …

Read More »

ಹುಬ್ಬಳ್ಳಿಯಲ್ಲಿ ಪೊಲೀಸ ಪೇದೆ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Read More »

ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಆಯ್ಕೆ

ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಮತ್ತು ಉಪಾಧ್ಯಕ್ಷರಾಗಿ ಸುಜಾತ ರಂಗಣ್ಣವರ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎಮ್.ಎಸ್.ಪಟ್ಟವರ್ಧನ ತಿಳಿಸಿದ್ದಾರೆ. ಶಾಲೆಯಲ್ಲಿಂದು ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಎಸ್ಟಿಎಂಸಿ ಅಧ್ಯಕ್ಷ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ …

Read More »

ಜನರ ಮನಸೆಳೆದ ಜವಾರಿ ಎತ್ತುಗಳು

ನವಲಗುಂದ : ಪಟ್ಟಣದ ಅಕ್ಕಿ ಓಣಿಯಲ್ಲಿ ಮಣ್ಣೆತ್ತಿನ ಅಮವಾಸ್ಯೆಯ ಮಾಸದ ಕೊನೆಯ ವಾರದ ಪ್ರಯುಕ್ತ ಗುರು ಹಿರಿಯರು, ಯುವಕರು ಸೇರಿ ಮಣ್ಣಿನಿಂದ ಜವಾರಿ ಎತ್ತಿನ ಹೋರಿಗಳನ್ನು ನಿರ್ಮಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿರುತ್ತಾರೆ. ವಿವೇಕಾನಂದ ಯುವಕ ಮಂಡಳಿ ಅಕ್ಕಿ ಓಣಿಯ ಯುವಕರ ಕೈಯಲ್ಲಿ ಮೂಡಿಬಂದ ಎತ್ತುಗಳು ನೋಡುವರ ಕಣ್ಮನ ಸೆಳೆಯುತ್ತಿವೆ.

Read More »