Breaking News

ಜಿಲ್ಲೆ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ತಾವು ಕೂಡ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ…

ಕಾರವಾರ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಹಂಚಿಕೆಯಾಗುವ ಟಿಕೆಟ್‌ಗಾಗಿ ಬಾರಿ ಪೈಪೋಟಿ ಕೂಡ ಶುರುವಾಗಿದೆ. ಆದರೆ ಉತ್ತರ ಕನ್ನಡದಲ್ಲಿ ಅಸ್ತಿತ್ವಕ್ಕೂ ಪರದಾಡುತ್ತಿರುವ ಜೆಡಿಎಸ್ ಪಕ್ಷದ ಮೂಲಕ ಮೈತ್ರಿ ಟಿಕೆಟ್ ಗಿಟ್ಟಿಸಿಕ್ಕೊಳ್ಳಲು ಪಕ್ಷದ ನಾಯಕರುಗಳಲ್ಲಿ ಭಾರೀ ಪೈಪೋಟಿ ಶುರುವಾಗಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾದಂತೆ ಉತ್ತರಕನ್ನಡದಲ್ಲಿಯೂ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಹೆಚ್ಚಾಗಿ ಕಾಣಿಸಿಕ್ಕೊಳ್ಳುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ …

Read More »

906 ದಂಪತಿಗೆ ಪ್ರೋತ್ಸಾಹಧನ ದೊರೆತಿದೆ……

ಮೈಸೂರು: ಜಿಲ್ಲೆಯಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತರ್ಜಾತಿ ವಿವಾಹವೂ ವರ್ಷದಿಂದ ವರ್ಷಕ್ಕೆ ಏರುಗತಿಯಲ್ಲಿ ಸಾಗುತ್ತಿದೆ.ಕಳೆದ ಮೂರು ವರ್ಷದಲ್ಲಿ ಮೈಸೂರಿನಲ್ಲಿ 900ಕ್ಕೂ ಹೆಚ್ಷು ದಂಪತಿಗಳು ವಿವಿಧ ವಿವಾಹಗಳ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವಿವಿಧ ವಿವಾಹ ಯೋಜನೆಯಡಿ ನಾನಾ ಸೌಲಭ್ಯಗಳನ್ನು ನೀಡುತ್ತಿದೆ. ಪರಿಣಾಮ ಹೆಚ್ಚು ಹೆಚ್ಚು ಮಂದಿ ಸರಕಾರ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ ಕಳೆದ ಮೂರು ವರ್ಷದ ಅಂಕಿ ಅಂಶ ಗಮನಿಸಿದರೆ ಒಟ್ಟು 1089 ಮಂದಿ …

Read More »

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನ….

ಮೈಸೂರು: ರಾಜ್ಯದಲ್ಲಿ ಮುಂದಿನ ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಜ್ಜಾಗುತ್ತಿವೆ. ಬಿಜೆಪಿಯಲ್ಲಿ ನೂತನ ರಾಜ್ಯಾದ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ನಾನಾ ಬೆಳವಣಿಗೆಗಳು ನಡೆದಿದ್ದು,ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರಲು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಮಾಜಿ ಸಚಿವ …

Read More »

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ….

ಮೈಸೂರು: ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ …

Read More »

ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ…

ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಐದು ಕೋಟಿ ರೂಪಾಯಿ ಆದಾಯ ಬಂದಿದೆ.14 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.ಇಂದು ಮಧ್ಯಾಹ್ನ …

Read More »

ಹುಲಿ ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ ಸಾವು….

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಕಡಿಮೆ ಆಗಿದ್ದು, ಹುಲಿ ದಾಳಿ ಮತ್ತೆ ಮುನ್ನಲೆಗೆ ಬಂದಿದೆ. ಸರಗೂರು ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಬೇಗೂರು ಗ್ರಾಮದ ನಿವಾಸಿಯೊಬ್ಬರನ್ನು ಹುಲಿ‌ಕೊಂದು ಹಾಕಿದೆ. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(೪೨) ಮೇಲೆ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ. ಬಾಲಾಜಿ ನಾಯ್ಕ ಜಮೀನಿನಲ್ಲಿ ದನ ಕಾಯುತ್ತಿದ್ದರು. ಈ ವೇಳೆ ಹುಲಿ ಏಕಾಏಕಿ ದಾಳಿ ಮಾಡಿದೆ. ಹುಲಿ ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ …

Read More »

ರಾಹುಲ್ ಗಾಂಧಿ ನೇತ್ರತ್ವದಲ್ಲಿ ಭಾರತ್ ಜೋಡೋ ಯಾತ್ರೆ….

ದೆಹಲಿ ನವೆಂಬರ್ 7: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಆರಂಭಿಸಲು ಕಾಂಗ್ರೆಸ್ ಯೋಚಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರಾ 2.0 ಆರಂಭವಾಗಿಲಿದೆ. ಭಾಗವಹಿಸುವವರು ರಾಹುಲ್ ಗಾಂಧಿ ಅವರೊಂದಿಗೆ ಕಾಲ್ನಡಿಗೆಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ …

Read More »

ಗಬ್ಬೆದ್ದು ನಾರುತ್ತಿರುವ ಚುಂಚಣಕಟ್ಟೆ….

ಮೈಸೂರು, ನವೆಂಬರ್‌, 07: ಜಿಲ್ಲೆಯ ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿರುವ ಚುಂಚನಕಟ್ಟೆಯು ಭಕ್ತರ ಇಷ್ಟಾರ್ಥ ನೆರವೇರಿಸುವ ಪವಿತ್ರ ಕ್ಷೇತ್ರವಾಗಿಯೂ, ಪ್ರಕೃತಿ ಪ್ರಿಯರ ಸೆಳೆಯುವ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದ್ದು, ಪ್ರತಿನಿತ್ಯವೂ ಇಲ್ಲಿಗೆ ನಾಸ್ತಿಕ, ಆಸ್ತಿಕರೆನ್ನದೆ ಎಲ್ಲರೂ ಭೇಟಿ ನೀಡುತ್ತಾರೆ. ಆದರೆ ಈ ಕ್ಷೇತ್ರಕ್ಕೆ ಬಂದವರು ಇಲ್ಲಿನ ಅವ್ಯವಸ್ಥೆ ನೋಡಿದ ಬಳಿಕ ಹಿಡಿಶಾಪ ಹಾಕಿಕೊಂಡು ಹಿಂತಿರುಗುವುದು ಮಾಮೂಲಿಯಾಗಿದೆ. ದೈವಿಕ ತಾಣವಾಗಿಯೂ ಪ್ರವಾಸಿ ಸ್ಥಳವಾಗಿಯೂ ಗುರುತಿಸಿಕೊಂಡು ಪ್ರತಿನಿತ್ಯ ನೂರಾರು ಮಂದಿಯನ್ನು ಸೆಳೆಯುವ ಸ್ಥಳ ಅಭಿವೃದ್ಧಿ ಹೊಂದಿಲ್ಲದೆ …

Read More »

ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…

ಚಿತ್ರದುರ್ಗ, ನವೆಂಬರ್‌ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ …

Read More »

ಬೀದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್: ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್‌ ಶಾಕ್‌ ನೀಡಿದೆ. ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್‌ಪಾತ್‌ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್‌ಗಳ ತಂಡ …

Read More »