Breaking News

ಜಿಲ್ಲೆ

ಕಣ್ಣೀರನಲ್ಲಿ ಮಗಳಿಗೆ ವಿದಾಯ

ಮೈಸೂರು: ಎಂಸಿಡಿಸಿಸಿ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಮಗಳು ಸಾವಿಗೀಡಾಗಿದ್ದು, ತಂದೆಯು ಮಗಳ ಮೃತದೇಹ ತಬ್ಬಿ ಗೋಳಾಡುತ್ತಿದ್ದ ದೃಶ್ಯ ಎಲ್ಲರ ಕಣ್ಣಂಚಲಿ ನೀರುತಂದಿದೆ. ಮೈಸೂರಿನ ಗುಂಗ್ರಾಲ್ ಛತ್ರದ ತೋಟದ ಮನೆಯಲ್ಲಿ ಹರೀಶ್ ಗೌಡ ಅವರು ತಮ್ಮ ಮಗಳಾದ ಮೂವರು ವರ್ಷದ ಕಂದಮ್ಮ ಗೌರಿಯ ಅಂತ್ಯಕ್ರಿಯೆ‌ ನೆರವೇರಿಸಿದರು. ಮಗಳಿಗೆ ಅಂತಿಮ ವಿದಾಯ ಹೇಳುವಾಗ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಗೌರಿ ಶನಿವಾರ ರಾತ್ರಿ ಇಹಲೋಹ ತ್ಯಜಿಸಿದ್ದಳು. ಇಂದು …

Read More »

ಜನತಾ ಜಲಧಾರೆ ಕಾರ್ಯಕ್ರಮ : ಇಬ್ಬರು ಶಾಸಕರು ಗೈರುಹಾಸ

ಹಾಸನ: ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ತವರು ಕ್ಷೇತ್ರದಿಂದ ಇಬ್ಬರು ಶಾಸಕರು ಹಾಜರಾಗಿರುವುದು ಕಂಡು ಬಂದಿತ್ತು. ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ಅವರು ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದರು. ಜೆಡಿಎಸ್ ಮುಖಂಡರಾದ ಎಚ್.ಡಿ.ರೇವಣ್ಣ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಜತೆಗಿನ ಭಿನ್ನಾಭಿಪ್ರಾಯದಿಂದ ಶಿವಲಿಂಗೇಗೌಡ ಎರಡು ತಿಂಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

Read More »

ಬಿಜೆಪಿಗೆ ಸೇರ್ಪಡೆಯಾದ 17 ಜನ ಶಾಸಕರಿಗೆ ಶಾಕ್ ಕೊಟ್ಟ ಮಾಜಿ ಸಿಎಂ

ಮೈಸೂರು : ಬಿಜೆಪಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ 17 ಜನ ಶಾಸಕರ ಕುರಿತಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಂಪುಟ ವಿಸ್ತರಣೆ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.ವಿಜಯೇಂದ್ರ ಸಂಪುಟ ಸೇರ್ಪಡೆ ಕುರಿತು ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್, ಜೆಡಿಎಸ್ 17 ಶಾಸಕರು ಬಿಜೆಪಿಯಲ್ಲೇ ಉಳಿಯುತ್ತಾರಾ ಎಂಬ …

Read More »

ಪಿಎಸ್‌ಐ ನೇಮಕಾತಿ ಪ್ರಕರಣ : ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ: ಪಿಎಸ್‌ಐ ನೇಮಕಾತಿ ಹಗರಣದ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ತಿದೆ. ಇದೀಗ ಆರೋಪಿಯ ಅಣ್ಣನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ಗುಂಜೇವು ಗ್ರಾಮದ ಮನುಕುಮಾರ್ ಎಂಬಾತ ಪಿಎಸ್‌ಐ ಪರೀಕ್ಷೆ ಬರೆದು 50 ನೇ ರ್ಯಾಂಕ್ ಪಡೆದು ಆಯ್ಕೆಯಾಗಿದ್ದ, ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಪಿಎಸ್‌ಐ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು ಕೆಲವರನ್ನು ಬಂಧನ ಮಾಡಿದ್ದರು. ಈ ಹಂತದಲ್ಲಿ ಸಿಐಡಿ ಅಧಿಕಾರಿಗಳು ಅಭ್ಯರ್ಥಿ ಮನುಕುಮಾರ್‌ನನ್ನ ಬಂಧಿಸಿದ್ದರು. …

Read More »

ಮಾಧ್ಯಮ ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಹೀಗಿದ್ದರೂ ಅವರು ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಮಾಹಿತಿ ಕೊಡದೆ ಮಾಧ್ಯಮಗಳ ಬಂದು ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಎಪಿಪಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಅದರ …

Read More »

ಯೋಧನಿಂದ ಹಾಡಹಗಲೇ ಗುಂಡು ಹಾರಿಸಿ ಮಹಿಳೆ ಬರ್ಬರ ಕೊಲೆ

ಬಾಗಲಕೋಟೆ: ಹಾಡಹಗಲೇ ಗುಂಡು ಹಾರಿಸಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ. ದ್ಯಾಮವ್ವ ಪೂಜಾರಿ (45) ಹತ್ಯೆಯಾದ ಮಹಿಳೆ. ಕಾರಿನಲ್ಲಿ ಬಂದು ಗುಂಡು ಹಾರಿಸಿ ಪರಾರಿ ಆಗಿದ್ದ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದ್ಯಾಮವ್ವನನ್ನು ಆಯಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಕೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಎಸ್‌ಪಿ ಲೋಕೇಶ್ ಜಗಲಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೂಟೌಟ್ ಮಾಡಿದವನು ಯೋಧನೆಂದು …

Read More »

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More »

ಪಿಎಸ್‌ಐ ಅಕ್ರಮ : ಕಿಂಗ್‌ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ

ಹಾಸನ: ಪಿಎಸ್‌ಐ ನೇಮಕಾತಿಯ ಅಕ್ರಮದ ಕಿಂಗ್‌ಪಿನ್ ಹೆಸರು ಹೇಳಲು ಸಾಧ್ಯನಾ..? ಕಿಂಗ್‌ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿದ ಅವರು. ಪಿಎಸ್ ಐ ಹಗರಣದ ಬಗ್ಗೆ ಯಾರೂ ಬಿಜೆಪಿಯಲ್ಲಿ ಮಾತನಾಡುತ್ತಿಲ್ಲ. ಅಲ್ಲಿನ ಭವಿಷ್ಯತ್ ನಾಯಕನ ಬಗ್ಗೆ ಮಾತನಾಡುವ ಧೈರ್ಯ ಯಾರಿಗೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

Read More »

ರಸ್ತೆ ಅಪಘಾತದಲ್ಲಿ ಯೋಧ ಸಾವು

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಸರಕೊಪ್ಪಲು ಗ್ರಾಮದ ಯೋಧ ಸಂಜಯ್ (22) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜಯ್, ರಜೆಯ ಮೇಲೆ ತವರಿಗೆ ಬಂದಿದ್ದರು.ಮೂರು ದಿನಗಳ ಹಿಂದೆ ಹಾಸನದ ಎಂ.ಜಿ ರಸ್ತೆಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಶ ಸೇವೆ ಮಾಡಬೇಕು ಎಂಬ ಮಹದಾಸೆಯಿಂದ ಭಾರತೀಯ ಸೇನೆ ಸೇರಿದ್ದ ಸಂಜಯ್, …

Read More »

ಹೊಸ ಸವಾಲು ಎಸೆದ ಪ್ರಮೋದ್ ಮುತಾಲಿಕ್.. ಅದೇನು ಅಂತೀರಾ ಈ ಸುದ್ದಿ ನೋಡಿ?

ಮೈಸೂರು: ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಇಂಥದ್ದೊಂದು ಸವಾಲೆಸೆದಿದ್ದಾರೆ. ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಮೂಲಕ ಆಜಾನ್​ ಕೂಗುವ ವಿಚಾರವಾಗಿ ಮಾತನಾಡಿರುವ ಮುತಾಲಿಕ್, ಆಜಾನ್ ಮೈಕ್ ತೆಗೆಸಲು ಗಡುವು ನೀಡಿದ್ದರೂ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ನಾವು ರಾಜ್ಯದ 1 ಸಾವಿರ ದೇವಸ್ಥಾನ-ಮಠಗಳಲ್ಲಿ ಮೇ 9ರಂದು ಮೈಕ್ ಮೂಲಕ ಓಂಕಾರ-ಸುಪ್ರಭಾತ ಹಾಕಲಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.

Read More »