Breaking News

ಜಿಲ್ಲೆ

ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್‌ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು …

Read More »

ಹಾಸನಾಂಬೆ ದರ್ಶನ ಪಡೆಯಲಿರುವ ಮುಖ್ಯಮಂತ್ರಿ…

ಹಾಸನ: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ನವೆಂಬರ್‌ 2ರಂದು ತೆರೆದಿದ್ದು, ಭಕ್ತರಿಗೆ ದರ್ಶನಕ್ಕೆ ನವೆಂಬರ್‌ 3ರಂದು ಅವಕಾಶ ಕಲ್ಪಿಸಲಾಗಿತ್ತು. ಅಂದಿನಿಂದ ಹಲವು ರಾಜಕಾರಣಿಗಳು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಹಾಗೆಯೇ 5ನೇ ದಿನವಾದ ನಾಳೆ (ನವೆಂಬರ್‌ 07) ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ (ನವೆಂಬರ್‌ 07) ಬೆಳಗ್ಗೆ 12-30ಕ್ಕೆ ಹಾಸನಾಂಬೆ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ವೇಳೆ …

Read More »

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಲು ಬಂದಿದೆ..

ಬೆಂಗಳೂರು: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ …

Read More »

ಸಿದ್ದು ಬಗ್ಗೆ ಗುಣಗಾನ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ‘ರೈತ ಸಾಂತ್ವನ ಯಾತ್ರೆ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದರು. ಈ ಕುರಿತು ಭಾನುವಾರ ಅವರು ಪೋಸ್ಟ್ ಹಾಕಿದ್ದರು. ಸೋಮವಾರ ಈ ಪೋಸ್ಟ್‌ಗೆ ಎಚ್. ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ‘ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ‘ಹೃದಯ ವೈಶಾಲ್ಯತೆ’ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. …

Read More »

ಕಾಂಗ್ರೆಸ್ ಸರ್ಕಾರ ಜನರ ನೋವನ್ನು ಕಡೆಗಣಿಸುತ್ತಿದೆ :ಸಿ ಟಿ ರವಿ..

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ರೋಮ್ ಹತ್ತಿ ಉರಿಯುತಿದ್ದರೆ ನಿರೋ ಪಿಟೀಲು ಬಾರಿಸುತ್ತಿದ್ದ” ಎಂಬಂತೆ ರಾಜ್ಯ ಬರದ ಬೇಗುದಿಯಲ್ಲಿ ನರಳುತ್ತಿದ್ದರೆ ರಾಜ್ಯದ ಕಾಂಗ್ರೆಸ್ ಸರ್ಕಾರ “ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ” ಆಟ ಆಡಿ ಜನರ ನೋವನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿ ಟಿ ರವಿ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ …

Read More »

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾಗಿ ಸೋಮು ನಾಗರಾಜ ನೇಮಕ

ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ‌ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ವಿಶೇಷ ಚೇತನ ಮಹಿಳೆಗೆ ಸೂರು: ಸಂತೋಷ್‌ ಲಾಡ್ ಭರವಸೆ

ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ ಸಂತೋಷ ಲಾಡ್ ಅವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದು ತನಗೆ ಸೂರು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. …

Read More »

ಬೆಂಗಳೂರು ವಿಮಾನ ನಿಲ್ದಾಣದ ಕಾಲಿ ಇರುವ ಹುದ್ದೆಗೆ ಅರ್ಜಿ ಕುರಿತು ಸುತ್ತೋಲೆ…

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು 3ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ …

Read More »

ಸಿಸಿಬಿ ಪೊಲೀಸರ ಕಾರ್ಯಕ್ಕೆ ಆರೋಪಿ ಜೈಲಿಗೆ

ಹುಬ್ಬಳ್ಳಿ: ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ.‌ ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ …

Read More »

ವಾಕಿಂಗ್ ಹೋದ ವ್ಯಕ್ತಿಗೆ ಹಿಟ್ ಆಂಡ್ ರನ್

ಹುಬ್ಬಳ್ಳಿ:ವಾಯು ವಿಹಾರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ವ್ಯಕ್ತಿಯೊಬ್ಬನ ಒಂದು ಕೈ ಬಿಟ್ಟು ಉಳಿದೆಲ್ಲ ದೇಹವೆಲ್ಲ ಸಂಪೂರ್ಣವಾಗಿ ಛಿದ್ರ ಛಿದ್ರ ವಾದ ಘಟನೆ ಹುಬ್ಬಳ್ಳಿಯ ಧಾರವಾಡ ಬೈಪಾಸ್ ಬಳಿ ನಡೆದಿದೆ. ಸುಮಾರು 50 ರಿಂದ 55 ವರ್ಷದ ವ್ಯಕ್ತಿ ಶಿಮ್ಲಾ ನಗರದ ಬಳಿ ಪ್ರತಿನಿತ್ಯ ವಾಯು ವಿಹಾರ ಮಾಡಲು ಈ ರಸ್ತೆಯಲ್ಲಿ ಬರುತ್ತಿದ್ದರಂತೆ,ಇಂದು ಬೆಳ್ಳಿಗ್ಗೆ ಕೂಡಾ ವಾಯು ವಿಹಾರ ಮಾಡಲು ಬಂದಾಗ ಅಪರಿಚಿತ ವಾಹನ ಡಿಕ್ಕಿ …

Read More »