Breaking News

ಜಿಲ್ಲೆ

ಮುಂದಿನ ಸಚಿವ ಸಂಪುಟ ಸಭೆಯನ್ನು ಚಾಮರಾಜನಗರದಲ್ಲಿ ನಡೆಸಲು ಸರ್ಕಾರ ನಿರ್ಧಾರ

ಮೈಸೂರು: ಜನವರಿ ಎರಡನೇ ವಾರದಲ್ಲಿ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. ಚಾಮರಾಜನಗರ ಜಿಲ್ಲೆಯ ಆದಿವಾಸಿಗಳು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು 2002 ರಲ್ಲಿ ಬಿಳಿಗಿರಿರಂಗ ಬೆಟ್ಟದಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು, …

Read More »

ರಾಜ್ಯದಲ್ಲಿ ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ: ಕೇಂದ್ರ ಸಚಿವ ಎಚ್ ಡಿ ಕೆ

ಹಾಸನ: ರಾಜ್ಯದಲ್ಲಿ ಮತ್ತೊಮೆ ಮೈತ್ರಿ ಸರ್ಕಾರ ಶೀಘ್ರದಲ್ಲೇ ಬಂದೇ ಬರುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದೆ ಜೆಡಿಎಸ್‌‍-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದರು. 2006ರಲ್ಲಿ ಜೆಡಿಎಸ್‌‍ ಮತ್ತು ಬಿಜೆಪಿ ಸಮಿಶ್ರ …

Read More »

ಭೂಮಿಯಲ್ಲಿ ತೇವಾಂಶ ಹೆಚ್ಚಿದ ಕಾರಣ ಕಡಲೆಗೆ ಸಿಡಿರೋಗದ ಬಾಧೆ: ರೈತರಲ್ಲಿ ಆತಂಕ

ರೋಣ: ತಾಲ್ಲೂಕಿನ ವಿವಿಧೆಡೆ ಈಚೆಗೆ ಸುರಿದ ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಿದ ಕಾರಣ ಇಲ್ಲಿನ ಪ್ರಮುಖ ಬೆಳೆಯಾದ ಕಡಲೆಗೆ ಸಿಡಿರೋಗದ ಬಾಧೆ ಎದುರಾಗಿದೆ. ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ಕಳೆದ ಬಾರಿ ನಿರೀಕ್ಷಿತ ಬೆಲೆ ಸಿಗದ ಕಾರಣ ಈ ಬೆಳೆಗಳ ಬಿತ್ತನೆ ಕ್ಷೇತ್ರದ ಪ್ರಮಾಣ ತಾಲ್ಲೂಕಿನಲ್ಲಿ ಕಡಿಮೆಯಾಗಿದೆ. ಕಳೆದ ಬಾರಿ ಕಡಲೆ ಬೆಳೆಯ ಉತ್ತಮ ಇಳುವರಿ ಸಿಕ್ಕಿದ್ದರಿಂದ ಈ ಬಾರಿಯೂ ಅದೇ ನಿರೀಕ್ಷೆಯೊಂದಿಗೆ ಕಡಲೆ ಬಿತ್ತನೆ ಮಾಡಲಾಗಿತ್ತು. ಆದರೆ, ಈಚೆಗೆ …

Read More »

ಕೆಜಿಎಫ್ ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಅಗತ್ಯ ಕ್ರಮ: ಕೇಂದ್ರ ಸಚಿವ ಪಿಯೂಷ್ ಗೋಯಲ್

ಹಾಸನ: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಕಾಫಿ ಬೆಳೆಗಾರರ ಒಕ್ಕೂಟ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2011 ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗಿದೆ. ಇದು ಕಾಫಿಯ ಗುಣಮಟ್ಟವನ್ನು …

Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಇಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರೈತ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ 12 ಲಕ್ಷ ನೌಕರರಿದ್ದಾರೆ. ದಕ್ಷಿಣ ಭಾರತದಲ್ಲಿ ಶೇ 99ರಷ್ಟು ಉತ್ತರ ಭಾರತದ ಸಿಬ್ಬಂದಿಯೇ ಇದ್ದಾರೆ. ಕನ್ನಡಿಗರಿಗೂ ಅವಕಾಶ …

Read More »

ಗದಗ: ದುಷ್ಕರ್ಮಿಗಳಿಂದ ಮುಖ್ಯ ಶಿಕ್ಷಕಿಯ ಭೀಕರ ಕೊಲೆ

ಗದಗ: ರೊಟ್ಟಿ ಮಾಡುವ ಕ್ವಾಮಣಗಿಯಿಂದ ತಲೆಗೆ ಹೊಡೆದು ಮುಖ್ಯ ಶಿಕ್ಷಕಿಯನ್ನು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (55) ಮೃತ ಮುಖ್ಯ ಶಿಕ್ಷಕಿಯಾಗಿದ್ದು, ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ …

Read More »

ಬೆಳೆ ವಿಮೆ ಕಟ್ಟಿರುವ ರೈತರಿಗೆ ಮೋಸ ಆಗದಂತೆ ನಿಗಾ ವಹಿಸಿ: ಹಾಸನ ಜಿಲ್ಲಾಧಿಕಾರಿ ಎಚ್ಚರಿಕೆ

ಹಾಸನ: ಜಿಲ್ಲೆಯಲ್ಲಿ ಬೆಳೆ ವಿಮೆ ಕಟ್ಟಿರುವ ರೈತರಿಗೆ ಯಾವುದೇ ರೀತಿಯಲ್ಲಿ ಮೋಸ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಓರಿಯೆಂಟಲ್ ವಿಮಾ ಕಂಪನಿಯ ಪ್ರತಿನಿಧಿಗಳು, ರೈತರಿಂದ ಲಂಚ ಕೇಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಜೊತೆಗೆ ರೈತರಿಗೆ ಬೆದರಿಕೆ ಹಾಕಿ, ಇಳುವರಿಯನ್ನು ನಾವು ಹೇಳಿದಂತೆ ಬರೆದುಕೊಡಿ ಎಂದು ಕೇಳುತ್ತಿರುವುದು …

Read More »

ರಾಜ್ಯದಲ್ಲಿ 1.20 ಲಕ್ಷ ಕೋಟಿ ರೂ. ಅಭಿವೃದ್ದಿಗೆ ಮೀಸಲು: ಸಿಎಂ ಸಿದ್ದರಾಮಯ್ಯ

ಗದಗ : 1,20,000 ಕೋಟಿ ಹಣವನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,20,000 ಕೋಟಿ ಹಣವನ್ನು ಈ …

Read More »

ರೈತರಿಗೆ ಸಿಹಿಸುದ್ದಿ: ತುಂತುರು ನೀರಾವರಿ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಯೋಜನೆಯಡಿ ಜೆಟ್ ಪೈಪು/ಸ್ಪಿಕ್ಲಲ್ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಶಿವಮೊಗ್ಗ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಶೇ. 90 ರ ಸಹಾಯಧನದಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸಲಾಗುತ್ತಿದ್ದು, ಅವಶ್ಯಕತೆ ಇರುವ ರೈತರು ಸದರಿ ಯೋಜನೆಯ ಉಪಯೋಗ ಪಡೆಯಲು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಪಹಣ, …

Read More »

ಮಂಗಳೂರು: 166 ಎಕ್ರೆ ಜಮೀನು ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಹಂಚಲು ರಾಜ್ಯ ಸರ್ಕಾರಕ್ಕೆ ಡಿಸಿ ಪತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳಿಕೆಯಾದ166 ಎಕ್ರೆ ಡಿ.ಸಿ. ಮನ್ನಾ (ಡಿಪ್ರಸ್ಡ್ ಕ್ಲಾಸ್‌) ಜಮೀನನ್ನು ಪ. ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀಡುವಂತೆ ದಲಿತ ನಾಯಕರು ಆಗ್ರಹಿಸಿದ್ದು, ಈ ಬಗ್ಗೆ ಪಿಟಿಸಿಎಲ್‌ ಕಾಯ್ದೆಯಡಿ ನಿಯಮ ರೂಪಿಸಲು ಸರಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ /ಪಂಗಡದ ಮುಖಂಡರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸಂಸ ಮುಖಂಡ ದೇವದಾಸ್‌ ಎಂ. …

Read More »