admin
January 13, 2022
Breaking News, ಕರ್ನಾಟಕ, ಶಿವಮೊಗ್ಗ
ಶಿವಮೊಗ್ಗ : ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢಪಟ್ಟಿದೆ. ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಕುರಿತು ಮಾಹಿತಿ ನೀಡಿರುವಂತ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ನಿನ್ನೆ ಸೊರಬ ತಾಂತ್ರಿಕ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂದು ವೈದ್ಯರು ಮತ್ತು ಸಿಬ್ಬಂದಿಯ ತಂಡ ರಚಿಸಿ ಕಾಲೇಜಿನ …
Read More »
admin
January 12, 2022
Breaking News, ಕರ್ನಾಟಕ, ಶಿವಮೊಗ್ಗ
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸ್ಫೋಟದ ನಡುವೆ ಎಲ್ಲರೂ ಬೇಸುತ್ತು ಹೋಗಿದ್ದಾರೆ. ಅದರ ನಡುವೆ ಶಿವಮೊಗ್ಗ ಜನತೆಗೆ ಮತ್ತೊಂದು ವಿಷಯ ಅಘಾತಕಾರಿಯಾಗಿ ಸಂಭವಿಸಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ ಆರ್ ಅವರನ್ನು ನೇಮಕ ಮಾಡಲಾಗಿದೆ.
Read More »
admin
January 12, 2022
Breaking News, ಕರ್ನಾಟಕ, ಗದಗ
ಗದಗ: ನಿಂತಿದ್ದ ಗೂಡ್ಸ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವಾಹನ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸವೇಶ್ವರ ನಗರದಲ್ಲಿ ನಡೆದಿದೆ. ನಿಂತಿದ್ದ ಗೂಡ್ಸ್ ಗಾಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ವಾಹನ ಸುಟ್ಟು ಕರಕಲಾಗಿದೆ. ರಬ್ಬಾನಿಸಾಬ್ ಮೀರಚ್ಚನೆ ಎಂಬುವರಿಗೆ ಸೇರಿದ ವಾಹನಕ್ಕೆ ಬೆಂಕಿ ತಗುಲಿದೆ. ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಓಣಿಯ ನಿವಾಸಿಗಳು ಅಗ್ನಿಶಾಮಕ ಇಲಾಖೆಗೆ ಫೋನ್ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು …
Read More »
admin
January 7, 2022
Breaking News, ಕರ್ನಾಟಕ, ಮೈಸೂರು
50 ಅಂಗಡಿಗಳ ತೆರುವುಮೈಸೂರು: 50 ಅಂಗಡಿಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇಲ್ಲಿನ ದೇವನೂರು 3ನೇ ಹಂತದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪೂರ್ವ ಕಚೇರಿಯ ಅಕ್ರಮವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನುಶುಕ್ರವಾರ ತೆರವುಗೊಳಿಸಿದರು. ಇಲ್ಲಿ ಅನಧಿಕೃತವಾಗಿ ವಾಹನ ಚಾಲನಾ ತರಬೇತಿ ಶಾಲೆಗಳು, ಚಹಾದಂಗಡಿಗಳು, ಹೋಟೆಲ್ ನಿರ್ಮಾಣವಾಗಿದ್ದವು. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ಮಾಲೀಕರು ತೆರವುಗೊಳಿಸಿರಲಿಲ್ಲ.
Read More »
admin
January 7, 2022
Breaking News, ಕರ್ನಾಟಕ, ಮಂಗಳೂರು
ಮಂಗಳೂರು: ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.
Read More »
admin
January 7, 2022
Breaking News, ಕರ್ನಾಟಕ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋವಿಡ್ ಏರಿಕೆ ಆಗಿದ್ದು ಆತಂಕ ಸೃಷ್ಟಿಸಿದ್ದು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಕೋವಿಡ್ ರೂಪಾಂತರಿ ಓಮಿಕ್ರಾನ್ ಮಣಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುತ್ತಿದೆ.ಕರ್ನಾಟಕದ ರಾಜಾಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ.. ಉದ್ಯೋಗ ಹಾಗೂ ಶಿಕ್ಷಣಕ್ಕೆ ಮೈಸೂರಿನ ಬಹುತೇಕರು ಬೆಂಗಳೂರನ್ನು ಆಶ್ರಯಿಸಿದ್ದಾರೆ. ಹೀಗಾಗಿ ರೋಗ ಲಕ್ಷಣ ರಹಿತರು ಏನಾದರೂ ನಗರದಲ್ಲಿ ಓಡಾಡಿದರೆ ಇದರಿಂದ ಸೋಂಕು ಮತ್ತಷ್ಟು ಜನರಿಗೆ ಹರಡುವ ಸಾಧ್ಯತೆ ಇದೆ.
Read More »
admin
January 6, 2022
Breaking News, ಕರ್ನಾಟಕ, ಮಂಗಳೂರು
ಮಂಗಳೂರು; ಕರ್ನಾಟಕದಲ್ಲಿ ಜನಸಂದಣಿ ಸೇರುವನ್ನು ತಡೆಯಲು ಅನೇಕ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹೊಸ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದಾಗಿ ಈ ನಿಯಮಗಳ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ. ದೇವಸ್ಥಾನಗಳಲ್ಲೂ ಕೇವಲ ದರ್ಶನ ಮಾತ್ರ ಎಂಬ ನಿಯಮ ತಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಜನವರಿ 16ರವರೆಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಈ ಬಗ್ಗೆ ದೇವಸ್ಥಾನದ …
Read More »
admin
January 5, 2022
Breaking News, SPECIAL NEWS, ಕರ್ನಾಟಕ, ಶಿವಮೊಗ್ಗ
ಶಿವಮೊಗ್ಗ: ಕೊರೋನಾದಿಂದಾಗಿ ಲಾಕ್ ಡೌನ್ ಮಾಡುವುದರಿಂದ ಜನರು ತಕರಾರು ಎತ್ತುವುದು ನಿಜ.ಓಮಿಕ್ರಾನ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ಸರಕಾರ ಘೋಷಿಸಿರುವ ನೈಟ್ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವುದು ಗೊತ್ತೇ ಇದೆ. ಆದರೆ ಸರಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೂ ಅಸಮಾಧಾನ ವ್ಯಕ್ತವಾಗುತ್ತಿರುವುದು ರಾಜಕೀಯದಲ್ಲಿ ಹೊಸ ವಿಚಾರವಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚುತ್ತಿದೆ, ಅಲ್ಲಿ ಕರ್ಫ್ಯೂ ಹಾಕಲಿ, ರಾಜ್ಯದ ಇತರ ಕಡೆ ಯಾಕೆ ಎಂದು ಗ್ರಾಮೀಣಾಭಿವೃದ್ದಿ ಮತ್ತು …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ : ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ.ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ …
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ
ಶಿವಮೊಗ್ಗ : ಕೊರೊನಾ ಟಫ್ ರೂಲ್ಸ್ ಜನ ಸಾಮಾನ್ಯರಿಗೆ ಅನ್ವಯವಾಗುವಂತೆ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಸಹ ಪ್ರತಿ ದಿನ ಸಾವಿರಾರ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ರಾಜ್ಯ ಸರ್ಕಾರ ತಜ್ಞರ ಸಲಹೆ ಪಡೆದು ಕಠಿಣ ನಿಯಮ ಜಾರಿ ಮಾಡಲಾಗಿದೆ. ನೈಟ್ ಕಫ್ರ್ಯೂ …
Read More »