Breaking News

ಜಿಲ್ಲೆ

ತಪ್ಪು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಮೈಸೂರು: ತಪ್ಪು ಮಾಹಿತಿ ಕೊಟ್ಟ ತೋಟಗಾರಿಕಾ ಇಲಾಖೆಯ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡ ಪ್ರಸಂಗ ನಗರದಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಪ್ಪು ಮಾಹಿತಿ ಮುದ್ರಿಸಿ ನೀಡಿದ್ದರಿಂದ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸಭೆಗೆ ಹಿಂದಿನ ದಿನ ಸರಿಯಾದ ಹೋಂವರ್ಕ್ ಯಾಕೆ ಮಾಡಲಿಲ್ಲ, ಈ ರೀತಿ ತಪ್ಪು ಮಾಹಿತಿ ಮುದ್ರಿಸಿ ಸಭೆಗೆ ನೀಡಿದರೆ ನೀವೇ ಹೊಣೆ ಆಗಬೇಕಲ್ವಾ …

Read More »

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಕೆ

ಮುಂಡರಗಿ: ರೈತರು ವೈವಿಧ್ಯಮಯ ಬೆಳೆಗಳನ್ನು ಬೆಳೆದು ಆದಾಯ ಹೆಚ್ಚಿಸಿಕೊಳ್ಳಬೇಕು ಎನ್ನುವ ಕಾರಣದಿಂದ ಸರ್ಕಾರ ತಾಲ್ಲೂಕಿನ ಎಲ್ಲ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಸುತ್ತಲಿದೆ. ರೈತರು ಅದರ ಸದುಪಯೋಗ ಪಡೆದುಕೊಂಡು ಹೆಚ್ಚು ಆದಾಯ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ತಿಳಿಸಿದರು. ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ತಾಲ್ಲೂಕಿನ ರೈತರಿಗೆ ರಿಯಾಯಿತಿ ದರದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರ …

Read More »

ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಿಎಂ

ಶಿವಮೊಗ್ಗ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳವಾರ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 25 ಲಕ್ಷ ರೂಪಾಯಿಯ ಪರಿಹಾರ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಂದ್ರಶೇಖರ್‌ ಆತ್ಮಹತ್ಯೆ ದುರದೃಷ್ಟದ ಘಟನೆ, ಸರ್ಕಾರ ಅವರ ಕುಟುಂಬದ ನೋವಿಗೆ ಸ್ಪಂದಿಸಿದೆ ಮತ್ತು ಯಾವತ್ತೂ ಜತೆಗಿರಲಿದೆ ಎಂದು ಹೇಳಿದರು. ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, …

Read More »

ರೇಷ್ಮೆ ಬೆಳೆ ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ: ಕೇಂದ್ರ ಸಚಿವ ಎಚ್ ಡಿ ಕೆ

ಮೈಸೂರು: ಭಾರತದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಇಂದು ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರಿನಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

Read More »

ಅರಮನೆಯ ಪ್ರತಿಮೆಗಳಿಗೆ ತೊಂದರೆ, ಪಾರಿವಾಳಗಳಿಗೆ ಕಾಳು ಹಾಕಬೇಡಿ: ಸಂಸದ ಯದುವೀರ ಒಡೆಯರ್‌

ಮೈಸೂರು: ಮದುವೆ ಮತ್ತು ಮೋಜಿಗಾಗಿ ಫೋಟೋ ತೆಗೆಸಿಕೊಳ್ಳುವವರಿಗೆ, ಪ್ರವಾಸಿಗರಿಗೆ ಮುದ ನೀಡುತ್ತಿದ್ದ ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿನ ಪಾರಿವಾಳಗಳಿಗೆ ಸೋಮವಾರದಿಂದ ಕಾಳು ಹಾಕುವ ಪದ್ಧತಿ ನಿಲ್ಲಿಸಲಾಗಿದೆ. ಪಾರಿವಾಳಗಳು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಗೂಡು ಕಟ್ಟಿ ಅಲ್ಲಿಯೇ ಹಿಕ್ಕೆ ಹಾಕುವುದರಿಂದ ಕಟ್ಟಡಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಡೆದ ನಾಗರಿಕರ ಸಭೆ, ಸಂವಾದದ ಯಶಸ್ವಿಯಾಗಿ ಹಲವು ದಿನಗಳಿಂದ ಪರ ವಿರೋಧಕ್ಕೆ ಎಡೆಮಾಡಿಕೊಟ್ಟಿದ್ದ ಸಮಸ್ಯೆಯನ್ನು ಮಾತುಕತೆಯ …

Read More »

ಪೊಲೀಸ್ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ …

Read More »

ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ.ನಾಗರಾಜಯ್ಯ ಹೆಸರು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಈ ಬಾರಿಯ ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಶುರುವಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ, ಇಲ್ಲಿವರೆಗೆ ಈ ಬಾರಿ ದಸರಾ ಮಹೋತ್ಸವದ ಉದ್ಘಾಟಕರು ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಸದ್ಯ ಸಿಎಂ ಸಿದ್ದರಾಮಯ್ಯ ಅವರು ದಸರಾ ಉದ್ಘಾಟಕರ ಹೆಸರು ಘೋಷಣೆ ಮಾಡಿ ಕುತೂಹಲಗಳಿಗೆ ತೆರೆ ಎಳೆದಿದ್ದಾರೆ. ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಿರಿಯ ಸಾಹಿತಿಯಾಗಿರುವ ಹಂ.ಪ.ನಾಗರಾಜಯ್ಯ …

Read More »

ಸಿಎಂ ತವರು ಕ್ಷೇತ್ರ ವ್ಯಾಪ್ತಿಯಲ್ಲಿ ಫಿಲಂ ಸಿಟಿ ಸ್ಥಾಪನೆಗೆ ನಿರ್ಧಾರ

ಮೈಸೂರು: ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ (ಫಿಲಂ ಸಿಟಿ ) ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು, 110 ಎಕರೆ ಕೆಐಎಡಿಬಿ ಜಮೀನು ಹಸ್ತಾಂತರಿಸಲು ಆದೇಶ ನೀಡಿದ್ದಾರೆ. ಸಿದ್ಧರಾಮಯ್ಯ ಅವರ ತವರೂರಾದ ಮೈಸೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವುದು ಅವರ ಕನಸಿನ ಯೋಜನೆಯಾಗಿದ್ದು, ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣವಾಗುವ ಉದ್ದೇಶವಿದ್ದು, ಇದು ಸಿದ್ದರಾಮಯ್ಯ ಅವರ ವಿಧಾನಸಭಾ ಕ್ಷೇತ್ರವಾದ ವರುಣಾ ವ್ಯಾಪ್ತಿಯಲ್ಲಿ ಬರುತ್ತದೆ. ಮೊದಲ …

Read More »

ಮೈಸೂರು ದಸರಾ: ಅರಮನೆಗೆ 20 ಸಾವಿರ ವಿದ್ಯುತ್ ದೀಪಗಳ ಅಳವಡಿಕೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ನವರಾತ್ರಿಯಲ್ಲಿ ಅರಮನೆಯು ಜಗಮಗಿಸಲು 20 ಸಾವಿರ ಹೊಸ ವಿದ್ಯುತ್‌ ದೀಪಗಳ ಅಳವಡಿಕೆ ಕಾರ್ಯವು ಭರದಿಂದ ಸಾಗಿದೆ. ಅರಮನೆ ಮಂಡಳಿಯ ಎಲೆಕ್ಟ್ರಿಕಲ್‌ ವಿಭಾಗದ 12 ಸಿಬ್ಬಂದಿ, ಮಳೆ ಗಾಳಿಯಿಂದ ಹಾಳಾದ ವಿದ್ಯುತ್‌ ಬಲ್ಬ್‌ಗಳನ್ನು ತೆರವುಗೊಳಿಸಿ, ಹೊಸ ಬಲ್ಬ್‌ಗಳನ್ನು ಅಳವಡಿಸುವ ಕಾರ್ಯ ಮಂಗಳವಾರ ಪ್ರಾರಂಭವಾಯಿತು. ಬಲರಾಮ, ವರಾಹ, ಜಯಮಾರ್ತಾಂಡ ದ್ವಾರಗಳ ಜೊತೆಗೆ ಆವರಣದ ಎಲ್ಲ ದೇಗುಲಗಳು, ಕೋಟೆ ಸೇರಿದಂತೆ ಎಲ್ಲ ಭಾಗಗಳಿಗೂ ವಿದ್ಯುತ್‌ ದೀಪ …

Read More »

ಹೆಚ್ಚಾಗುತ್ತಿರುವ ನಿರುದ್ಯೋಗ ಸಮಸ್ಯೆ: ವಲಸೆ ಹೊರಟ ಯುವಕರು

ಗದಗ: ಉದ್ಯೋಗ ಅರಸಿ ದೊಡ್ಡ ನಗರ, ಪಟ್ಟಣಗಳಿಗೆ ಯುವಕರು ದೊಡ್ಡ ಪ್ರಮಾಣದಲ್ಲಿ ವಲಸೆ ಹೋಗುತ್ತಿರುವ ಪರಿಣಾಮ ಗದಗ ಜಿಲ್ಲೆಯ ಕೆಲ ಗ್ರಾಮಗಳು ವೃದ್ಧಾಶ್ರಮಗಳಾಗಿ ಬದಲಾಗುತ್ತಿವೆ. ಈ ಭಾಗಗಳಲ್ಲಿ ಕೈಗಾರಿಕೆಗಳು ಇಲ್ಲದ ಕಾರಣ ಇಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಅಲ್ಲದೆ, ಈ ವರ್ಷ ಅತಿವೃಷ್ಟಿ, ಮತ್ತು ಬೆಳೆ ನಷ್ಟದಿಂದಾಗಿ ಯುವಕರು ಜೀವನೋಪಾಯಕ್ಕಾಗಿ ನಗರಗಳತ್ತ ಮುಖ ಮಾಡುವಂತಾಗಿದೆ. ಅಲ್ಲದೆ, ಅತ್ಯಂತ ಕಡಿಮೆ ವೇತನ ಕೂಡ ವಲಸೆಗೆ ಮತ್ತೊಂದು ಕಾರಣವಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ …

Read More »