BigTv News
December 2, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ನರ್ಸಿಂಗ್ ಕಾಲೇಜುಗಳಲ್ಲಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ನೆರಡು ವಾರಗಳಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದರು.ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ವರದಿ ನೀಡಲು ಸೂಚಿಸಲಾಗಿದ್ದು, ವರದಿ …
Read More »
BigTv News
December 1, 2022
Breaking News, ಜಿಲ್ಲೆ, ಹಾಸನ
ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಹಾಸನದ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು. ಶಿವಲಿಂಗೇಗೌಡರು ಪಕ್ಷ ತೊರೆಯುವುದಿಲ್ಲ ಎಂದು ಅವರೇ ಹೇಳಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿಯನ್ನು ಭೇಟಿಯಾಗಿ ಅವರು ತಿಳಿಸಿದ್ದಾರೆ. ದೇವೇಗೌಡರು ಇರುವವರೆಗೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. …
Read More »
BigTv News
December 1, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ ಮತ್ತು ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ನವೆಂಬರ್29- 30ರಂದು ರಾತ್ರಿ ವೇಳೆಯಲ್ಲಿ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ ” ಸಾಹೇಬ್ ಗಂಜ್ ದರೋಡೆ ಗ್ಯಾಂಗ್ …
Read More »
BigTv News
December 1, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ (ಕೆಆರ್ ಇಡಿಎಲ್) ಯೋಜನಾ ನಿರ್ದೇಶಕ, ವಿಜಯನಗರ ನಿವಾಸಿ ಡಿ.ಕೆ.ದಿನೇಶ್ ಕುಮಾರ್ (51) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಗ್ಗೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡಪಾಳ್ಯ ಗ್ರಾಮದ ದಿನೇಶ್ ಬೆಂಗಳೂರಿನ ನಾಗರಬಾವಿಯಲ್ಲಿ ಕೆಆರ್ ಇಡಿಎಲ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಭಾನುವಾರ ರಾತ್ರಿ ಊಟದ ನಂತರ ದಿನೇಶ್ ಮಲಗಿದ್ದರು ಮತ್ತು ಸೋಮವಾರ ಪ್ರಜ್ಞೆ ತಪ್ಪಿದರು ಎಂದು ಅವರ ಪತ್ನಿ …
Read More »
BigTv News
November 30, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಬುಧವಾರ ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ …
Read More »
BigTv News
November 29, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಅಡಕೆ ಬೆಳಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಎಲೆ ಚುಕ್ಕಿ ರೋಗ ಬಾದಿತ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಲಾಭ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಉಂಟೂರು ಕೈಮರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗುವುದು. ಎಲೆ ಚುಕ್ಕಿ ರೋಗ ಬಾದಿತ …
Read More »
BigTv News
November 28, 2022
Breaking News, ಗದಗ, ಜಿಲ್ಲೆ
ಗದಗ : ನಗರದ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ಬಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಗದಗನ ಸಣ್ಣಮಕ್ಕಳ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ …
Read More »
BigTv News
November 27, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಎದುರು ಇದ್ದ ಬಸ್ ಶೆಲ್ಟರ್ ಮೇಲಿದ್ದ ಗುಂಬಜ್ ಸ್ಥಳೀಯ ಬಿಜೆಪಿ ಶಾಸಕರ ಹಾಗೂ ಬಿಜೆಪಿ ಸಂಸದರ ವಾಕ್ಸಮರಕ್ಕೆ ಕಾರಣವಾಗಿತ್ತು. ಇದಲ್ಲದೇ ಸಂಸದ ಪ್ರತಾಪ್ ಸಿಂಹ ಇದನ್ನು ಹೊಡೆದು ಹಾಕುವ ಬೆದರಿಕೆಯನ್ನು ಕೂಡ ಹಾಕಿದ್ದರು. ಈ ನಡುವೆ ಬಸ್ ನಿಲ್ದಾಣದ ಮೇಲೆ ನಿರ್ಮಾಣವಾಗಿದ್ದ ಮೂರು ಗುಂಬಜ್ ಪೈಕಿ ಎರಡನ್ನು ತೆರವು ಮಾಡಲಾಗಿದೆ ಅಂಥ ಸ್ಥಳೀಯ ಶಾಸಕ ರಾಮದಾಸ್ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.
Read More »
BigTv News
November 27, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಮಹಮ್ಮದ್ ಶಾರೀಕ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ. ಇದೀಗ ಪೊಲೀಸರ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ವಿಷಯ ಬಯಲಾಗ್ತಿದೆ. ಮಂಗಳೂರಿಗೆ ಬಾಂಬ್ ಜೊತೆಗೆ ಬಂದಿದ್ದು ಕೇವಲ ಶಾರೀಕ್ ಮಾತ್ರ ಅಲ್ಲ. ಮತ್ತೊಬ್ಬ ವ್ಯಕ್ತಿ ಇದ್ದ ಅನ್ನುವ ಆತಂಕಕಾರಿ ಮಾಹಿತಿಯೂ ಬಯಲಾಗಿದೆ. ನವೆಂಬರ್ 19ರಂದು ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಗೂ ಮುನ್ನ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರೀಕ್ ಜೊತೆಗೆ ಇನ್ನಿಬ್ಬರು ಇದ್ದರು …
Read More »
BigTv News
November 26, 2022
Breaking News, ಗದಗ, ಜಿಲ್ಲೆ
ಗದಗ: ಅನಾರೋಗ್ಯದಿಂದ ಬೇಸತ್ತು ಹೆಡ್ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ತೇಜಾ ನಗರದಲ್ಲಿ ನಡೆದಿದೆ. ಅನಿಲ್ ಸಜ್ಜನರ್(48) ಮೃತ ಹೆಡ್ಕಾನ್ಸ್ಟೇಬಲ್. ಅನಿಲ್ ಸಜ್ಜನರ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿದ್ದರು. ಅನಿಲ್ ಸಜ್ಜನರ್ 2 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇಂದು (ನ. 25) ಅನಿಲ್ ಸಜ್ಜನರ್ ಎಳನೀರು ತರುವಂತೆ ಪತ್ನಿಯನ್ನು ಹೊರಗೆ ಕಳುಹಿಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ …
Read More »