Breaking News

ಜಿಲ್ಲೆ

ಪ್ರೀತಂ ಗೌಡಗೆ ಸವಾಲ್ ಹಾಕಿದ ಕುಮಾರಸ್ವಾಮಿ

ಹಾಸನ :  ಜಿಲ್ಲೆಯ ಏಕೈಕ ಬಿ.ಜೆ.ಪಿ ಶಾಸಕ ಪ್ರೀತಂ ಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ಮತ್ತೆ ಮುಂದುವರಿದಿದೆ. ಹಾಸನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ನಿನ್ನ ಆಸ್ತಿ ಎಷ್ಟು, ನಮ್ಮ ಆಸ್ತಿ ಎಷ್ಟು ಹೇಳು ಎಂದು ಪ್ರೀತಂ ಗೌಡಗೆ ಸವಾಲು ಹಾಕಿದ್ದಾರೆ. ನಮಗೆ ಇ.ಡಿ ಮತ್ತು ಐಟಿ ಬಗ್ಗೆ ಭಯವಿಲ್ಲ. ನಾವು ರಾಜಮನೆತನದವರಲ್ಲ. ರಾಹುಲ್ ಗಾಂಧಿಯಿಂದ ಜೆಡಿಎಸ್ ಪಕ್ಷ ವನ್ನು ಬಿಜೆಪಿಯ ಬಿ …

Read More »

ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ : ಬಿ.ಸಿ. ನಾಗೇಶ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬಕ್ಕೆ ಪೂರಕವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ದಸರಾ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವ ಬಿ.ಸಿ. ನಾಗೇಶ್ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ …

Read More »

ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಂಡ ತಂದೆ, ಮಗ

ಶಿವಮೊಗ್ಗ : ರೈಲು ಹತ್ತುವಾಗಲೇ ಕಾಲು ಜಾರಿ ಬಿದ್ದು ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ 78 ವರ್ಷದ ಮೋಹನ್ ಪ್ರಸಾದ್ ಹಾಗೂ ಅವರ ಪುತ್ರ 38 ವರ್ಷದ ಅಮರನಾಥ್ ಮೃತರು. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಂಗಳೂರಿಗೆ ತೆರಳುವ ಸಲುವಾಗಿ ತಂದೆ ಮಗ ತಾಳಗುಪ್ಪ – ಬೆಂಗಳೂರು – ಮೈಸೂರು ರೈಲು ಹತ್ತುವಾಗ ಮೊದಲು ಮಗ ರಾಜೇಂದ್ರ …

Read More »

ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಾಲನೆ

ಬೆಂಗಳೂರು: ರಾಷ್ಟ್ರದ ಪ್ರಥಮ ಪ್ರಜೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಪ್ರಕಟಿಸಿದ್ದಾರೆ. ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಈ ಮಹತ್ವ ಘೋಷಣೆ ಮಾಡಿದ್ದಾರೆ.ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದಸರಾ ಉತ್ಸವನ್ನು …

Read More »

ಮರಬಿದ್ದು ಮಹಿಳೆ ಸಾವು

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಮಳೆಯಿಂದ ರಕ್ಷಣೆಗೆ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ರುಕ್ಮಿಣಿ ಮರನೂರ (38) ಮೃತ ಪಟ್ಟಿದ್ದು, ಅವರ ಪತಿ ಶ್ರೀಶೈಲ ಮರನೂರ ಗಾಯಗೊಂಡಿದ್ದಾರೆ. ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಗಂಜಿಹಾಳದ ರೈತ ದೇವಾನಂದ ಕಮ್ಮಾರ ಅವರ ಮೃತದೇಹ ಶುಕ್ರವಾರ ದೊರೆತಿದೆ. ಜಿಲ್ಲೆಯಲ್ಲಿ ಮಳೆ ತಗ್ಗಿದೆ. ಕಜಗಲ್ಲ, ವರಗೋಡದಿನ್ನಿ, ಹೂವನೂರ ಸೇರಿ ವಿವಿಧ ಗ್ರಾಮಗಳ ಜನರಹ ಮನೆಗಳತ್ತ ಮುಖಮಾಡಿದ್ದಾರೆ.

Read More »

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ : ಯುವಕ ಸಾವು

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗದಗದಲ್ಲಿ ಚಾಕು ಇರಿತ ಪ್ರಕರಣಕ್ಕೆ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುರುವಾರದಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಾವಣಗೆರೆ, ಚಿತ್ರದುರ್ಗ, ಹಾಸನ, …

Read More »

ಮೋದಿ ಆಗಮನಕ್ಕೆ ಮಂಗಳೂರಿಗೆ ಹರಿದ ಬಂದ ಜನ ಸಾಗರ

ಮಂಗಳೂರು: ಕರಾವಳಿಯ ಆರ್ಥಿಕ ಹೆಬ್ಟಾಗಿಲು ಕಡಲನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕೆ ಜನ ಸಾಗರವೇ ಸಾಕ್ಷಿಯಾಯಿತು. ಲಕ್ಷಾಂತರ ಅಭಿಮಾನಿಗಳಿಂದ “ಮೋದಿ-ಮೋದಿ’ ಎಂಬ ಘೋಷಣೆಗಳು ಸಭಾಂಗಣದ ಒಳಗೂ -ಹೊರಗೂ ಪ್ರತಿಧ್ವನಿಸಿ “ಮೋದಿ ಹವಾ’ ಸೃಷ್ಟಿಸಿತು. ದಕ್ಷಿಣ ಕನ್ನಡ ಜಿಲ್ಲೆಗೆ ಇದು ಐದನೇ ಬಾರಿಯ ಭೇಟಿಯಾದರೂ ಸರಕಾರಿ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಧಾನಿಯಾಗಿ ನರೇಂದ್ರ ಮೋದಿ ಭಾಗವಹಿಸುತ್ತಿರುವುದು ಇದೇ ಮೊದಲು. ಹಾಗಾಗಿ ಪ್ರಧಾನಿ ಎಂಬ ಅಂಶವೂ ಲಕ್ಷಾಂತರ ಸಂಖ್ಯೆಯಲ್ಲಿ ಜನರನ್ನು ಸೆಳೆದು …

Read More »

ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ : ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ.  ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ ಮಂಗಳೂರು ಏರ್ ಪೋರ್ಟ್ ನಿಂದ ತೆರಳುತ್ತಾರೆ. ಭದ್ರತೆಗಾಗಿ ಹೊರಗಿನ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದಾರೆ. …

Read More »

ಹಳೇ ದ್ವೇಷ : ಓರ್ವ ವ್ಯಕ್ತಿ ಸಾವು

ಮೈಸೂರು: ಹಳೇ ದ್ವೇಷದಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಇಲ್ಲಿನ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ ಕೊಲೆಯಾದಾತ. ನವೀನ್ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಲೆ ಆರೋಪಿಗಳಾದ ಚಂದ್ರು ಹಾಗೂ ಶೆಟ್ಟಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ವಿವರ: ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ …

Read More »