Breaking News

ಜಿಲ್ಲೆ

ಸಿಎಚ್ಒಗಳಿಗೆ ವೇತನ ಹೆಚ್ಚಳ, ಸೇವಾವಧಿ ಪೂರ್ಣಗೊಳಿಸಿದವರಿಗೆ ಬೋನಸ್: ಸಿಎಂ ಭರವಸೆ

ಮೈಸೂರು: ಸಮುದಾಯ ಆರೋಗ್ಯ ಅಧಿಕಾರಿ(ಸಿಎಚ್‌ಒ)ಗಳಿಗೆ ಬಾಕಿ ಉಳಿದಿರುವ 2022-23ನೇ ಸಾಲಿನ ಶೇ 5ರಷ್ಟು ವೇತನ ಹೆಚ್ಚಿಸಲಾಗುವುದು. 3 ಹಾಗೂ 5 ವರ್ಷ ಸೇವಾವಧಿ ಪೂರ್ಣಗೊಳಿಸಿದವರಿಗೆ ಮಾರ್ಗಸೂಚಿ ಅನ್ವಯ ಬೋನಸ್‌ ನೀಡಲಾಗುವುದು ಮತ್ತು ಅಂತರಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆರು ವರ್ಷ ಸೇವೆ ಪೂರೈಸಿದವರ ಕೆಲಸ ಕಾಯಂಗೊಳಿಸಬೇಕು’ ಎಂಬ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ (ಎನ್‌ಎಚ್‌ಎಂ) ಗುತ್ತಿಗೆ ನೌಕರರ ಸಂಘದಿಂದ …

Read More »

ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ಧರಾಮಯ್ಯ

ಮೈಸೂರು: ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಇಡ್ಲಿ, ಮಸಾಲೆ ದೋಸೆ ಸವಿದ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯ ಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಜೊತೆಯಲ್ಲಿದ್ದು ಉಪಹಾರ ಸೇವಿಸಿದರು. ಮುಖ್ಯಮಂತ್ರಿ ಉಪಹಾರಕ್ಕೆ ಆಗಮಿಸಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಕಿಕ್ಕಿರಿದು …

Read More »

ಮೈಕ್ರೋ ಫೈನಾನ್ಸ್​​​​​ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಮೈಸೂರು ಜಿಲ್ಲೆ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ಬಡವರ ಆರ್ಥಿಕ …

Read More »

ಮಧ್ಯಂತರ ವರದಿ ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹ

ಹಾಸನ: ಒಳಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಕೂಡಲೇ ಈಗಾಗಲೇ ಸಂಗ್ರಹಿಸಿರುವ ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಆದರೂ …

Read More »

ಮೈಕ್ರೋ ಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಮೈಕ್ರೋಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ. ಯಾವ ರೀತಿ ಅವರ ಮೇಲೆ ಕಡಿವಾಣ ಹಾಕಿದ್ದೀರಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಮಸ್ಯೆ ಇದೆ. ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ …

Read More »

ಬೆಂಗಳೂರು ಅರಮನೆ ಜಾಗಕ್ಕೆ ಸಂಬಂಧಪಟ್ಟ ದಾಖಲೆಗಳು ನನ್ನ ಬಳಿ ಇವೆ: ಪ್ರಮೋದಾದೇವಿ ಒಡೆಯರ್

ಮೈಸೂರು: ಬೆಂಗಳೂರು ಅರಮನೆ ಮೈದಾನ ಜಾಗಕ್ಕೆ ಈಗಾಗಲೇ ನ್ಯಾಯಾಲಯದ ತಡೆಯಾಜ್ಞೆ ಇದೆ. ಅಲ್ಲದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕೆಂದು ಸಹ ಹೇಳಲಾಗಿದೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳು ನನ್ನ ಬಳಿ ಇವೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತಿಳಿಸಿದರು. ಬೆಂಗಳೂರು ಅರಮನೆ ಮೈದಾನ ಜಾಗಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ನೋಡಿದ್ದೇನೆ. ಅರಮನೆ ಮೈದಾನದಲ್ಲಿ ಇಷ್ಟು ವರ್ಷ ನಡೆದ ಚಟುವಟಿಕೆಗಳು ಸರ್ಕಾರಕ್ಕೆ …

Read More »

ಲಿಂಗಾಯತ ಸ್ವತಂತ್ರ ಮಾನ್ಯತೆ ಸಿಕ್ಕಿದ್ದರೆ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು: ಸಚಿವ ಎಂ.ಬಿ.ಪಾಟೀಲ್

ಮೈಸೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಸಿಕ್ಕಿದ್ದರೆ ಸಮುದಾಯದ ಎಲ್ಲ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು. ಸಮುದಾಯದ ಜನಸಂಖ್ಯೆ ಶೇ 17ರಿಂದ 30ರಷ್ಟು ಆಗುತ್ತಿತ್ತು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಇಂದು ಇಲ್ಲಿ ಪ್ರತಿಪಾದಿಸಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಆಯೋಜಿರುವ ಮೂರು ದಿನಗಳ ‘ವೀರಶೈವ ಲಿಂಗಾಯತ ಬಿಸಿನೆಸ್‌ ಕಾಂಕ್ಲೇವ್‌’ನಲ್ಲಿ ಮಾತನಾಡಿದರು. ಮೀಸಲಾತಿ ಕಾರಣಕ್ಕಾಗಿ ಲಿಂಗಾಯತ ಉಪ್ಪಾರ, ಕುಂಬಾರ, ಕುರುಬ, ಹಡಪದ, …

Read More »

ಮೈಸೂರು: ನೀರು ಪೂರೈಕೆಗೆ ಅಮೃತ್ 2.0 ಯೋಜನೆಯಡಿ ₹455 ಕೋಟಿಯಲ್ಲಿ 10 ಕಾಮಗಾರಿಗಳ ಅನುಷ್ಠಾನ

ಮೈಸೂರು: ನಗರಕ್ಕೆ ಹೊಂದಿಕೊಂಡಿರುವ ಹಾಗೂ ಹೊರವಲಯದ ಪ್ರದೇಶಗಳು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಕುಡಿಯುವ ನೀರು ಪೂರೈಕೆ ‘ಜಾಲ’ ಬಲಗೊಳಿಸಲು ‘ಅಮೃತ್ 2.0’ ಯೋಜನೆಯಡಿ ಅನುದಾನದ ‘ಶಕ್ತಿ’ ದೊರೆತಿದೆ. ಅಂದಾಜು ಮೊತ್ತ ₹455.66 ಕೋಟಿಯಲ್ಲಿ ಒಟ್ಟು 10 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಪುರಸ್ಕೃತವಾದ ಈ ಯೋಜನೆಯಡಿ ಲಭ್ಯ ಅನುದಾನದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಎಲ್ಲವೂ ಅಂದುಕೊಂಡಂತೆಯೇ …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಸಚಿವ ಡಾ.ಎಚ್.ಸಿ ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಅವರೇ ಮುಂದುವರಿಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ನಮ್ಮಲ್ಲಿ ಯಾವುದೇ ಚರ್ಚೆ ಆಗುತ್ತಿಲ್ಲ. ನಾವು ಯಾರೂ ಒಬ್ಬರಿಗೊಬ್ಬರು ಗುಂಪುಗಾರಿಕೆ ಮಾಡುತ್ತಿಲ್ಲ. ಒಟ್ಟಿಗೆ ಕುಳಿತು ಊಟ ಮಾಡುವುದು ಅಪರಾಧವೇ’ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಬದಲಾವಣೆಗೂ ಕಾಂಗ್ರೆಸ್ ಶಾಸಕಾಂಗ …

Read More »

ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಯಿಂದ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ ತಾಂತ್ರಿಕ ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನುಶಿಶಿಕ್ಷು ತರಬೇತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಜ.5 ರಿಂದ ಜ.20 ವರೆಗೆ ಅರ್ಜಿ ಸಲ್ಲಿಸಬಹುದು. ಐಟಿಐ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್( ಡಿಸೇಲ್), ವೆಲ್ಡರ್, ಕೋಪಾ(ಪಾಸಾ)/ ಐಟಿಐ ನಲ್ಲಿ ತೇರ್ಗಡೆ ಹೊಂದಿರುವ ಡಿಟಿಪಿಓ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹತೆ ಹೊಂದಿದ್ದಾರೆ. ಮೆಕಾನಿಕಲ್ ಡಿಸೇಲ್-20, ಫಿಟ್ಟರ್-10, ವೆಲ್ಡರ್-10, ಎಲೆಕ್ಟಿçಷಿಯನ್-20, ಕೋಪಾ/ಡಿಡಿಪಿಓ-10 ಶಿಶಿಕ್ಷ …

Read More »