BigTv News
December 25, 2022
Breaking News, ಜಿಲ್ಲೆ, ಹಾವೇರಿ
ಹಾವೇರಿ : ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತ ಶಕ್ತಿ ಡೀಸೆಲ್ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಮೂಲಕ …
Read More »
BigTv News
December 24, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಇನ್ನು ಮೂರು ತಿಂಗಳ ಅವಧಿಯೊಳಗೆ ದೇಶದಲ್ಲಿ ಮತ್ತೆ ಕೊರೊನಾ ಉಲ್ಬಣವಾಗುವ ಸಾಧ್ಯತೆ ಇದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ. ಮೈಸೂರು ತಾಲೂಕಿನ ಸುತ್ತೂರಿನಲ್ಲಿ ನಡೆದ ಶ್ರೀ ಆದಿಜಗದ್ಗುರು ಶಿವರಾತ್ರಿ ಶಿವಯೋಗಿಗಳವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚೀನಾ, ಆಸ್ಟ್ರೇಲಿಯಾ, ಬ್ರೆಜಿಲ್ ಹಾಗೂ ಅಮೆರಿಕ ಇನ್ನಿತರ ದೇಶಗಳಲ್ಲಿ ಕೊರೊನಾ ರೋಗ ಹರಡುವಿಕೆ ಉಲ್ಬಣಗೊಂಡಿದ್ದು, ಮುಂಬರುವ ದಿನಗಳಲ್ಲಿ ನಮ್ಮಲ್ಲೂ ಸೋಂಕು …
Read More »
BigTv News
December 22, 2022
Breaking News, ಶಿವಮೊಗ್ಗ
ಶಿವಮೊಗ್ಗ: ಗಮಕ ಕಲೆಯಿಂದಲೇ ದೇಶದಲ್ಲೇ ಪ್ರಸಿದ್ಧಿ ಪಡೆದಿದ್ದ ಎಚ್.ಆರ್.ಕೇಶವಮೂರ್ತಿ ಅವರು (88) ನಿಧನರಾದರು. ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. 1934ರ ಫೆ.22 ರಂದು ಹೊಸಹಳ್ಳಿ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರರಾಗಿ ಜನಿಸಿದ ಇವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ …
Read More »
BigTv News
December 21, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಅಪ್ಪ ಅಮ್ಮನ ಜಗಳದಿಂದ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕು ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (20) ಮೃತ ದುರ್ದೈವಿ. ಮನೆಯಲ್ಲಿ ತಂದೆ ತಾಯಿಯ ನಡುವಿನ ಗಲಾಟೆ ಕಂಡು ಮಹೇಂದ್ರ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದನು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
December 19, 2022
Breaking News, ಗದಗ, ಜಿಲ್ಲೆ
ಗದಗ: ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ಹದ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ …
Read More »
BigTv News
December 17, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಡಿಪೋ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಹಿಳೆ ಮಚ್ಚು ಹಿಡಿದು ಬಂದಿರುವಂತಹ ಘಟನೆ ಜಿಲ್ಲೆಯ ಸಾತಗಳ್ಳಿ ಬಸ್ ಡಿಪೋನಲ್ಲಿ ಡಿ. 12ರಂದು ನಡೆದಿತ್ತು. ಸದ್ಯ ಈ ಕೇಸ್ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಫೀಕ್ ಅಹ್ಮದ್ ಹಾಗೂ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಾಗಿ ನಗರದಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯೆ ನೀಡಿದ್ದು, ಅಧಿಕಾರಿಗೆ ಮಚ್ಚು ತೋರಿಸಿದ್ದ ದಂಪತಿಯನ್ನು ಬಂಧಿಸಲಾಗಿದೆ. ಸಾತಗಳ್ಳಿ ಬಸ್ ಡಿಪೋ ಅಧಿಕಾರಿಗಳು ಡಿ.12ರಂದು ಕಟ್ಟಡ …
Read More »
BigTv News
December 16, 2022
Breaking News, ಗದಗ, ಜಿಲ್ಲೆ
ಗದಗ: ಕಾಂಗ್ರೆಸ್ ನ ಮಾಜಿ ಶಾಸಕ ಶಂಕರಗೌಡ ಎನ್ ಪಾಟೀಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಮ್ಮ 81 ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದ ಇವರು ಗುರುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಪಾಟೀಲ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಇದರ ಕಾರಣ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1989-1994ರ ಅವಧಿಯಲ್ಲಿ ಶಂಕರಗೌಡ ಅವರು ಕಾಂಗ್ರೆಸ್ ನಿಂದ …
Read More »
BigTv News
December 16, 2022
Breaking News, ಜಿಲ್ಲೆ, ಹಾವೇರಿ
ಹಾವೇರಿ: ಬಿಜೆಪಿಯ ನೂತನ ಜಿಲ್ಲಾ ಕಾರ್ಯಾಲಯದ ಉದ್ಘಾಟನೆ ನಡೆಯಿತು. ಮುಂಜಾನೆ ಗೋ ಪೂಜೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ದಂಪತಿ ನೆರವೇರಿಸಿದರು. ತದನಂತರ ನವಗ್ರಹ ಪೂಜೆ ಸಾಂಗವಾಗಿ ನೆರವೇರಿತು ಹಾಗೂ ಶಾಂತಿ ಹೋಮ ಮಾಡಲಾಯಿತು.ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರಾದ ಆರ್. ಶಂಕರ್, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಸುರೇಶಗೌಡ ಪಾಟೀಲ ಅವರು ಭವನದ ವಿವಿಧ ಕೊಠಡಿಗಳನ್ನು ಉದ್ಘಾಟಿಸಿದರು. ರಾಜ್ಯ ಶಿಸ್ತು …
Read More »
BigTv News
December 14, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗುತ್ತಿದ್ದೇನೆ. ಈ ವಿಷಯದ ನಂತರ ಸಚಿವ ಸಂಪುಟ ವಿಸ್ತರಣೆ ವಿಚಾರ ಬಂದರೆ ಚರ್ಚೆ ಮಾಡುತ್ತೇವೆ. ಅದಕ್ಕಾಗಿ ಸಿದ್ಧತೆ ಮಾಡಿಕೊಂಡು ಹೋಗಿರುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಗೃಹ ಸಚಿವರು ಗಡಿವಿವಾದದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ. ಈಗಾಗಲೇ ರಾಜ್ಯ ಪುನರ್ ವಿಂಗಡನಾ …
Read More »
BigTv News
December 14, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ …
Read More »