Breaking News

ಜಿಲ್ಲೆ

ಏಕರೂಪದ ನಾಗರಿಕ ಸಂಹಿತೆ ಜಾರಿಗೆ ಐದು ಲಕ್ಷ ಸಹಿ ಅಭಿಯಾನ – ಪ್ರಮೋದ ಮುತಾಲಿಕ

ಧಾರವಾಡ: ಭಾರತ ದೇಶದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರಲು ಐದು ಲಕ್ಷ ಸಹಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಕರೂಪದ ನಾಗರಿಕ ಸಂಹಿತೆ ಈ ವಿಷಯದ ಕುರಿತು ಇಡೀ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಚರ್ಚೆ ಪ್ರಾರಂಭವಾಗಿದೆ. ಈ ದೇಶದಲ್ಲಿ ಒಂದೇ ಕಾನೂನು ಇರಬೇಕು ಎನ್ನುವುದಕ್ಕೆ ಬೆಂಬಲವನ್ನ ಸೂಚಿಸುತ್ತಿದ್ದೇವೆ. ಇಡೀ ಜಗತ್ತಿನಲ್ಲಿ ಎರಡೆರಡು ಕಾನೂನುಗಳು ಯಾವ …

Read More »

ಹುಬ್ಬಳ್ಳಿಯಲ್ಲಿ ಪೊಲೀಸ ಪೇದೆ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Read More »

ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ:12 ಗಂಟೆಯೊಳಗೆ ಆರೋಪಿಯನ್ನು ಬಂಧಿಸವಲ್ಲಿ ಪೊಲೀಸರು ಯಶಸ್ವಿ.

ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಾದ 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಮಾರುತಿ ನಗರದ ಗಜಾನನ ಪಾಟೀಲ್ (40) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಯು ಟ್ಯೂಷನ್‌ಗೆ ಹೋಗುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿಯನ್ನು ಎತ್ತಿಕೊಂಡು ಹೋಗಿ ಅಪಹರಿಸಲು ಯತ್ನಿಸಿದ್ದ ಈ ವೇಳೆ ಬಾಲಕಿ ಕಿರುಚಿದ್ದರಿಂದ ಆರೋಪಿ ಓಡಿ ಹೋಗಿದ್ದಾನೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ …

Read More »

ವಿಶ್ವ ಹಿಂದು ಪರಿಷದ್ ಕರ್ನಾಟಕ ಉತ್ತರ ಧಾರವಾಡ ಜೈನ ಮುನಿಯ ಕೊಲೆ ಖಂಡನೆ

ಧಾರವಾಡ ಚಿಕ್ಕೋಡಿ ತಾಲೂಕಿನ ಹಿರೇಕೋಳಿಯ ಪೂಜ್ಯ ಜೈನ ಮುನಿಗಳಾದ ರಾಮಕುಮಾರ ನಂದಿ ಇವರನ್ನು ದುಷ್ಕರ್ಮಿಗಳು ಬರ್ಬರವಾಗಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಇದನ್ನು ವಿಶ್ವ ಹಿಂದು ಪರಿಷತ್‌ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರೀಯ. ಧಾರ್ಮಿಕ ವಿಭಾಗ ಪ್ರಚಾರದಕ ಬಸವರಾಜ ಜಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿಸ್ಥತರಿಗೆ ಕಠಿಣ ಶಿಕ್ಷೆ ನೀಡಬೇಕು. ಸರ್ಕಾರ ಸಾಧು-ಸಂತರಿಗೆ ಸೂಕ್ತ ರಕ್ಷಣೆ ಕೊಡಬೇಕು, ಸರ್ಕಾರ ಮುಂದೆ …

Read More »

ಜೈನ ಮುನಿಗಳ ಹತ್ಯೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ : ಜೈನ ಮುನಿಗಳ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಯುವ ಬಿಗ್ರೇಡ್ ಹಾಗೂ ಹಿಂದೂ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನಮುನಿಗಳಾದ ಕಾಮಕುಮಾರ ನಂದಿಮಹಾರಾಜರ ಹತ್ಯೆ ಹಾಗೂ ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಬರ್ಬರವಾಗಿ ಹತ್ಯೆಗೈದ ಪ್ರಕರಣ ಖಂಡನೀಯ ಎಂದು ಮೌನ …

Read More »

ಸಾಲಬಾಧೆ ತಾಳಲಾರದೇ ನೇಣು ಕುಣಿಕೆಗೆ ಕೊರಳೊಡ್ಡಿದ ರೈತ

ಧಾರವಾಡ: ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು. ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ. ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ …

Read More »

ಚಲಿಸುತ್ತಿದ್ದ ಕಾರ್ ಟೈಯರ್ ಬ್ಲಾಸ್ಟ್

ಹುಬ್ಬಳ್ಳಿ ಯಿಂದ ಬೆಳಗಾವಿ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರೊಂದರ ಟೈಯರ್ ಬ್ಲಾಸ್ಟ್ ಆಗಿ ಅಪಘಾತಕ್ಕೆ ಒಳಗಾದ ಘಟನೆ ಹುಬ್ಬಳ್ಳಿಯ ನವನಗರದ ಆರ್.ಟಿ.ಓ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನ ಟೈಯರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ, ಬಿ.ಆರ್.ಟಿಎಸ್ ಬ್ಯಾರಿಕೇಡ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಬೆಳಗಾವಿ ಮೂಲದ ವಕೀಲರೊಬ್ಬರು ಪ್ರಯಾಣಿಸುತಿದ್ದರೆನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಗದಗನ ಹಳ್ಳಿಗುಡಿಯಲ್ಲಿ ಅಪಘಾತ

ತುರ್ತು ಸಹಾಯವಾಣಿಗೆ ಹಳ್ಳಿಗುಡಿ ಹತ್ತಿರ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಎರಡು ಕಾರುಗಳ ನಡುವೆ ಅಪಘಾತವಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಸದರಿ ಪ್ರಕರಣ ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಘಟನೆ ಸಂದರ್ಭದಲ್ಲಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಕರಣಕ್ಕೇ ಸಂಭದಿಸಿದಂತೆ ಗದಗ ಗ್ರಾಮಾಂತರ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More »

ಸಿಎಂ ನಿಂಬಣ್ಣವರ್ ನಿಧನಕ್ಕೆ ಶಾಸಕ ಮಹೇಶ್ ತೆಂಗಿನಕಾಯಿ ಸಂತಾಪ

ಕಲಘಟಗಿ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಶ್ರೀ ಸಿಎಂ ನಿಂಬಣ್ಣವರ್ ಅವರನ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು ಸರಳ ಸಜ್ಜನಿಕೆ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಸಿಎಂ ನಿಂಬಣ್ಣವರ್ ರೈತ ಹೋರಾಟಗಾರರು ಇವರ ಸಾವಿನಿಂದ ಬಿಜೆಪಿಗೆ ತುಂಬಲಾರದ ನಷ್ಟವಾಗಿದ್ದು ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಿ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿಯವರು …

Read More »

ಅಮರನಾಥ ಯಾತ್ರೆಗೆ ಹೋದ ಕನ್ನಡಿಗರು

ಧಾರವಾಡ : ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಅವರ ರಕ್ಷಣೆ ಮುಂದಾಗಿರುವ ಕೇಂದ್ರ ಸರ್ಕಾರ, ಹೆಲಿಕಾಪ್ಟರ್ ಮುಖಾಂತರ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ. ಸದ್ಯ, ಧಾರವಾಡದ ಐದು ಜನ ಇರುವ ಪಂಚತರಣಿಯಲ್ಲಿ ಏರ್ ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ …

Read More »