admin
January 30, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ : ಪ್ರವಾಹ, ಕೊರೊನಾದಂತಹ ಸಂಕಷ್ಟಗಳಿಲ್ಲದಿದ್ದರೂ ಕಾಂಗ್ರೆಸ್ ನಿಂದ ಅಭಿವೃದ್ಧಿ ಕಾರ್ಯ ಮಾಡಲು ಆಗಿರಲಿಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಹೀನಾಯವಾಗಿ ಸೋಲಿಸಿದರು ಎಂದು ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವುದಿಲ್ಲ ಎಂದೇ ಜನರು ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ ಎಂಬುವುದನ್ನು ಸಿದ್ದರಾಮಯ್ಯ ಅವರು ಒಪ್ಪಿಕೊಳ್ಳಬೇಕು. ಕಾಂಗ್ರೆಸ್ ಮುಳುಗುವ ಹಡಗಿನಂತಾಗಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಇಲ್ಲದಂತಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
Read More »
admin
January 29, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಡುಗೆ ಅನಿಲ ಕೊಳವೆ ಮಾರ್ಗ ಅಳವಡಿಸುವ ವಿಷಯದಲ್ಲಿ ಸ್ವಪಕ್ಷೀಯರಿಂದ ಟೀಕೆಗೆ ಒಳಗಾಗಿರುವ ಮೈಸೂರು-ಕೊಡಗು ಸಂಸದೀಯ ಕ್ಷೇತ್ರಕ್ಕೆ ಎರಡು ಬಾರಿ ಸಂಸದರಾಗಿರುವ ಪ್ರತಾಪ್ ಸಿಂಹ ಮೈಸೂರಿನ ಶಾಸಕರಿಗೆ ಸಿಂಹ ಸವಾಲು ಹಾಕಿದ್ದಾರೆ. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ತಮ್ಮಕ್ಷೇತ್ರದಲ್ಲಿ ಬೆಳವಣಿಗೆಗಳು, ಅಭಿವೃದ್ಧಿ ಕಾರ್ಯಗಳ ಅಗಲಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದಾರೆ. ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು..! ಎಂದು ಘಂಟಾಘೋಷವಾಗಿ ಹೇಳಿರುವ ಸಂಸದ ಪ್ರತಾಪ್ …
Read More »
admin
January 29, 2022
Breaking News, ಗದಗ, ಜಿಲ್ಲೆ
ಗದಗ: ನಗರದ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದಲ್ಲಿ ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಶಾಕ್ ಆಗಿದ್ದಾರೆ.ಅವ್ಯವಸ್ಥೆ ಸರಿ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಮನವಿ ಮಾಡಿಕೊಂಡಿದ್ದಾರೆ. ವಸತಿ ನಿಲಯದಲ್ಲಿ ಮಾಡಿದ ಪಾಯಸದ ತುಂಬೆಲ್ಲಾ ಹುಳುಗಳು ಕಾಣಿಸಿಕೊಂಡಿವೆ. ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ (ಜ.28) ರಾತ್ರಿ ಈ ಪಾಯಸ ಮಾಡಲಾಗಿತ್ತು. ಅದನ್ನು ನೋಡಿದ ವಿದ್ಯಾರ್ಥಿಗಳು ಅರೆಕ್ಷಣ ದಂಗಾಗಿದ್ದಾರೆ. ಏಕೆಂದರೆ …
Read More »
admin
January 29, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡಿರುವ ಘಟನೆ ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲಿ ನಡೆದಿತ್ತು. ಇದೀಗ ವಿಡಿಯೋ ವೈರೆಲ್ ಆಗಿದೆ. ಈ ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತುಂಬಾ ಆಗ್ರಹಗಳು ಕೇಳಿಬಂದಿತ್ತು. ಹಾಗಾಗಿ ಖಾಸಗಿ ಶಾಲಾ ಆಡಳಿತ ಮಂಡಳಿ ತುರ್ತು ಸಭೆಯಲ್ಲಿ ಆ ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲು ತೀರ್ಮಾಣಿಸಿದ್ದಾರೆ. ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬುವರೇ ಸೇವೆಯಿಂದಲೇ ಖಾಯಂ ವಜಾಗೊಂಡಿರುವವರು.
Read More »
admin
January 28, 2022
Breaking News, ಗದಗ, ಜಿಲ್ಲೆ
ಗದಗ:ಪುರಾತನ ದೇವಸ್ಥಾನದ ಈಶ್ವರಲಿಂಗುವನ್ನೆ ಕಳ್ಳರು ಕದ್ದೊಯ್ದ ಘಟನೆ ಗಜೇಂದ್ರಗಡದ ಎಪಿಎಂಸಿ ಪುರಾತನ ದೇವಾಸ್ಥಾನದಲ್ಲಿ ನಡೆದಿದೆ. ದೇವಸ್ಥಾನದ ಕೀಲಿ ಒಡೆದು ಈಶ್ವರಪೀಠದ ಮೇಲೆ ಇದ್ದ ಈಶ್ವರಲಿಂಗುವನ್ನ ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ನಿಧಿ ಆಸೆಗಾಗಿಯೇ ಈಶ್ವಲಿಂಗುವನ್ನ ಕದಿಯಲಾಗಿದೆ ಅಂತಲೇ ಶಂಕಿಸಲಾಗಿದೆ. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
Read More »
admin
January 28, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಚಿತ್ರೀಕರಣದ ಬ್ಯೂಸಿ ಕೆಲಸದ ಮಧ್ಯೆಯೂ ಶಿವಣ್ಣ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳಿಗೆ ಬಾಡೂಟ ಬಡಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ ಹಿನ್ನಲೆ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ. ಮೈಸೂರಿನ ದೊನ್ನೆ ಬಿರಿಯಾನಿ ಪ್ಯಾಲೇಸ್ ವತಿಯಿಂದ ಸಚಿನ್ ಗೌಡ ಎನ್ನುವವರು ಶಕ್ತಿಧಾಮದ ಮಕ್ಕಳಿಗೆ ಬಿರಿಯಾನಿ ಹಾಗೂ ಕಬಾಬ್ ಊಟ ಹಂಚಿದ್ದಾರೆ.
Read More »
admin
January 28, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ರಾಮದಾಸ್ ಮೋದಿಗಿಂತ ಸೀನಿಯರ್.ಅವರಿಗಿಂತ ಬುದ್ದಿವಂತರು ಜ್ಞಾನಿಗಳು.ಕೇವಲ ಬ್ಯಾನರ್ ಅಲ್ಲಿ ಮೋದಿ ಪೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ.ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ ಎಂದುಪ್ರತಾಪ್ ಸಿಂಹ ಹೇಳಿದರು. ಸಂಸದ ಪ್ರತಾಪ್‌ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನಡುವೆ ಶೀತಲ ಸಮರ ಮುಂದುವರೆದಿದೆ. ಮನೆಮನೆಗೆ ಗ್ಯಾಸ್ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ಶಾಸಕ ರಾಮದಾಸ್ ಪತ್ರ ಬರೆದಿರುವುದಕ್ಕೆ ಪ್ರತಾಪ ಸಿಂಹ ಕೆಂಡಾಮಂಡಲರಾಗಿದ್ದಾರೆ. ಯೋಜನೆಯನ್ನು ಕಾಂಗ್ರೆಸ್ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ …
Read More »
admin
January 27, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರದ ಗುಲ್ಲು ಎದ್ದಿರುವಾಗ ನಾಯಕರ ನಡುವೆ ವಾಕ್ ಸಮರಕ್ಕೂ ವೇದಿಕೆ ಸಿಕ್ಕಿದೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಸಿ.ಸಿ. ಪಾಟೀಲ್ ಟಾಂಗ್ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಸಿಸಿ ಪಾಟೀಲ್ ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗದ ಉತ್ತರ ನೀಡಿದರು. ಯಾವ ಕಾರಣಕ್ಕೂ ಅವರನ್ನ ವಾಪಸ್ ತಗೊಳೋದಿಲ್ಲ ಅಂತ ಹೇಳಿದ್ದು ಯಾರು..? ಬಿಟ್ಟು ಹೋದವರನ್ನ ವಾಪಸ್ ತಗೊಳೋದಿಲ್ಲ ಅಂತ ಗುದ್ದಿ ಹೇಳಿದವರು ಯಾರು? ಬಿಟ್ಟು ಹೋದವನ್ನ ಯಾವ ಕಾಲಕ್ಕೂ …
Read More »
admin
January 26, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಇಲ್ಲಿನ ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರ ‘ಶಕ್ತಿಧಾಮ’ದಲ್ಲಿ ನಟ ಶಿವರಾಜಕುಮಾರ್ ಅವರು ಬುಧವಾರ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿ, ಧ್ವಜಾರೋಹಣ ನೆರವೇರಿಸಿದರು. ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ನಟ ಗುರುದತ್ ಅವರೊಂದಿಗೆ ಇಲ್ಲಿಗೆ ಬಂದ ಅವರು ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.
Read More »
admin
January 26, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಖ್ಯಾತ ಗಮಕ ಕಲಾವಿದರಾದ ಹೆಚ್.ಆರ್.ಕೇಶವಮೂರ್ತಿ ಅವರಿಗೆ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕಳೆದ ಹಲವಾರು ದಶಕಗಳಿಂದ ಹೆಚ್.ಆರ್.ಕೇಶವಮೂರ್ತಿ ಅವರು ನಿರಂತರವಾಗಿ ಗಮಕ ಕಾರ್ಯಕ್ರಮಗಳ ಮೂಲಕ ಮಾಡಿರುವ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ. ಹೆಚ್.ಆರ್.ಕೇಶವಮೂರ್ತಿ ಅವರದು ಶಿವಮೊಗ್ಗ ಸಮೀಪದ ಮತ್ತೂರು ಹೊಸಳ್ಳಿ. ರಾಮಸ್ವಾಮಿ ಶಾಸ್ತ್ರಿ-ಲಕ್ಷ್ಮೀದೇವಮ್ಮ ದಂಪತಿ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ, ತಾಯಿ ರಾಗವಾಗಿ …
Read More »