BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಶಿಕ್ಷಣ, ಸುದ್ದಿ
ಧಾರವಾಡ ನವಲಗುಂದ: ನವಲಗುಂದ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಈ ಕೂಡಲೇ ಶಾಲಾವಾರು ಖಾಲಿ ಇರುವಂತಹ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸಮಾಜ ಸೇವಕ ಮಾಬುಸಾಬ್ ಯರಗುಪ್ಪಿ ಒತ್ತಾಯಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ನೀಡಿ ಮಾತನಾಡಿದ ಮಾಬುಸಾಬ್ ಯರಗುಪ್ಪಿ ಅವರು, ಇವತ್ತು ತಾಲೂಕಿನಾದ್ಯಾಂತ 124 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿದ್ದು …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದಈರೇಶ ಅಂಚಟಗೇರಿ ಕೆಲಗೇರಿ ಬಡಾವಣೆಗಳಿಗೆ ಭೇಟಿ ನೀಡಿ, ಕೆಲಗೇರಿ ಕೆರೆಗೆ ಸರೋವರ ನಗರ ಹಾಗೂ ಇನ್ನಿತರ ಕಡೆಯಿಂದ ಕೊಳಚೆ ನೀರು ಬಂದು ಸಂಗ್ರಹವಾಗುತ್ತಿರುವ ಹಿನ್ನೆಲೆಯಲ್ಲಿ ಸರೋವರ ನಗರ ಹಾಗೂ ಇನ್ನಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಸಮಸ್ಯೆಗಳನ್ನು ಅರಿತು, ಕೂಡಲೇ ಕೆಲಗೇರಿ ಕೆರೆಯ ಮುಖಾಂತರ ಹೊರಹೋಗುವ ನಾಲಾ ನೀರನ್ನು ಸ್ವಚ್ಛಗೊಳಿಸಬೇಕು. ಹಾಗೂ ಕೂಡಲೇ ಉನ್ನತ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಸಂಪೂರ್ಣ ಕೆಲಗೇರಿ …
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಖಾಸಗಿ ಬಸ್ ಹಾಗೂ ಕ್ರೂಸರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕ್ರೂಸರ್‌ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ಎಲ್ಲಿಯವರು ಹಾಗೂ ಎಲ್ಲಿಂದ ಎಲ್ಲಿಗೆ ಹೊರಟಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
Read More »
BigTv News
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವಲಗುಂದ:ಗುಡಿಸಾಗರ-ನವಲಗುಂದ ರಸ್ತೆಯಲ್ಲಿ ಟವೇರಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗುಡಿಸಾಗರ ಗ್ರಾಮದ ಮಡಿವಾಳಪ್ಪ ಬಸಪ್ಪ ಕಡೆಮನಿ ನವಲಗು೦ದದಿಂದ ಗುಡಿಸಾಗರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯವಾದ ಮಡಿವಾಳಪ್ಪ ಅವರಿಗೆ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಟವೇರಾ ರೋಣದಿಂದ ಕಿರೇಸೂರ ಗ್ರಾಮಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ: ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರಕಾರದ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಅದನ್ನು ಸಮರ್ಪಕವಾಗಿ ನಡೆಸಿ. ಇನ್ನೂ ಎಲ್ಲೆಲ್ಲಿ ಸಾಧ್ಯವಿದೆ ಎಂದು ಪರಿಶೀಲಿಸಿ ಆದ್ಯತೆಯ ಮೇಲೆ ಆರಂಭಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಬುಧವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ಆರಂಭಿಸಲಾಗಿರುವ ಆರು ಇಂದಿರಾ ಕ್ಯಾಂಟೀನ್ …
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ. ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್, ನಿನ್ನೆ ಬುಧವಾರ ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ. ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
BigTv News
June 8, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕ್ರೆಡೈ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ 10ರಂದುಸರ್ಕಾರಕ್ಕೆ ಅತೀ ಹೆಚ್ಚು ಆದಾಯ ಕೊಡುತ್ತಿರುವ ಸಂಸ್ಥೆಗೆ ಪ್ರದೀಪ ರಾಯ್ಕರ ಸಾರಥ್ಯ ಹುಬ್ಬಳ್ಳಿ: ಸರ್ಕಾರಕ್ಕೆ ಆದಾಯ ತಂದು ಕೊಡುವ ಎರಡನೆಯ ಅತೀ ದೊಡ್ಡ ಉದ್ಯಮ ರಿಯಲ್ ಎಸ್ಟೇಟ್. ಈ ಉದ್ಯಮವನ್ನು ಸುಸಂಘಟಿತ ಹಾಗೂ ಕಾನೂನು ಬದ್ಧವಾಗಿ ನಡೆಸಿಕೊಂಡು ಬರುತ್ತಿರುವ ಕ್ರೆಡೈಗೆ ನೂತನ ರಾಜ್ಯಾಧ್ಯಕ್ಷರಾಗಿ ಹುಬ್ಬಳ್ಳಿಯ ಉದ್ಯಮಿ ಪ್ರದೀಪ ರಾಯ್ಕರ್ ಅವರು ಆಯ್ಕೆಯಾಗಿದ್ದು, ಇವರ ಅಧಿಕಾರ ಸ್ವೀಕಾರ ಸಮಾರಂಭ ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್‌ನಲ್ಲಿ ಜೂನ್ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ
ಅದ್ಧೂರಿಯಾಗಿ ವಿವಾಹ ಮಾಡಿಕೊಂಡಿರುವ ಸುಮಲತಾ ಅಂಬರೀಷ್ ಅವರ ಪುತ್ರ ಅಭಿಷೇಕ ನಾಳೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆಯಲಿರುವ ತಮ್ಮ ಆರತಕ್ಷತೆಗೆ ಅಭಿಮಾನಿಗೆ ಆಹ್ವಾನ ಮಾಡಿದ್ದಾರೆ ಹೌದು! ನೀವು ದೃಶ್ಯಗಳಲ್ಲಿ ನೋಡುತ್ತಿರುವ ಈ ಬಾಲಕಿ ಹೆಸರು ಸೌಭಾಗ್ಯ ಯಮನೂರ. ಈಕೆ ಹುಟ್ಟುತ್ತಲೇ ವಿಶೇಷ ಚೇತನಳು ಆದರೆ ಸುಮಲತಾ ಅಂಬರೀಷ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ.. ಪತ್ರಿಕೆಗಳಲ್ಲಿ ಬರುವ ಸುಮಲತಾ ಅವರ ಫೋಟೋಗಳನ್ನು ಕಟ್ ಮಾಡಿಟ್ಟುಕೊಳ್ಳುತ್ತಾಳೆ. ಅಲ್ಲದೇ ತಾನು ಸುಮಲತಾ ಅಂಬರೀಷ್ ಅವರ ಅಭಿಮಾನಿ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಇಂದು ಪ್ರತಿಭಟನೆ ಮಾಡಲಾಯಿತು ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಈ ಪ್ರತಿಭಟನೆ ಮಾಡಲಾಗಿದ್ದು ಈ ಸಮಯದಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶವನ್ನು ವ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜನರ ಜೇಬಿಜೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಧಿಕ್ಕಾರ ಪ್ರತಿಭಟನೆ. ಈಗಾಗಲೇ ಮಾರುಕಟ್ಟೆಯಲ್ಲಿ ದಿನಸಿ ಸಾಮಾನುಗಳ ಬೆಲೆ ಏರಿಕೆಯಾಗಿದ್ದು, ಸರಕಾರ …
Read More »
BigTv News
June 7, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿಪಡಿಸಲಾಗಿದೆ ಎಂದು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಅಧ್ಯಕ್ಷಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ …
Read More »