Breaking News

ಜಿಲ್ಲೆ

ಸಿದ್ದರಾಮಯ್ಯನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ಸಚಿವ ಸತೀಶ ಜಾರಕಿಹೊಳಿ

ಮೈಸೂರು: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ, ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು‌. ನಗರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.‌ ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು. …

Read More »

ಶಾಸಕ ಜಿ.ಎಸ್ ಪಾಟೀಲರಿಗೆ ವೀರಶೈವ ಸಿರಿ ಪ್ರಶಸ್ತಿ ಪ್ರದಾನ

ನರೇಗಲ್:‌ ಸರಳ ವ್ಯಕ್ತಿತ್ವದ ಹಿರಿಯ ರಾಜಕಾರಣಿ, ರೋಣ ಮತಕೇತ್ರದ ಶಾಸಕ ಜಿ.ಎಸ್.‌ಪಾಟೀಲ ಅವರಿಗೆ ಅಬ್ಬಿಗೇರಿಯಲ್ಲಿ ನಡೆದಿರುವ ದಸರಾ ಧರ್ಮ ಸಮ್ಮೇಳನದಲ್ಲಿ ಇಂದು ವೀರಶೈವ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 1983ರಲ್ಲಿ ರಾಜಕೀಯ ಪ್ರವೇಶ ಮಾಡಿದ ಇವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಲಾ ಕಾಲೇಜು, ಧಾರ್ಮಿಕ ಸ್ಥಳ, ಮೂಲಸೌಕರ್ಯಗಳು ಸೇರಿದಂತೆ ಅನೇಕ ಸುಧಾರಣೆಗಳನ್ನು ಮಾಡಿದ್ದಾರೆ. ನದಿ, ಕಾಲುವೆಯ ಜಲಮೂಲಗಳಿಲ್ಲದ ರೋಣ ಮತಕ್ಷೇತ್ರದಲ್ಲಿ ಅನೇಕ ಕೆರೆಗಳನ್ನು ನಿರ್ಮಾಣ ಮಾಡಿದ್ದಾರೆ. ಮಾತೋಶ್ರೀ ಬಸಮ್ಮನವರ …

Read More »

ಮಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲ ಪತ್ತೆ: ಆರೋಪಿ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದು, ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ …

Read More »

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: ಡಿಸಿಎಂ ಡಿಕೆ ಶಿವಕುಮಾರ

ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು, ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು. ಪ್ರಯತ್ನ ಮಾಡಿ ಸೋಲಬಹುದು, ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ‌. …

Read More »

ಪಿಎಂ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೆರರ್ ಗಳು, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ …

Read More »

ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ಮೈಸೂರು ದಸರಾ ನಾಡಹಬ್ಬಕ್ಕೆ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ದಸರಾ ಹಬ್ಬಕ್ಕೆ ಇಂದು ಅರಮನೆ ನಗರಿಯಲ್ಲಿ ವೈಭವದ ಚಾಲನೆ ದೊರೆಯಿತು ಮೈಸೂರು ದಸರಾದ ಉದ್ಘಾಟಕರಾದ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರು ಮಹಿಷಮರ್ಧಿನಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬಕ್ಕೆ ಚಾಲನೆ ನೀಡಿದರು. ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ವೈಭವದ ಚಾಲನೆ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ರಾಜ್ಯ ಸರ್ಕಾರದ …

Read More »

ಅ.3 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ …

Read More »

ರೈತರಿಂದ ಖರೀದಿಸುವ ಹಾಲಿನ ದರ 90 ಪೈಸೆ ಕಡಿತ

ಶಿವಮೊಗ್ಗ: ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿನ ದರವನ್ನು 90 ಪೈಸೆ ಕಡಿತ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಲೀಟರ್ ಹಾಲಿಗೆ 32.99 ರೂಪಾಯಿ …

Read More »

ಇಬ್ಬಿಡು ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ

ಹಳೇಬೀಡು: ಗ್ರಾಮೀಣ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಸಮರ್ಪಕವಾಗಿ ಸಂಪನ್ಮೂಲಗಳ ಬಳಕೆ ಮಾಡಿಕೊಂಡು ಮುನ್ನಡೆಯುತ್ತಿರುವುದರಿಂದ ಮಾದಿಹಳ್ಳಿ ಹೋಬಳಿಯ ಇಬ್ಬಿಡು ಗ್ರಾಮ ಪಂಚಾಯಿತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ದೊರಕಿದೆ. ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರವಾಗಿದೆ. ಅ.2ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ನಾಮಫಲಕ, ಪ್ರಮಾಣಪತ್ರ ಹಾಗೂ ₹5 ಲಕ್ಷ ಬಹುಮಾನ ಒಳಗೊಂಡಿದೆ. 16 ಹಳ್ಳಿಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ …

Read More »

ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಸಹಿಸುವುದಿಲ್ಲ: ಸಿಎಂ ಖಡಕ್ ವಾರ್ನಿಂಗ್

ಮೈಸೂರು : ಗ್ಯಾರಂಟಿ ಯೋಜನೆಗಳ ಫಲ ಜನರಿಗೆ ತಲುಪಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದರು. ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಈ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸರಕಾರ ವರ್ಷಕ್ಕೆ ಸುಮಾರು 56 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇಷ್ಟೂ ಹಣ ಜನರಿಗೆ ತಲುಪುವಂತೆ ಮಾಡಬೇಕು ಎಂದು ಸೂಚಿಸಿದರು. ದಸರಾ ನೆಪದಲ್ಲಿ …

Read More »