Breaking News

ಜಿಲ್ಲೆ

ಮತ್ತೆ ನಿರ್ದೇಶನದತ್ತ ಮುಖ ಮಾಡಿದ ಹರೀಶ್‌ ರಾಜ್

ಜೊತೆ ಜೊತೆಯಲಿ’ ಧಾರವಾಹಿ ಖ್ಯಾತಿಯ ನಟ ಹರೀಶ್ ರಾಜ್ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ‘ಕಲಾಕರ್’ ಸಿನಿಮಾದ ನಂತರ ಪ್ಯಾನ್ ಇಂಡಿಯಾ ಸಿನಿಮಾ ನಿರ್ದೇಶನಕ್ಕೆ ಬಿಗ್ ಬಾಸ್ ಹರೀಶ್ ರಾಜ್ ಕೈ ಹಾಕಿದ್ದು, ಸದ್ಯ ಹರೀಶ್ ರಾಜ್ ನಿರ್ದೇಶನದ ‘ಪ್ರೇತʼ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ರಾಜ್ ನಟನಾ ಕ್ಷೇತ್ರಕ್ಕೆ ಎಂಟ್ರಿಕೊಟ್ಟು 25 ವರ್ಷ ಕಳೆದಿದೆ. ಬೆಳ್ಳಿ …

Read More »

ಜಾಗಿಂಗ್ ಮಾಡೋ ರೀತಿಯಲ್ಲಿಬಂಗಾರದ ಅಂಗಡಿ ಕಳ್ಳತನ

ಕಲ್ಬುರ್ಗಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಜಾಗಿಂಗ್ ಮಾಡುವ ರೀತಿಯಲ್ಲಿ ಬಂದು ಬಂಗಾರದ ಅಂಗಡಿ ಕಳ್ಳತನ ಮಾಡಿದ ಘಟನೆ ಜರುಗಿದೆ. ರಂದು ನಸುಕಿನ ಜಾವ 3.30 ರ ಸಮಯದಲ್ಲಿ ವಾಯು ವಿಹಾರಿಗಳ ಸೋಗಿನಲ್ಲಿ ಬಂದಿದ್ದ ಖದೀಮರು. ಪಟ್ಟಣದ ಸಂತೋಷ್ ಮಾಳಿ ಎಂಬುವವರ ಜ್ಯುವೆಲರ್ ಶಾಪ್​​ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ …

Read More »

ಗದಗ ಜಿಲ್ಲೆಯಲ್ಲಿ ಪ್ರವಾಹದ ಭೀತಿ

ಗದಗ;- ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹದ ಭೀತಿ ಶುರುವಾಗಿದೆ. ಹೀಗಾಗಿ ನದಿ‌ ದಡದ ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ಮಲಪ್ರಭಾ ನದಿಯ ದಡದ ಗ್ರಾಮಗಳಲ್ಲಿ ಧ್ವನಿವರ್ದಕ ಮೂಲಕ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಗ್ರಾಮ ಪಂಚಾಯತಿ ಹಾಗೂ ಪೋಲೀಸ್ ಇಲಾಖೆ ಎಚ್ಚರಿಕೆ ನೀಡಿದ್ದಾರೆ. ಮಲಪ್ರಭಾ ನದಿಯಲ್ಲಿ ದಿನದಿನೇ ನೀರನ ಮಟ್ಟ ಹೆಚ್ಚಾಗ್ತಿದೆ ನದಿಗೆ ಹೋಗಬಾರದು. ಬಟ್ಟೆ ತೊಳೆಯಲು ಹಾಗೂ ಜಾನುವಾರುಗಳನ್ನೂ …

Read More »

ಕುರ್ತಕೋಟಿ ಗ್ರಾಮ ಪಂಚಾಯ್ತಿಗೆ ಅಶೋಕ ಅಧ್ಯಕ್ಷ..

ಮುಳಗುಂದ : ಸಮೀಪದ ಕುರ್ತಕೋಟಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ವಿ.ಶಿರಹಟ್ಟಿ, ಉಪಾಧ್ಯಕ್ಷರಾಗಿ ಸರೋಜಾ ಮಾ.ಪ್ರಭಯ್ಯನಮಠ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಮುಖಂಡರಾದ ಅಪ್ಪಣ್ಣ ಇನಾಮತಿ ಗ್ರಾ.ಪಂ ಸದಸ್ಯರು,ಪಿಡಿಒ ರವಿ ಅಳವಂಡಿ, ಸಿಬ್ಬಂದಿ ಮೊದಲಾದವರು ಅಭಿನಂದಿಸಿದರು.

Read More »

ಚಿಂಚಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಆಯ್ಕೆ…

ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಕ್ಕ ಹೇಮರಡ್ಡಿ ಬಂಗಾರಿ, ಉಪಾಧ್ಯಕ್ಷರಾಗಿ ಲಲಿತಾ ಮಾಲತೇಶ ಕುರಹಟ್ಟಿ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷೆ,ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯ್ತಿ ಸದಸ್ಯರು,ಮುಖಂಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ,ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ಜಿ.ಪಂ ಮಾಜಿ ಸದಸ್ಯ ಎಚ್.ವೈ.ಪೂಜಾರ, …

Read More »

ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವು…

ಮಂಗಳೂರು:ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ಕುಟುಂಬಸ್ಥರು ಮತ್ತು ವಿಶ್ವಕರ್ಮ ಸಮುದಾಯದ ಮುಖಂಡರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮೂಡಬಿದಿರೆ ಮೂಲದ ಶಿಲ್ಪಾ ಆಚಾರ್ಯ ಮೃತಪಟ್ಟ ಗರ್ಭಿಣಿ. ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು. ಶಿಲ್ಪಾ ಅವರನ್ನು ಪರೀಕ್ಷೆ ನಡೆಸುತ್ತಿದ್ದ ವೈದ್ಯರು ಭಾನುವಾರ ರಜೆ ಇದ್ದಿದ್ದರಿಂದ ಬೇರೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಮಹಿಳೆಗೆ ಬೇರೊಬ್ಬ …

Read More »

ಜೆಸಿಬಿ ಮಷಿನ್‌ ತೆಗೆದುಕೊಂಡು ಬಂದು ಎಟಿಎಂ ಕಳ್ಳತನ…

ಶಿವಮೊಗ್ಗ:ಕಬ್ಬಿಣದ ರಾಡ್​, ಸುತ್ತಿಗೆ ಹಾಗು ಇತರೆ ಸಾಮಗ್ರಿ ಬಳಸಿ ಎಟಿಎಂ‌ ಒಡೆದು ಹಣ ಕಳ್ಳತನ ಮಾಡಿರುವ ಪ್ರಕರಣಗಳನ್ನು ಕೇಳಿದ್ದೇವೆ. ಆದರೆ ಶಿವಮೊಗ್ಗದಲ್ಲೊಬ್ಬ ಚಾಲಾಕಿ ಕಳ್ಳ ಜೆಸಿಬಿ ಮಷಿನ್‌ ತೆಗೆದುಕೊಂಡು ಬಂದು ಎಟಿಎಂ ಕಳ್ಳತನಕ್ಕೆ ಬಂದಿದ್ದು, ಪೊಲೀಸರು ಬರುತ್ತಿರುವುದನ್ನು ಗಮನಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿನೋಬನಗರ ನಗರದಲ್ಲಿನ ಆ್ಯಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕಳ್ಳತನಕ್ಕೆ ಬಳಸಿದ ಜೆಸಿಬಿ ಶಿವಮೊಗ್ಗದ ವಿನೋಬನಗರ ನಗರದ ಮುಖ್ಯರಸ್ತೆಯ ಶಿವಾಲಯದ ಮುಂಭಾಗದ ಆ್ಯಕ್ಸಿಸ್ …

Read More »

ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ: ಸಚಿವ ಸಂತೋಷ ಲಾಡ್

ಧಾರವಾಡ: ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ ಇದರಿಂದ ಬಹಳ ರೈತರಿಗೆ ಅನಾನುಕೂಲ ಆಗಿದೆ ಎಂದು ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದಾರೆ. ನವಲಗುಂದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಳ್ನಾವರ ಭಾಗಕ್ಕೆ ಈಗಾಗಲೇ ಭೇಟಿ ನೀಡಿದ್ದೇನೆ. ಇವತ್ತು ನವಲಗುಂದ ಕ್ಷೇತ್ರದಲ್ಲಿ ಪರಿಶೀಲನೆ ಮಾಡುತ್ತೇನೆ. ಮುಂದೆ ಕುಂದಗೋಳ ಕ್ಷೇತ್ರಕ್ಕೆ ಹೋಗುತ್ತೇನೆ ಎಂದು ಹೇಳಿದರು. ಈಗಗಾಲೇ ಮನೆ ಬಿದ್ದ ಸ್ಥಳಕ್ಕೆ …

Read More »

ಜೋಯಿಡಾದ ಕ್ಯಾಸಲ್ ರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿ ರೈಲ್ವೆ ಸಂಚಾರ ಸ್ಥಗಿತ….

ಕಾರವಾರ: ಉತ್ತರಕನ್ನಡದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜೋಯಿಡಾದ ಕ್ಯಾಸಲ್ ರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲವು ದಿನಗಳಿಂದ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಕರಂಜೋಲ್ ರೈಲ್ವೆ ಮಾರ್ಗದಲ್ಲಿಯೇ ಭೂಕುಸಿತವಾಗಿದೆ. ಘಟನೆಯಿಂದ ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸಂಪೂರ್ಣ ನಿಂತುಹೋಗಿದೆ. ಭೂಕುಸಿತದ ಸ್ಥಳದಲ್ಲಿ ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More »

ಅತಿವೃಷ್ಟಿ ಬೆಳೆ ಹಾನಿ ಪರಿಹಾರಕ್ಕೆ ಅಗ್ರಹಿಸಿ ಬಿದಿಗೆ ಇಳಿದು ರೈತರ ಪ್ರತಿಭಟನೆ

ಧಾರವಾಡ: ಅತಿವೃಷ್ಟಿ ಬೆಳೆ ಹಾನಿ ಪರಿಹಾರಕ್ಕೆ ಅಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತೀಯಾದ ಮಳೆಯಿಂದ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಬೆಳೆ ಹಾನಿಯಾಗಿದೆ. ಮಳೆ ನೀರು ನಿಂತು ಬೆಳೆ ಹಾನಿಯಾಗುತ್ತಿದ್ದರು ಅಧಿಕಾರಿಗಳು ಸಮೀಕ್ಷೆ ಮಾಡುತ್ತಿಲ್ಲ ಆದ್ದರಿಂದಲೇ ನಿರಂತರ ಮಳೆಯಿಂದಾಗಿ ರೈತರು ಬಿದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »