Breaking News

ಜಿಲ್ಲೆ

ಇಂಜಿನಿಯರ್ಸ್ ದಿನಾಚರಣೆ ಧಾರವಾಡ ನಗರದಲ್ಲಿ ಭವ್ಯ ಮೆರವಣಿಗೆ

ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್‌ಗಳ ದಿನಾಚರಣೆಯಲ್ಲಿ ವಿಶ್ವೇಶ್ವರಯ್ಯನವರ ಭಾವಚಿತ್ರದ ಮೆರವಣಿಯನ್ನು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರ್ಸ್, ಧಾರವಾಡ ಲೋಕಲ್ ಸೆಂಟರನವರು ಧಾರವಾಡದ ಪ್ರಮುಖ ರಸ್ತೆಗಳ ಮೂಲಕ ಕಲಾಭವನದಿಂದ ಡಿಸಿ ಕಂಪೌಂಡಿನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿಯ ಸರ್ ಎಂ ವಿಶ್ವೇಶ್ವರಯ್ಯ ಅವರ ಮೂರ್ತಿಯವರೆಗೆ ಭವ್ಯ ಮೇರವಣಿಗೆ ಜರುಗಿತು. ವಾಲ್ಮಿಯ ಸೂಪರಿಂಟೆಂಡೆಂಟ್ ಇಂಜಿನಿಯರ .ಬಸವರಾಜ ಬಂಡಿವಡ್ಡರವರು ಜಗ್ಗಲಗಿಯನ್ನು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಜಗ್ಗಲಗಿಯ …

Read More »

ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯ ಕೊಲೆ…

ಮೈಸೂರು: ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ಮಹಿಳೆ. ಮಂಜು ಅಲಿಯಾಸ್ ಮಂಜುನಾಥ್ (27) ಕೊಲೆ ಆರೋಪಿ. 8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ದಂಪತಿಗೆ ಈಗಾಗಲೇ 5 ವರ್ಷದ ಗಂಡು ಮಗುವಿದೆ. ಮತ್ತೊಂದು ಮಗುವಿಗೆ …

Read More »

ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿ….

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಬಿಸಿಎ (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್​ಗಳ ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ಶೀಘ್ರ ಮೌಲ್ಯಮಾಪನಕ್ಕೆ ಹೆಸರಾಗಿರುವ ಕುವೆಂಪು ವಿವಿಯು ಈ ಹಿಂದೆಯೂ ಶೀಘ್ರವಾಗಿ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿತ್ತು. ಪ್ರಸ್ತುತ ನಾನ್ – ಎನ್​ಇಪಿ ಬ್ಯಾಚ್​ನ ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್​ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಕ್ತಾಯಗೊಂಡ …

Read More »

ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ: ಎಂ. ಲಕ್ಷ್ಮಣ್.

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ನೂರಕ್ಕೆ ನೂರರಷ್ಟು ಸೋಲುತ್ತಾರೆ. ಏನಾದರೂ ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಅವರಿಗೆ ನೇರ ಹಾಕಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ. ಇದೇ ಕಾರಣದಿಂದ ಕಂಡ …

Read More »

ವಮೊಗ್ಗ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ….

ಶಿವಮೊಗ್ಗ: ತನ್ನ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಓಮ್ನಿ ಕಾರನ್ನು ಚಲಾಯಿಸಲು ನೀಡಿದ ತಂದೆಗೆ ಶಿವಮೊಗ್ಗ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಸೆಪ್ಟಂಬರ್ 9 ರಂದು ಶಿವಮೊಗ್ಗ ಕರ್ನಾಟಕ ಸಂಘದ ಬಳಿ ಸಂಚಾರಿ ಪೊಲೀಸ್ ಠಾಣೆಯ ಪಿಸಿಐ ಹೆಚ್ ಎಸ್ ಶಿವಣ್ಣನವರ್ ವಾಹನ ತಪಾಸಣೆ ನಡೆಸುವಾಗ ಓಮ್ನಿ ಕಾರನ್ನು ತಪಾಸಣೆ ನಡೆಸಿದಾಗ ವಾಹನವನ್ನು 17 ವರ್ಷದ ಬಾಲಕ ಚಲಾಯಿಸುತ್ತಿರುವುದು ಕಂಡು ಬರುತ್ತದೆ. ನಂತರ ವಾಹನದ ದಾಖಲಾತಿ ಪರಿಶೀಲಿಸಿದಾಗ …

Read More »

ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋಮಾಂಸ ಪತ್ತೆ…

ಮಂಗಳೂರು: ನಗರದ ಉರ್ವಸ್ಟೋರ್​ನ ಚಿಲಿಂಬಿ ಬಳಿ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋಮಾಂಸವನ್ನು ಪತ್ತೆಹಚ್ಚಿದ ಬಜರಂಗದಳದ ಕಾರ್ಯಕರ್ತರು ಆರೋಪಿಗಳ ಸಹಿತ ಮಾಂಸವನ್ನು ಉರ್ವ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಾರ ಗ್ರಾಮದ ದಾವೂದ್, ಜೋಕಟ್ಟೆ ಗ್ರಾಮದ ಬದ್ರುದ್ದೀನ್ ಮತ್ತು ಯಾಸೀನ್ ಎಂಬವರನ್ನು ಬಂಧಿಸಲಾಗಿದೆ. ಭಾನುವಾರ ಬೆಳಗ್ಗೆ ಗೋಮಾಂಸವನ್ನು ಜೋಕಟ್ಟೆಯಿಂದ ರಿಕ್ಷಾದಲ್ಲಿ ನಗರದ ಬೀಫ್ ಸ್ಟಾಲ್​ಗಳಿಗೆ ಸಾಗಣೆ ಮಾಡುತ್ತಿದ್ದ ವೇಳೆ ಅವರನ್ನು ಹಿಡಿಯಲಾಗಿದೆ. ಗೋಮಾಂಸ ಸಾಗಣೆಯ ಮಾಹಿತಿ ತಿಳಿದು ಬಜರಂಗದಳದ ಕಾರ್ಯಕರ್ತರು …

Read More »

ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್​ವೊಬ್ಬರ ಮೃತದೇಹ ಪತ್ತೆ…

ಮಂಗಳೂರು (ದಕ್ಷಿಣ ಕನ್ನಡ): ನಗರದ ಪ್ರತಿಷ್ಠಿತ ಮೋತಿ ಮಹಲ್ ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್​ವೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ ಮೃತಪಟ್ಟವರು. ಇವರು ಕೇರಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಗೋಪು ಆರ್.ನಾಯರ್ ಅವರು ಸ್ಮಿಮ್ಮಿಂಗ್ ಪೂಲ್​ನಲ್ಲಿ ಮುಳುಗಿ‌ ಸಾವನ್ನಪ್ಪಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ನಿನ್ನೆ (ಭಾನುವಾರ) ಮಂಗಳೂರಿಗೆ ಬಂದು ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ಕೊಠಡಿಯಿಂದ ಬ್ಯಾಂಕ್ ಅಧಿಕಾರಿ ಹೊರಹೋಗಿದ್ದರು. …

Read More »

ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ: ಸಿದ್ದರಾಮಯ್ಯ.

ಮೈಸೂರು: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ …

Read More »

ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ ಕಾರ್ಖಾನೆ….

ಶಿವಮೊಗ್ಗ: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು, ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್​ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ …

Read More »

ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದ್ದರೂ ಕ್ರೈಂ ತಡೆಯುವಲ್ಲಿ ವಿಫಲ….

ಶಿವಮೊಗ್ಗ: ಸಮಾಜದಲ್ಲಿ ದಿನೇ ದಿನೆ ಕ್ರೈಂ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದ್ದರೂ ಕ್ರೈಂ ತಡೆಯುವಲ್ಲಿ ವಿಫಲವಾಗುತ್ತಿದ್ದಾರೆ ಎನ್ನಬಹುದು. ಕ್ರೈಂ ನಡೆದ ನಂತರ ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಶ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ಕಣ್ಣಿಡಲು ಪೊಲೀಸ್ ಇಲಾಖೆಯು ತಾಂತ್ರಿಕವಾಗಿ ಮುನ್ನುಡಿ ಇಡುತ್ತಿದೆ. ಇದರ ಭಾಗವಾಗಿ ಇಲಾಖೆಯು ಡ್ರೋನ್​ ಬಳಸಲು ಮುಂದಾಗಿದ್ದು, ಪಡ್ಡೆಗಳು, ಕಿಡಿಗೇಡಿಗಳ ಮೇಲೆ ಕಣ್ಣಿಡಲು ಇದು ಸಹಾಯಕವಾಗಿದೆ. …

Read More »