Breaking News

ಜಿಲ್ಲೆ

ಗೋವುಗಳ ರಕ್ಷಣೆಗಾಗಿ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ : ಪ್ರಭು ಚೌಹಾಣ್

ಶಿವಮೊಗ್ಗ: ರಾಜ್ಯದಲ್ಲಿ ಗೋವುಗಳ ರಕ್ಷಣೆಗಾಗಿ ಈಗಾಗಲೇ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ. ಇದರಿಂದ 100 ಸರ್ಕಾರಿ ಗೋಶಾಲೆಗಳನ್ನು ಆರಂಭಿಸಲು ತಯಾರಿ ನಡೆದಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಮೇಲೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅದರಂತೆ ಇದೀಗ ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಎನ್ನುವ ಉದ್ದೇಶದಿಂದ ‘ಪುಣ್ಯದತ್ತು’ …

Read More »

ಸಾಲ ಕೊಡಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮೈಸೂರು : ಜಿಲ್ಲೆ ಹೆಚ್​​.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದ ರೈತ ಲಿಂಗೇಗೌಡ(72) ಎಂಬುವವರು ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ. 4 ಎಕರೆ 13 ಗುಂಟೆ ಜಮೀನು‌ ಹೊಂದಿದ್ದ ರೈತ ಲಿಂಗೇಗೌಡ, ₹2 ಲಕ್ಷ ಸಾಲಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್​ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪಡೆದ ಸಾಲ ತೀರಿಸಿಲ್ಲ ಎಂದು ಬ್ಯಾಂಕ್ ಸಾಲ ನಿರಾಕರಿಸಿತ್ತು. ಇದರಿಂದ ಮನನೊಂದು ಬ್ಯಾಂಕ್​​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ರೈತ ಲಿಂಗೇಗೌಡನನ್ನು ಕೆ.ಆರ್​.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …

Read More »

ಅಪರಿಚಿತ ವಾಹನ ಡಿಕ್ಕಿ : ಗರ್ಭಿಣಿ ಹಸು ಸಾವು

ಶಿವಮೊಗ್ಗ: ಇಂದು ಬೆಳಿಗ್ಗೆ ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಮ್‌ ಬಳಿ ಅಪರಿಚಿತ ವಾಹನವೊಂದು ತುಂಬು ಗರ್ಭಿಣಿ ಹಸುವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಸು ಸ್ಥಳದಲ್ಲೆ ಒದ್ದಾಡಿ ಮೃತಪಟ್ಟಿದೆ. ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದು ಪಾಲಿಕೆ ವತಿಯಿಂದ ಹಸುವಿನ ಅಂತ್ಯಸಂಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ವಾಹನ ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ಕುಕ್ಕರ್ ಬಾಂಬ್ ಪ್ರಕರಣ : ಪೋಲಿಸರ ಹೈ ಅಲರ್ಟ್

ಮಂಗಳೂರು : ನಾಗುರಿ ಪರಿಸರದಲ್ಲಿ ಶನಿವಾರ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಲ್ಲೇ, ರಾಜ್ಯಾದ್ಯಂತ ಪೊಲೀಸರ ಹೈ-ಅಲರ್ಟ್ ಘೋಷಿಸಲಾಗಿದೆ. ವಿವಿಧ ಗಡಿ ಭಾಗಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಜೊತೆಗೆ ತೀವ್ರ ನಿಗಾ ವಹಿಸಿಕೊಂಡಿದ್ದಾರೆ. ಸ್ಫೋಟದ ಆರೋಪಿ ಶಾರೀಕ್ ಎಂದು ಗುರಿತಿಸಲಾಗಿದ್ದು,ಆತ ಇದ್ದ ತೀರ್ಥಹಳ್ಳಿಯ ಮನೆಗೂ ಪೊಲೀಸರನ್ನು ಒಳಗೊಂಡಂತೆ ಅಧಿಕಾರಿಗಳ ತಂಡವು ಭೇಟಿ ನೀಡಿ, ಪರಿಶೀಲನೆಯಲ್ಲಿ ತೊಡಗಿದೆ.

Read More »

ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆಯಾಗಿದೆ : ಅಲೋಕ್‌ ಕುಮಾರ್

ಮಂಗಳೂರು: ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆಯಾಗಿದೆ ಅಂಥ ಎಡಿಜಿಪಿ ಅಲೋಕ್‌ ಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ. ಅವರು ಇದೇ ವೇಳೇ ಘಟನೆಯಲ್ಲಿ ಚಾಲಕನಿಗೆ ಹಾಗೂ ಪ್ರಯಾಣಕನಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೋಲಿಸರು ತನಿಖೆ ಮಾಡಿದ ವೇಳೆಯಲ್ಲಿ ಘಟನೆಯಲ್ಲಿ ಪ್ರಯಾಣಿಕರ ಮುಖ ಶೇ 40 ಸುಟ್ಟು ಹೋಗಿತ್ತು, ಈ ನಡುವೆ …

Read More »


ಮಂಗಳೂರು ಆಟೋದಲ್ಲಿ ಸ್ಫೋಟ ಪ್ರಕರಣ : ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ

ಮಂಗಳೂರು: ನಗರದಲ್ಲಿ  ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ ರಾಜ್ಯದಲ್ಲಿ ಸೂಕ್ಷ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆ ಪೊಲೀಸರಿಗೆ ಸೂಚನೆ ನೀಡಿದೆ. ಏರ್ ಪೋರ್ಟ್, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳು, ಪ್ರವಾಸಿ ತಾಣಗಳು, ದೇವಾಲಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಪ್ರಕರಣದ …

Read More »

ಡಿ.25 ರಂದು ರಾಜ್ಯದ ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ NEP ಜಾರಿ : ಬಿ.ಸಿ.ನಾಗೇಶ್

ಮಂಗಳೂರು : ಡಿಸೆಂಬರ್ 25 ರಂದು ರಾಜ್ಯದ 20 ಸಾವಿರ ಅಂಗನವಾಡಿ ಹಾಗೂ 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯ ಪಠ್ಯಕ್ರಮ ನವೆಂಬರ್ ತಿಂಗಳಾಂತ್ಯಕ್ಕೆ ಬರಲಿದೆ. 1,2 ನೇ ತರಗತಿಗೆ ಎರಡೆರಡು ಪುಸ್ತಕ ಇರುತ್ತದೆ. ಒಂದು ಸಂಖ್ಯಾಶಾಸ್ತ್ರ ವಿಚಾರಗಳನ್ನು ತಿಳಿಸುವಂತಹ ಪುಸ್ತಕವಾದರೆ …

Read More »

ಸಂಸದರ ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. …

Read More »

ಹೊಟ್ಟೆಕಿಚ್ಚಿನಿಂದ ಸಂಸದರನ್ನೇ ಅಪರಾಧಗಳಿಗೆ ಗುರಿ ಮಾಡುವುದು ಸರಿಯಲ್ಲ : ಸುಮಾಲತಾ ಅಂಬರೀಷ್

ಮಂಡ್ಯ: ನರೇಗಾ ಎಂದರೆ ಏನು ಎಂಬುವುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಅದರಲ್ಲಿ ಯಾವ ಕೆಲಸಗಳಿವೆ ಎನ್ನುವುದು ಜನಸಾಮಾನ್ಯರಿಗೆ ಗೊತ್ತಿಲ್ಲ. ಕೆಲವರು ಹೊಟ್ಟೆಕಿಚ್ಚಿನಿಂದ ಸಂಸದರನ್ನೇ ಅಪರಾಧಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಂಸದೆ ಸುಮಾಲತಾ ಅಂಬರೀಷ್ ಮಂಡ್ಯದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅವರನ್ನು ಶುಕ್ರವಾರ ಭೇಟಿ ಮಾಡಿ ನರೇಗಾ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದರು. ನರೇಗಾದಲ್ಲಿ ಏನೇನು ಮಾಡಿಸಬಹುದು ಎಂಬುದರ …

Read More »

ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ : ಸಿದ್ದರಾಮಯ್ಯ

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ”ಕೋಲಾರ, ಬಾದಾಮಿ, ವರುಣಾಕ್ಷೇತ್ರ ಶಾರ್ಟ್ ಲಿಸ್ಟ್ ನಲ್ಲಿ ಇದೆ. ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಸ್ಪರ್ಧಿಸುವ ಕ್ಷೇತ್ರ ಹೇಳುತ್ತೇನೆ” ಎಂದು ತಿಳಿಸಿದರು. ”ಹಾಗೆಯೇ ಸೋಲಿನ ಭಯದಲ್ಲಿ ಸರ್ವೇ ಮಾಡುತ್ತಿದ್ದಾರೆ ಎನ್ನುತ್ತಾರೆ. ಆದರೆ ಸರ್ವೇ ಮಾಡಿಸಿದರೆ ತಪ್ಪೇನು …

Read More »