BigTv News
December 2, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: 2019 ರ ಲೋಕಸಭಾ ಚುನಾವಣೆಯಲ್ಲಿ ಮೊಮ್ಮೊಗನಿಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಹಾಸನ ಕ್ಷೇತ್ರವನ್ನ ತ್ಯಾಗ ಮಾಡಿದ್ದು, ಇದೀಗ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆಗೆ ಸಭೆ ನಡೆಸಿ ಅಭ್ಯರ್ಥಿಯನ್ನ ದೇವೇಗೌಡ್ರು ಆಯ್ಕೆ ಮಾಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ …
Read More »
BigTv News
December 2, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಮೈಸೂರು ತಾಲೂಕು ಆರೋಗ್ಯಾಧಿಕಾರಿ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೈಸೂರು ಮಾತಾ ಆಸ್ಪತ್ರೆ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರಕಾರಿ ಅತಿಥಿಗೃಹದಲ್ಲಿ ಮೈಸೂರು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. …
Read More »
BigTv News
December 1, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ರಾಜಧಾನಿ ಬೆಂಗಳೂರು ನಂತರ ಮೈಸೂರು ಅತಿ ವೇಗವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರೈಲ್ವೇ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರ ನಿರ್ಮಿಸಲು ನೈರುತ್ಯ ರೈಲ್ವೆ ಮೈಸೂರು ವಿಭಾಗ ಮುಂದಾಗಿದೆ.ಇದರಿಂದ ಬನ್ನಿಮಂಟಪದಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಸುಮಾರು 1.5 ಕಿ.ಮೀ ಉಳಿತಾಯವಾಗುತ್ತದೆ. ಅಲ್ಲದೆ, ಅಶೋಕಪುರಂ ರೈಲ್ವೆ ನಿಲ್ದಾಣ ಬೇರೆ ಆಗಿರುವುದರಿಂದ ಜೆ.ಪಿ.ನಗರ, ಶ್ರೀರಾಂಪುರ ಸೇರಿದಂತೆ ಇತರರು ಅಲ್ಲಿಂದಲೇ ಪ್ರಯಾಣಿಸುತ್ತಾರೆ. ಹೀಗಾಗಿ ಹೊಸ ಪ್ರವೇಶ ದ್ವಾರವೂ ಟ್ರಾಫಿಕ್ ತಡೆಗಟ್ಟಲು ಕೂಡ ಸಹಕಾರಿಯಾಗಲಿದೆ.ಎಲ್ಲಿ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ ವಿವಿಧ ಸ್ನಾತಕ …
Read More »
BigTv News
December 1, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್ ಕವರ್ ನಿಂದ ಟೈಲ್ಸ್ ಮಾಡಲಾಗುತ್ತಿದ್ದು, ನಿತ್ಯ 2 ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಂಟರ್ ಲಾಕಿಂಗ್ ಮಾದರಿ ಟೈಲ್ಸ್ ಆಗಿ ಪರಿವರ್ತಿಸುತ್ತಿದೆ. ನಗರಪಾಲಿಕೆಯ ನಾನಾ ಕಾಮಗಾರಿ ಹಾಗೂ ಫುಟ್ ಪಾತ್ ಗೆ ನೆಲಹಾಸು ಹಾಕಲು ಈ ಟೈಲ್ಸ್ ಅನ್ನೇ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ಪ್ರೇರಣೆಗೊಂಡ ಚೆನ್ನೈನ ಅನೇಕ ಕಂಪನಿಗಳು ಈ ಟೈಲ್ಸ್ ಕೊಂಡೊಯ್ಯುತ್ತಿವೆ. ಆಶ್ಚರ್ಯವೆಂದರೆ 150 ಡಿಗ್ರಿವರೆಗೆ ಉಷ್ಣಾಂಶವನ್ನು …
Read More »
BigTv News
November 25, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಮುಖ್ಯ ಇಂಜಿನಿಯರ್ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್‌ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್‌ಸಿ ಮುಖ್ಯ ಇಂಜಿನಿಯರ್ ಜಯರಾಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶೇ.60ರಷ್ಟು ಕಾಮಗಾರಿ ನಡೆಸಲು 4 …
Read More »
BigTv News
November 25, 2023
ಕರ್ನಾಟಕ, ಸುದ್ದಿ, ಹಾಸನ
ಹಾಸನ: ಕಾಂಗ್ರೆಸ್ ಸರ್ಕಾರ ಡಿಕೆ ಶಿವಕುಮಾರ್ ಕೇಸ್ ವಾಪಸ್ಸು ಪಡೆದಿದೆ. ಈ ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆ ಎನ್ನುವುದು ಇಲ್ಲ, ಸಿದ್ದರಾಮಯ್ಯನವರ ನೇತೃತ್ವದ ಕ್ಯಾಬಿನೆಟ್ ಏನಿದೆ ಈ ಕ್ಯಾಬಿನೆಟ್ ಶಿವಕುಮಾರ್ ಅವರ ಪಾದದಡಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಸರ್ಕಾರ ಡಿ.ಕೆ. ಶಿವಕುಮಾರ್ ಮೇಲೆ ಇದ್ದ ಪ್ರಕರಣ ವಾಪಸ್ ಪಡೆದಿರುವುದನ್ನು ನೋಡಿದರೇ ಇವರೆಲ್ಲಾ ಸಂವಿಧಾನ ಉಳಿಸುವ ಕಾನೂನು ರಕ್ಷಕರ. ಸಂವಿಧಾನವನ್ನ ಉಳಿಸೋರಾ ಇವರೆಲ್ಲಾ…? ಕಾಂಗ್ರೆಸ್ …
Read More »
BigTv News
November 23, 2023
ಕರ್ನಾಟಕ, ಬಾಗಲಕೋಟೆ, ಸುದ್ದಿ
ಬಾಗಲಕೋಟೆ: ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂಪಾಯಿಯನ್ನು ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂಪಾಯಿಯನ್ನು ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ …
Read More »
BigTv News
November 22, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.ಮಂಗಳೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪರಶುರಾಮ ಸೃಷ್ಟಿಯ ನಾಡು, ಕಂಬಳದ ಬೀಡು ಮಂಗಳೂರಿನ ಜನರಿಗೆ ನಮಸ್ಕಾರಗಳು. ನನಗೆ ಯಡಿಯೂರಪ್ಪ ಮಗ ಅಂತ ಜವಾಬ್ದಾರಿ ಕೊಟ್ಟಿಲ್ಲ. ಹೈಕಮಾಂಡ್ ಕೆಲಸ ಗುರುತಿಸಿ ಈ ಜವಾಬ್ದಾರಿ ಕೊಟ್ಟಿದೆ. …
Read More »