Breaking News

ಜಿಲ್ಲೆ

ವರುಣಾ ಕ್ಷೇತ್ರದಲ್ಲಿ 501.81 ಕೋಟಿ ರೂ. ಮೌಲ್ಯದ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ಮೈಸೂರು: ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ, ನಿಲ್ಲುವುದೂ ಇಲ್ಲ ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ …

Read More »

ಸಂಡೂರು ಉಪಚುನಾವಣೆಗೆ ತುಕಾರಾಂ ಪತ್ನಿ ಅನ್ನಪೂರ್ಣ ರಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿವೆ. ಆದರೆ ಈವರೆಗೂ ಕಾಂಗ್ರೆಸ್ ಯಾವುದೇ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಸಂಸದ ತುಕಾರಾಂ ಕುಟುಂಬಕ್ಕೆ ಟಿಕೆಟ್ …

Read More »

ಮಳೆ ಅನಾಹುತಗಳಿಗೆ ಪರಿಹಾರ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ ಎದುರಾದ ಅನಾಹುತಗಳ ಪರಿಹಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡಾ ನಡೆಯುತ್ತಿದೆ ಅನಾಹುತಗಳಿಗೆ ಪರಿಹಾರ ಕೂಡಾ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read More »

ಗದಗದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಗದಗ : ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ನಗರದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ ಗಾಯಗೊಂಡ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣ್ಣಿನಡಿ ಸಿಲುಕಿದ ಕಾರ್ಮಿಕನನ್ನು ನಜೀರ್ ಸಾಬ್ ಬೈಲು ಹುಲಿ ಎಂದು ಗುರುತಿಸಲಾಗಿದ್ದು, ಗದಗ ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.

Read More »

ಅಪಾಯದ ಅಂಚಿನಲ್ಲಿರುವ ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರಿಗೆ ಸೌಲಭ್ಯ: ಕಿಶನ್ ಮಕ್ವಾನ ಭರವಸೆ

ಮೈಸೂರು: ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆಯಲು ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಅಗತ್ಯವಿರುವ ಗುರುತಿನ ಚೀಟಿಗಳನ್ನು ದೊರಕಿಸಲಾಗುವುದು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷ ಕಿಶನ್‌ ಮಕ್ವಾನ ಭರವಸೆ ನೀಡಿದರು. ನಗರದಲ್ಲಿ ಆಶೋದಯ ಸಮಿತಿಯು ಏರ್ಪಡಿಸಿದ್ದ, ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ದಾಖಲೆಗಳಿಲ್ಲದೆ ಲೈಂಗಿಕ ಕಾರ್ಯಕರ್ತೆಯರು ಕೇಂದ್ರ …

Read More »

ರಾಜ್ಯ ಸರ್ಕಾರದಿಂದ ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್, 400 ಪಶು ವೈದ್ಯರ ನೇಮಕಕ್ಕೆ ಗ್ರೀನ್ ಸಿಗ್ನಲ್

ಮೈಸೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಶುಪಾಲನಾ ಇಲಾಖೆಯಲ್ಲಿ 700 ಮಂದಿ ಡಿ ಗ್ರೂಪ್ ಹಾಗೂ 400 ಪಶು ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ …

Read More »

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ ; ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ …

Read More »

ರಾಜ್ಯ ಸರ್ಕಾರದಿಂದ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ 1.5 ಕೋಟಿ ಅನುದಾನ: ಸಚಿವ ಮಹದೇವಪ್ಪ

ಮೈಸೂರು: ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಿರುವ ₹1.5 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿ, ವಾಲ್ಮೀಕಿ ಪ್ರತಿಮೆಯನ್ನು ತಾಲ್ಲೂಕು ಕಚೇರಿ ಎದುರು ನಿರ್ಮಿಸಲು ಪ್ರಸ್ತಾವ ಬಂದಾಗ ಸುಪ್ರೀಂಕೋರ್ಟ್ ಆದೇಶದಂತೆ ಸಾಧ್ಯವಿಲ್ಲವೆಂದು ಬೇರೆಡೆ ಸ್ಥಳ ಸೂಚಿಸಲು ತಿಳಿಸಲಾಗಿತ್ತು ಎಂದರು. ಜಿಲ್ಲಾಧಿಕಾರಿ ಪ್ರಸ್ತಾಪಿಸಿದ ಜಾಗವನ್ನು ವಾಲ್ಮೀಕಿ ಸಮುದಾಯವು ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ: ಸಾಂಕ್ರಾಮಿಕ ರೋಗ ಭೀತಿ

ಮುಳಗುಂದ: ಸಮೀಪದ ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಇಲ್ಲಿನ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದೆ ಕೊಳಚೆ ನೀರು ಮುಂದೆ ಸಾಗದೆ, ಅಲ್ಲೇ ನಿಂತು ದುರ್ನಾತ ಬೀರುತ್ತಿದೆ. ಕೆಲವೆಡೆ ಸಿಸಿ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಗ್ರಾಮ ಪಂಚಾಯಿತಿ ಹತ್ತಿರದ ಚರಂಡಿಯಲ್ಲಿ ಹುಲ್ಲು ಬೆಳೆದು ಹಲವು ತಿಂಗಳೇ ಆದರೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ …

Read More »

ಶಿವಮೊಗ್ಗದಲ್ಲಿ ಅ.18 ರಿಂದ ಕೃಷಿ ಮತ್ತು ತೋಟಗಾರಿಕಾ ಮೇಳ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024ನ್ನು ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು. ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾತನಾಡಿದ ಅವರು …

Read More »