Breaking News

ಜಿಲ್ಲೆ

ರೈಲ್ವೆಯಲ್ಲಿ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ ಸೋಮಣ್ಣ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ …

Read More »

ನರೇಗಾ ಯೋಜನೆಯ ಮಾಹಿತಿ ಹಂಚಿಕೆಗೆ ಡಿಜಿಟಲ್ ತಂತ್ರಜ್ಞಾನ ಬಳಕೆ

ಕಾರವಾರ: ನರೇಗಾ ಯೋಜನೆಯ ಮಾಹಿತಿಯನ್ನು ಜನರಿಗೆ ಸುಲಭವಾಗಿ ತಲುಪಿಸಲು ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ಜನರು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ನರೇಗಾ ಯೋಜನೆ ವಿಭಾಗದ ಸಹಾಯಕ ನಿರ್ದೇಶಕ ಸಂದೀಪ್ ಕೋಠಾರಕರ ಹೇಳಿದರು. ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ಸಿದ್ದಪಡಿಸುವ ಸಲುವಾಗಿ ಐಇಸಿ ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಉದ್ಯೋಗ ಖಾತರಿ ನಡಿಗೆ …

Read More »

ಕಪ್ಪತ್ತಗುಡ್ಡದಲ್ಲಿನ ಗಣಿಗಾರಿಕೆ ಪ್ರಸ್ತಾವನೆ ತಿರಸ್ಕರಿಸಲು ಸಿಎಂ ಸಿದ್ದರಾಮಯ್ಯಗೆ ಬಸವರಾಜ ಹೊರಟ್ಟಿ ಪತ್ರ

ಗದಗ: ಕಪ್ಪತಗುಡ್ಡದಲ್ಲಿನ ಎಲ್ಲಾ 28 ಗಣಿಗಾರಿಕೆ ಪ್ರಸ್ತಾವನೆಗಳನ್ನು ತಿರಸ್ಕರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾರಿಯಿದ್ದಾರೆ. ಇತ್ತೀಚೇಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಗಣಿಗಾರಿಕೆ ಪ್ರಸ್ತಾವನೆಗಳನ್ನು ಮುಂದೂಡಿದ್ದರು. ಇದೀಗ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಗಣಿಗಾರಿಕೆ ಪ್ರಸ್ತಾವನೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ವಾರ ತೋಂಟದಾರ್ಯ ಮಠಾಧೀಶರು, ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಡಿಸಿ ಮೂಲಕ ಸಿಎಂಗೆ …

Read More »

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕಟಿಸುವರ ಮೇಲೆ ಕಾನೂನು ಕ್ರಮ: ಸಚಿವ ಪರಮೇಶ್ವರ್

ಶಿವಮೊಗ್ಗ : ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪೊಲೀಸರಿಗೆ ತಾಕೀತು ಮಾಡಿದರು. ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿದ ಬಳಿಕ ಶಿವಮೊಗ್ಗ ಜಿಲ್ಲಾ ವಿಮರ್ಶನಾ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮಕ್ಕಳ ಓದಿಗಾಗಿ ಗ್ರಂಥಾಲಯಗಳಲ್ಲಿ ಹೆಚ್ಚಿನ …

Read More »

ಶಿವಮೊಗ್ಗದಲ್ಲಿ ನೂತನ ಪೊಲೀಸ್ ಸಮುದಾಯ ಭವನ ಉದ್ಘಾಟಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಶಿವಮೊಗ್ಗ: ನಗರದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಇಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ. 500 ಸೀಟಿಂಗ್ ಸಾಮರ್ಥ್ಯ, ಊಟದ ಹಾಲ್ ಸೇರಿದಂತೆ ಸುಸಜ್ಜಿತವಾಗಿ ಭವನವನ್ನು ನಿರ್ಮಿಸಲಾಗಿದೆ. ನಂತರ ಡಿಎಆರ್ ಸಭಾಂಗಣದಲ್ಲಿ ಗೃಹ ಸಚಿವರು ಪೂರ್ವ ವಯಲದ ಉಪ ಪೊಲೀಸ್ ಮಹಾ ನಿರೀಕ್ಷಕರಾದ …

Read More »

ಕಾರ್ಮಿಕರ ಕನಿಷ್ಟ ವೇತನ ಶೀಘ್ರ ಹೆಚ್ಚಳ: ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ

ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಎಚ್‌.ಎನ್. ಗೋಪಾಲಕೃಷ್ಣ ತಿಳಿಸಿದರು. ಇಲ್ಲಿನ ವಿದ್ಯಾರಣ್ಯಪುರಂನ ಬಿಲ್ಡರ್ಸ್‌ ಚಾರಿಟಬಲ್‌ ಟ್ರಸ್ಟ್‌ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಕಾರ್ಮಿಕ ಕಾಯ್ದೆಗಳು ಹಾಗೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಇಂದು ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೇತನ ಪರಿಷ್ಕರಣೆಯು 5 ವರ್ಷಗಳ ಹಿಂದೆ ನಡೆದಿತ್ತು ಈಗ ವೈಜ್ಞಾನಿಕವಾಗಿ ನಿಗದಿಪಡಿಸಲಾಗುವುದು. …

Read More »

ವಿಶ್ವವಿಖ್ಯಾತ ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಳ

ಮೈಸೂರು: ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ, ಟಿಕೆಟ್​ ದರದ ಮೇಲೆ ಜಿಎಸ್​ಟಿ ಸೇರಿಸಿ ಹೆಚ್ಚಿಸಲಾಗಿದೆ. ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ ಬರೋಬ್ಬರಿ 900 ರೂ. ಹೆಚ್ಚಳ ಮಾಡಿದ್ದರೆ, ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇನ್ನು ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದೆ. ಈಚೆಗೆ ನಡೆದ ಅರಮನೆ …

Read More »

ರಾಜ್ಯದ ಬೀಚ್ ಗಳಲ್ಲಿ ಗೋವಾ ಮಾದರಿಯ ಮದ್ಯ ಮಾರಾಟ ಅವಕಾಶಕ್ಕೆ ರಾಜ್ಯ ಸರ್ಕಾರ ಚಿಂತನೆ

ಮಂಗಳೂರು: ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್​​ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ 2024ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್​ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ …

Read More »

ಇಂದಿನಿಂದ ನ.3 ರವರೆಗೆ ಹಾಸನಾಂಬ ದೇವಿಯ ದರ್ಶನ ಭಾಗ್ಯ

ಹಾಸನ: ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಶಾಸೊತ್ರೕಕ್ತವಾಗಿ ಇಂದು ತೆರೆಯಲಾಯಿತು. ಅರಸು ವಂಶಸ್ಥರು ಬಾಳೆಕಂಬವನ್ನು ಕಡಿಯುವ ಮೂಲಕ 12.10ಕ್ಕೆ ಸರಿಯಾಗಿ ಗರ್ಭಗುಡಿಯ ಬಾಗಿಲನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ, ಶಾಸಕರಾದ ಎಚ್‌.ಪಿ.ಸ್ವರೂಪ್‌ ಪ್ರಕಾಶ್‌, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್‌‍ಪಿ ಮಹಮದ್‌ ಸುಜೇತ …

Read More »

ಜಾತಿಗಣತಿ ವರದಿ ಅಂಗೀಕಾರಕ್ಕೆ ಒತ್ತಾಯಿಸಿ ಗದಗದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

Read More »