BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ …
Read More »
BigTv News
October 3, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಇಂದು(ಸೋಮವಾರ) 4ನೇ ದಿನಕ್ಕೆ ಕಾಲಿಟ್ಟಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನ ಆರ್.ಗೇಟ್ ವೃತ್ತದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗ್ಗೆ 6.30ಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ. ರಾಹುಲ್ ಸುತ್ತ ಮುತ್ತ ಕಾರ್ಯಕರ್ತರಿಗಿಂತ ಬಹುತೇಕ ಪೊಲೀಸರೇ ಇದ್ದು, ಬಿಗಿ ಭದ್ರತೆ ನೀಡಲಾಗಿದೆ. ದಾರಿ ಮಧ್ಯೆ ಮಸೀದಿ ಮತ್ತು ಚರ್ಚ್ಗೂ ರಾಹುಲ್ ಭೇಟಿ ನೀಡಿದರು. ಮಂಡಿ ಮೊಹಲ್ಲಾದಲ್ಲಿರುವ ಮಸ್ಜಿದೇ ಅಜಃಮ್ ಮಸಿದೀಗೆ ತೆರಳಿದ ರಾಗಾ, ಕೆಲ ನಿಮಿಷ ಪ್ರಾರ್ಥನೆ …
Read More »
BigTv News
October 2, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ, ಪ್ರಕಾಶಕ, ಗೋಕುಲಂ ಬಡಾವಣೆ ನಿವಾಸಿ ಟಿ.ಎಸ್.ಛಾಯಾಪತಿ (79) ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆ ಎಂಬ ಪ್ರಕಾಶನ ನಡೆಸುತ್ತಿದ್ದ ಅವರು, ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿದ್ದರು. 25 ಕೃತಿಗಳನ್ನು ತಾವೇ ಬರೆದಿದ್ದರು. ಅವರಿಗೆ ಸರ್ಕಾರದಿಂದ ಅತ್ಯುತ್ತಮ ಪ್ರಕಾಶಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅಂತ್ಯಕ್ರಿಯೆ ಅ.2 (ಭಾನುವಾರ) ಮಧ್ಯಾಹ್ನ ಗೋಕುಲಂ ಬಡಾವಣೆಯ ರುದ್ರಭೂಮಿಯಲ್ಲಿ …
Read More »
BigTv News
September 27, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. …
Read More »
BigTv News
September 26, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು/ ಉಡುಪಿ/ಕಾಸರಗೋಡು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.ವಿವಿಧ ದೇಗುಲಗಳು ವಿದ್ಯುತ್ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ. ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ …
Read More »
BigTv News
September 26, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು. ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ‍್ಯಾಡಿಷನ್ ಬ್ಲೂ ಹೋಟೆಲ್‌ನಿಂದ ಕೆಎಸ್‌ಆರ್‌ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್‌ಎಸ್ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ ‘ಅಂಬಾರಿ’ ಡಬ್ಬಲ್ ಡೆಕ್ಕರ್ …
Read More »
BigTv News
September 26, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ …
Read More »
BigTv News
September 25, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಸೋಮವಾರ ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು …
Read More »
BigTv News
September 25, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಗೆ ಅವಕಾಶ ಇಲ್ಲ, ಇದೇ ಮೊದಲ ಬಾರಿ ಅಧಿಕಾರಿಗಳು ಮಹಿಷ ಪ್ರತಿಮೆ ಮುಚ್ಚಿದ್ಧಾರೆ. ಚಾಮುಂಡಿ ಬೆಟ್ಟದ ಪ್ರವೇಶದ್ವಾರದ ಮಹಿಷಾಸುರ ಪ್ರತಿಮೆಯಿದ್ದು, ಟಾರ್ಪಲ್ ಮೂಲಕ ಮಹಿಷ ಪ್ರತಿಮೆ ಬಂದ್ ಮಾಡಲಾಗಿದ್ದು, ಜಿಲ್ಲಾಡಳಿತದಿಂದ ಮಹಿಷ ದಸರಾಗೆ ಅನುಮತಿ ನಿರಾಕರಣೆ ಮಾಡಿದ್ಧಾರೆ. ಆಯೋಜಕರು ಪಾರ್ಕ್ನಲ್ಲಿ ಮಹಿಷ ದಸರಾ ಮಾಡಲು ನಿರ್ಧರಿಸಿದ್ಧಾರೆ.
Read More »
BigTv News
September 25, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ದಸರಾ ಉದ್ಘಾಟನೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಇಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡಲಿದ್ದಾರೆ. ಬಳಿಕ 3.30ಕ್ಕೆ ಕರಾಮುವಿ ಘಟಿಕೋತ್ಸವ ಭವನದಲ್ಲಿ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕಕ್ಕೆ ಕೆ.ಆರ್.ಕ್ಷೇತ್ರದ ವಿದ್ಯಾರಣ್ಯಪುರಂನಲ್ಲಿರುವ ಶ್ರೀ …
Read More »