Breaking News

ಜಿಲ್ಲೆ

ಬೆಳಗಾವಿಯಲ್ಲಿ ಅಕಾಲಿಕ ಮಳೆಗೆ ಇಬ್ಬರು ಸಾವು; 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತಕ್ಕೆ ಹಾನಿ

ಸಾಂದರ್ಭಿಕ ಚಿತ್ರ ಬೆಳಗಾವಿ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ 500 ಹೆಕ್ಟೇರ್ ಪ್ರದೇಶದ ದ್ರಾಕ್ಷಿ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್‌ ವಿವರಿಸಿದರು. ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್‌ ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.230ರಷ್ಟು ಹೆಚ್ಚು ಮಳೆಯಾಗಿದೆ. ನವೆಂಬರ್ 1ರಿಂದ 20ರವರೆಗೆ ವಾಡಿಕೆಯಂತೆ 21 ಮಿ.ಮೀ ಮಳೆ ಆಗಬೇಕಿತ್ತು. ಈ ಅವಧಿಯಲ್ಲಿ ಬೆಳಗಾವಿ …

Read More »

ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ

ಕಾರವಾರ: 2 ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿರುವ ಘಟನೆ ಹೊನ್ನಾವರದ ಆರೊಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ, ತಪಾಸಣೆ ನಡೆಸಿ 500 ಕ್ವೀಂಟಲ್ ಅಕ್ಕಿ, ವಾಹನ ಸೇರಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. …

Read More »

ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಡಾ.ಡಿ.ತಿಮ್ಮಯ್ಯ ಕಣಕ್ಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಕಾಂಗ್ರೆಸ್​ನ ಮತ್ತೋರ್ವ ಸದಸ್ಯ ಹಿಂದೆ ಸರಿದಿದ್ದಾರೆ. ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್​ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಇವರ ಬದಲಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ ತಾವೇ ಈ ಬಾರಿ ಪರಿಷತ್ ಚುನಾವಣೆಯ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದುವರೆಗೂ 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ತಿಮ್ಮಯ್ಯ ಅವರು ಇಂದು ಬೆಂಗಳೂರಿಗೆ …

Read More »

ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

ಗದಗ: ಗಜೇಂದ್ರಗಡ ತಾಲೂಕಿನ ಹಾಲಕೇರಿ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಾಲಕೇರಿ ಮಠದ ಪೀಠಾಧಿಪತಿ ಅಭಿನವ ಅನ್ನದಾನೇಶ್ವರ ಮಹಾ ಸ್ವಾಮೀಜಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆ ಉಸಿರೆಳೆದಿದ್ದಾರೆ. ಶಿವಯೋಗ ಮಂದಿರ ಅಧ್ಯಕ್ಷರು ಆಗಿದ್ದ ಸ್ವಾಮೀಜಿ ಅವರು ನವೆಂಬರ್ 8, 9, 10ರಂದು ಮಠಕ್ಕೆ ನೂತನ ಚಿರ ಪಟ್ಟಾಧಿಕಾರ ಕಾರ್ಯಕ್ರಮ ನಡೆಸಿದ್ದರು. ತಮ್ಮ ಸ್ಥಾನಕ್ಕೆ ನೂತನವಾಗಿ ಮುಪ್ಪಿನ …

Read More »

ಅತೀವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸುದರೇಶಬಾಬು ಭೇಟಿ

ಶಿರಹಟ್ಟಿ: ವಾಯುಭಾರ ಕುಸಿತದಿಂದ ಉಂಟಾದ ಅಕಾಲಿಕವಾಗಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ರವಿವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ತಾಲೂಕಿನ ತಂಗೋಡ, ತೊಳಲಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹಾನಿಗೊಳಗಾದ ಬೆಳೆಯ ಸ್ಥಳ ಪರಿಶೀಲನೆಯನ್ನು ತಹಶೀಲ್ದಾರ ನೇತೃತ್ವದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ನಿಖರ ವರದಿ ನೀಡಬೇಕು. ಅಲ್ಲದೆ ಮಳೆಯಿಂದ ಹಾನಿಗೊಳಗಳಾದ ಮನೆಗಳ ಮಾಹಿತಿಯನ್ನು …

Read More »

ರಾಜ್ಯ ಹೆದ್ದಾರಿಯಲ್ಲಿ ಸಸಿನೆಟ್ಟು ಕರವೇ ಪ್ರತಿಭಟನೆ

ಲಕ್ಷ್ಮೇಶ್ವರ :ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರಿಂದ ರಸ್ತೆ ಹದಗೆಟ್ಟರ ಬಗ್ಗೆ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ಮಾಡಿ ರಸ್ತೆಯಲ್ಲಿ ಸಸಿ ನೆಟ್ಟರು ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರುಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ್ ಹೊಗೆಸೊಪ್ಪಿನ ಮಾತನಾಡಿ ಕಳೆದ 10 ರಿಂದ 15ವರ್ಷದಿಂದ ಹದಗೆಟ್ಟಿ ರಸ್ತೆ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಹಾಗೂ ಪಟ್ಟಣದ ಎಲ್ಲ ರಸ್ತೆಗಳು ಹದಗೆಟ್ಟು ಹೋಗಿದೆ ನಮ್ಮ ಜಿಲ್ಲೆಯವರಾದ ಲೋಕೋಪಯೋಗಿ ಸಚಿವರಾದ …

Read More »

ಬೆಳೆಹಾನಿ ಸಮೀಕ್ಷೆ ಮಾಡದ ಆರೋಪ- ರೈತರಿಂದ ಅಧಿಕಾರಿಗೆ ತರಾಟೆ

ಲಕ್ಷ್ಮೇಶ್ವರ: ರೈತರ ಸಮಸ್ಯೆಗಳಿಗೆ ಸ್ಪಂದಿಸಿತ್ತಿಲ್ಲ ಎಂದು ಆರೋಪಿಸಿ ಸಮೀಪದ ಯತ್ನಳ್ಳಿ ಗ್ರಾಮದ ರೈತರು ಗ್ರಾಮಕ್ಕೆ ಆಗಮಿಸಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿ ಎಸ್.ಬಿ.ಪಾಟೀಲ್ ಅವರಿಗೆ ದಿಗ್ಭಂಧನ ಹಾಕಿದರಲ್ಲದೇ ಗ್ರಾಮದ ಚಾವಡಿಯಲ್ಲಿ ಕೂಡಿ ಹಾಕಿರಿವ ಘಡನೆ ನಡೆಯಿತು. ಕಳೆದ ತಿಂಗಳು ಸುರಿದ ಭಾರಿ ಮಳೆಗೆ ತೋಟಗಾರಿಕೆ ಬೆಳೆಗಳು ನಾಶವಾಗಿದ್ದವು. ಅಧಿಕಾರಿಗಳು ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ ಕ್ಯಾರೆ ಎನ್ನದ ಅಧಿಕಾರಿಗಳು ನಿರ್ಲಕ್ಷ್ಯ ತೊರಿದ್ದರು. ಇದರಿಂದ ರೈತರು …

Read More »

ಹಳ್ಳದ ನೀರಲ್ಲಿ ನಿತ್ಯ ಸರ್ಕಸ್, ಮನ ಕಲಕುವಂತಿದೆ ವಿದ್ಯಾರ್ಥಿನಿಯ ಮನವಿ-ಕೆಳೋರ ಯಾರ ಈ ಗ್ರಾಮಸ್ಥರ ಮನವಿ

ವಿದ್ಯಾರ್ಥಿ ಕೈ ಮುಗಿದ ಮನವಿ ಮಾಡುತ್ತಿರೋ ಸಾಂದರ್ಭಿಕ ಚಿತ್ರ ಕಾರವಾರ: ಅದು ನದಿಯಂಚಿನ ಪುಟ್ಟ ಗ್ರಾಮ. ಮಳೆಗಾಲದಲ್ಲಿ ಹೊರ ಊರಿನ ಸಂಪರ್ಕ ಕಳೆದುಕೊಳ್ಳುವ ಈ ಗ್ರಾಮಸ್ಥರ ಯಾತನೆ ಯಾರಿಗೂ ಬೇಡವೇ ಬೇಡ. ತುಂಬಿ ಹರಿಯುವ ಹಳ್ಳದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಇದ್ದೂ ಇಲ್ಲದಂತಾಗಿದೆ. ಹೌದು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಏಳು ದಶಕಗಳು ಕಳೆದರೂ ಕೂಡ ಕೆಲ ಹಳ್ಳಿಗಳು ಕನಿಷ್ಠ …

Read More »

ಕೇರಳ ಕಣ್ಣೂರು-ಮಂಗಳೂರು ಪ್ಯಾಸೆಂಜರ್ ರೈಲು ಪುನಾರಂಭಕ್ಕೆ ವಿದ್ಯಾರ್ಥಿಗಳ ಒತ್ತಾಯ

ಕಣ್ಣೂರು-ಮಂಗಳೂರು ನಡುವಿನ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನಃ ಪ್ರಾರಂಭಿಸುವಂತೆ ಒತ್ತಾಯಿಸಿ ಮಂಗಳೂರು ರೈಲ್ವೆ ನಿಲ್ದಾಣದ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಂಗಳೂರು: ಕೇರಳದ ಕಣ್ಣೂರು ಮತ್ತು ಮಂಗಳೂರು ನಡುವೆ ಪ್ಯಾಸೆಂಜರ್ ರೈಲು ಸಂಚಾರವನ್ನು ಪುನಾರಂಭಿಸುವಂತೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.ದಿನನಿತ್ಯ ನಗರಕ್ಕೆ ಕೇರಳದಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದು, ಪ್ಯಾಸೆಂಜರ್ ರೈಲು ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈಲು ಸಂಚಾರ ಸ್ಥಗಿತ ಹಿನ್ನೆಲೆ …

Read More »

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ-ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರು: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್​ ಪಡೆಯುವ ಸರ್ಕಾರವಿದೆ. ರಾಜ್ಯಪಾಲರು ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಪತ್ರ ಬರೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕಾಮಗಾರಿ ತೆಗೆದುಕೊಳ್ಳಬೇಕಾದರೆ ಮಂತ್ರಿಗಳಿಗೆ, ಎಂಎಲ್​ಎಗಳಿಗೆ 40 ಪರ್ಸೆಂಟ್ ಕಮಿಷನ್​ ಕೊಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದಿದೆ ಎಂದರು. ಇಷ್ಟೊಂದು ಕಮಿಷನ್​ ತೆಗೆದುಕೊಳ್ಳುವ ಸರ್ಕಾರವನ್ನು …

Read More »