BigTv News
November 16, 2024
Breaking News, ಬಾಗಲಕೋಟೆ
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, 10 ವರ್ಷಗಳಲ್ಲಿ 5,611 ಟಿಎಂಸಿ ಅಡಿ ನೀರು ಅವಿಭಜಿತ ಆಂಧ್ರ ಪ್ರದೇಶಕ್ಕೆ ಹರಿದು ಹೋಗಿದೆ. ರಾಜ್ಯಕ್ಕೆ ತನ್ನ ಪಾಲಿನ 1,170 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಕೃಷ್ಣಾ ನ್ಯಾಯಮಂಡಳಿ 2010ರಲ್ಲಿ ನೀಡಿದ ತೀರ್ಪಿನಲ್ಲಿ ಪ್ರತಿ ವರ್ಷ 177 ಟಿಎಂಸಿ ಅಡಿ ನೀರು ಬಳಕೆಗೆ ಅವಕಾಶ ನೀಡಿದೆ. ಮೂರನೇ ಹಂತದ ಯೋಜನೆ ಜಾರಿಯಾಗಿದ್ದರೆ ಕಲಬುರಗಿ, ವಿಜಯಪುರ, …
Read More »
BigTv News
November 15, 2024
Breaking News, ಮೈಸೂರು
ಮೈಸೂರು: ವಕ್ಫ್ ಆಸ್ತಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಜನಾಂದೋಲನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ. ಇಂದು ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಈ ರೆಬೆಲ್ ಟೀಂ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಕ್ಫ್‌ನವರು ವಿಧಾನಸೌಧವು ನಮ್ಮದೇ, ಮೆಜೆಸ್ಟಿಕ್ ಸಹ ನಮ್ಮದೇ. ಅಲ್ಲದೇ ಹೊಯ್ಸಳರ ಕಾಲದ ದೇವಾಲಯವು ನಮ್ಮದೇ ಅನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »
BigTv News
November 15, 2024
Breaking News, ಮೈಸೂರು
ಮೈಸೂರು: ವಿಶ್ವ ರೈತ ದಿನದ ಅಂಗವಾಗಿ ಡಿ.23ರಂದು ಮೈಸೂರಿನಲ್ಲಿ ರಾಷ್ಟ್ರೀಯ ರೈತ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳ ನೂರಾರು ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಎಲ್ಲ ಸರ್ಕಾರಗಳೂ ರೈತರಿಗೆ ಮೋಸ ಮಾಡಿವೆ, ಮಾಡುತ್ತಿವೆ. ಇದರಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳು ಕೃಷಿ ವಲಯವನ್ನು ವಶಪಡಿಸಿಕೊಳ್ಳಲು …
Read More »
BigTv News
November 14, 2024
Breaking News, ಗದಗ
ಗದಗ: ಮುಸ್ಲಿಂ ಗುತ್ತಿಗೆದಾರರಿಗೆ ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ವಿಚಾರವಾಗಿ ಮನವಿಗಳು ಬಂದಿದೆ. ಆದರೆ ಈ ಬಗ್ಗೆ ಇನ್ನು ನಿರ್ಣಯ ಮಾಡಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಮುಸ್ಲಿಂ ಸಮುದಾಯದಿಂದ ಮಾತ್ರವಲ್ಲ, ಬೇರೆ ಸಮುದಾಯದಿಂದಲೂ ಬೇಡಿಕೆ ಇವೆ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಎಸ್ಸಿ-ಎಸ್ಟಿ ಅವರಿಗೆ ಮೀಸಲಾತಿ ಕೊಡಬೇಕು ಅಂತಾ ಸರ್ಕಾರದ ನಿಲುವಿತ್ತು, ಕೊಟ್ಟಿದ್ದೀವಿ, ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗೆ ರಿಸರ್ವೇಶನ್ ಮಾಡಲಾಗಿದೆ. …
Read More »
BigTv News
November 6, 2024
Breaking News, ಮೈಸೂರು
ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ …
Read More »
BigTv News
November 6, 2024
Breaking News, ಮೈಸೂರು
ಮೈಸೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳಿಗ್ಗೆ 10.10ಕ್ಕೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸಾಥ್ ನೀಡಿದರು. ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸಿದೆ. ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ …
Read More »
BigTv News
November 5, 2024
Breaking News, ಗದಗ
ಗದಗ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 39ನೇ ಎಐಸಿಸಿ ಅಧಿವೇಶನಕ್ಕೆ ಈಗ ಶತಮಾನೋತ್ಸವ ಸಂಭ್ರಮ. ಆ ನೆನಪನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಈ ಅವಧಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು …
Read More »
BigTv News
November 2, 2024
Breaking News, ಶಿವಮೊಗ್ಗ
ಶಿವಮೊಗ್ಗ: ಶಿವಮೊಗ್ಗ ಸಮೀಪದ ಗುಡ್ಡದ ಅರಕೆರೆ ಗ್ರಾಮಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 1200 ಬಾಳೆ ಗಿಡ, 200 ಅಡಿಕೆ ಗಿಡ ನಾಶ ಮಾಡಿವೆ. ನಿನ್ನೆ ರಾತ್ರಿಯಿಂದ ಬೆಳಗಿನ ಜಾವದವರೆಗೆ ಸುಮಾರು ಆರು ಆನೆಗಳು ತೋಟದಲ್ಲೇ ಬಿಡು ಬಿಟ್ಟಿದ್ದು, ಬೆಳಗ್ಗೆ ಕೆಲಸಗಾರರು ಬಂದಾಗ ಜಾಗ ಖಾಲಿ ಮಾಡಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬಂದು ಕಚೇರಿಗೆ …
Read More »
BigTv News
October 30, 2024
Breaking News, ಹಾಸನ
ಹಾಸನ: ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು. ಕುಟುಂಬ ಸಮೇತರಾಗಿ ಇಂದು ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ. …
Read More »
BigTv News
October 29, 2024
Breaking News, ಹಾಸನ
ಹಾಸನ: ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಹಾಸನದಲ್ಲಿ ಇಂದು ಕುಟುಂಬ ಸಮೇತ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ …
Read More »