admin
December 23, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ಮೈಸೂರು
ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ. ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಸುದ್ದಿ, ಹಾಸನ
ಹಾಸನ: ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನಮ್ಮ ಮಗಳು …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು, ಸುದ್ದಿ, ಹಾಸನ
ಹಾಸನ: ಸಕಲೇಶಪುರ ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡರಜಗಲಿ ಗ್ರಾಮದಲ್ಲಿ ಯುವಕರೇ ಅಕ್ರಮ ಮದ್ಯ ಮಾರಾಟ ತಡೆಗೆ ಮುಂದಾಗಿದ್ದು, ಗ್ರಾಮಕ್ಕೆ ತಲುಪಿದ್ದ ಮದ್ಯ ವಶಕ್ಕೆ ಪಡೆದು ನಡು ರಸ್ತೆಯಲ್ಲಿಯೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 15 ದಿನಗಳ ಹಿಂದೆ ಗ್ರಾಮ ಚನ್ನಯ್ಯ ಅವರ ಪತ್ನಿ ಮದ್ಯ ಸೇವನೆಯಿಂದ ಮೃತಪಟ್ಟಿದ್ದರು. ಇದರಿಂದ ಎಚ್ಚೆತ್ತ ಗ್ರಾಮದ ಯುವಕರು ಗ್ರಾಮದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲು ನಿರ್ಧರಿಸಿದ್ದರು. ಅದರಂತೆ ಬ್ಯಾಡರಜಗಲಿ ಗ್ರಾಮದಲ್ಲಿ ಮದ್ಯ ಮಾರಾಟ …
Read More »
admin
December 18, 2021
Breaking News, ಕರ್ನಾಟಕ, ಬಾಗಲಕೋಟೆ, ಬೆಂಗಳೂರು
ವಿಜಯಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಜಮೀನಿನಲ್ಲಿ ಬೆಂಕಿ ತಗುಲಿ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಕಡಣಿ ಗ್ರಾಮದಲ್ಲಿ ನಡೆದಿದೆ. ರೈತರಾದ ಪ್ರೇಮಾನಂದ ಗುಗ್ಗವಾಡ ಎಂಬುವವರಿಗೆ ಸೇರಿದ ಜಮೀನು ಬೆಂಕಿಗಾಹುತಿ ಆಗಿದ್ದು , ಲಕ್ಷಾಂತರ ಮೌಲ್ಯದ ಕಬ್ಬು ವಿದ್ಯುತ್ ಸ್ಪರ್ಶದಿಂದ ಹಾನಿಯಾಗಿದೆ. ಮಾಹಿತಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ, ಆಲಮೇಲ ಪೊಲೀಸ ಠಾಣಾ …
Read More »
admin
December 15, 2021
Breaking News, ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು: ಕರಾವಳಿಯ ಜನ ಭಯ, ಭಕ್ತಿಯಿಂದ ಆರಾಧಿಸುವ ದೈವಸ್ಥಾನಗಳಿಗೆ ನುಗ್ಗಿ ದೈವಗಳ ಆಭರಣ ಕದಿಯುತ್ತಿದ್ದ ಕುಖ್ಯಾತ ಕಳ್ಳರ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಒಂಟಿ ಮನೆಗಳು, ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ಈ ಖದೀಮರು ಬಳಿಕ ಒಂದು ಚೂರು ಸಾಕ್ಷ್ಯ ಸಿಗದ ರೀತಿ ಕೆಲಸ ಮುಗಿಸುತ್ತಿದ್ದರು.ಆದರೆ ಈಗ ಕಳ್ಳರ ಪಾಪದ ಕೊಡ ತುಂಬಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳರ ಮೂಲಕ ಒಟ್ಟು 16 ಕಳ್ಳತನ ಪ್ರಕರಣಗಳಿಗೆ ಇತಿಶ್ರೀ …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು : ಹಿಂದೂ ಧರ್ಮದ ಮಹಿಳೆಯನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೂರ್ ಜಹಾನ್ ಅವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 8ರಂದು ಮಂಗಳೂರಿನ ಮೋರ್ಗನ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ನಾಗೇಶ್ ಎಂಬ ವ್ಯಕ್ತಿ ತನ್ನಿಬ್ಬರು ಮಕ್ಕಳು ಮತ್ತು ಹೆಂಡತಿಯನ್ನು …
Read More »
admin
December 4, 2021
Breaking News, ಕರ್ನಾಟಕ, ಮೈಸೂರು
ಮೈಸೂರು: ಅಂಬೇಡ್ಕರ್ ಪ್ರತಿಮೆ ವಶ ಹಿನ್ನೆಲೆಯಲ್ಲಿ ಪಡುವಾರಹಳ್ಳಿ ನಿವಾಸಿಗಳು ಹಾಗೂ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಮೈಸೂರಿನ ಮಾತೃ ಮಂಡಳಿ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾತೃ ಮಂಡಳಿ ವೃತ್ತ ಬಂದ್ ಮಾಡಿದ್ದು, ಇದರಿಂದಾಗಿ ಕೆಲ ಸಮಯ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಶಾಸಕ ಎಲ್.ನಾಗೇಂದ್ರ, ನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ಡಿಸಿಪಿ ಪ್ರದೀಪ್ ಗುಂಟಿ ಸ್ಥಳಕ್ಕಾಗಮಿಸಿ ವಾತಾವರಣವನ್ನು ತಿಳಿಗೊಳಿಸಲು …
Read More »
admin
December 2, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ. ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್ವೈ ಪ್ರಚಾರದ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಪರಿಷತ್ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ …
Read More »
admin
December 2, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ. ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮಂಗಳೂರಿನ ಕೆ.ಸಿ ರೋಡ್ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ …
Read More »