Breaking News

ಜಿಲ್ಲೆ

ಭಾರತೀಯ ವಾಯುಪಡೆಯ ಏರ್ ಮ್ಯಾನ್ ಆಯ್ಕೆಗೆ ನೇಮಕಾತಿ ರ‍್ಯಾಲಿ

ಶಿವಮೊಗ್ಗ: ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ'(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 ರವರೆಗೆ ನೇಮಕ ರ‍್ಯಾಲಿ ಏರ್ಪಡಿಸಿದೆ. ನೇಮಕಾತಿ ರ‍್ಯಾಲಿಯನ್ನು ಮಹಾರಾಜ ಕಾಲೇಜು ಮೈದಾನ, ಪಿ ಟಿ ಉಷಾ ರಸ್ತೆ, ಶೆಣೈಸ್ ಎರ್ನಾಕುಲಂ, ಕೊಚ್ಚಿ, ಕೇರಳ 682011 ಇಲ್ಲಿ ಏರ್ಪಡಿಸಲಾಗಿದೆ. ಜ.29 ರಿಂದ 30 ರವರೆಗೆ ಗುಂಪು ವೈ/ ವೈದ್ಯಕೀಯ ಸಹಾಯಕರ ಹುದ್ದೆಗೆ, ವಿದ್ಯಾರ್ಹತೆ 10+2 …

Read More »

ಶಿವಮೊಗ್ಗ: ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿ

ಬೆಂಗಳೂರು: ಶಿವಮೊಗ್ಗದ ಗೋವಿಂದಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಾಣ ಮಾಡಿರುವ 652 ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲಾಗಿದೆ. ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೇಶ್ ನೇತೃತ್ವದ ನಿಯೋಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮೆಸ್ಕಾಂಗೆ ಪಾವತಿ ಮಾಡಬೇಕಿರುವ 13 ಕೋಟಿ ರೂಪಾಯಿ ಪಾವತಿಸಲು ಒಪ್ಪಿಗೆ ಪಡೆದುಕೊಳ್ಳಲಾಗಿದ್ದು, ಬಳಿಕ ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಿ ಸಚಿವರ …

Read More »

ಪ್ರಥಮ ದರ್ಜೆ ಕಾಲೇಜು ಹೊರಗುತ್ತಿಗೆ ಸಿಬ್ಬಂದಿ ಸೊಸೈಟಿ ಸ್ಥಾಪಿಸಲು ಆಗ್ರಹ

ಕಾರವಾರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್, ಡಿ ದರ್ಜೆಯ ಸಿಬ್ಬಂದಿ ಸೊಸೈಟಿ ರಚಿಸಬೇಕು ಮತ್ತು ಹೊರಗುತ್ತಿಗೆ ಏಜೆನ್ಸಿಗಳ ಶೋಷಣೆ ತಪ್ಪಿಸಬೇಕು ಎಂದು ಆಗ್ರಹಿಸಿ ಉನ್ನತ ಶಿಕ್ಷಣ ಇಲಾಖೆ ಹೊರಗುತ್ತಿಗೆ ಡೇಟಾ ಎಂಟ್ರಿ ಆಪರೇಟರ್ ಮತ್ತು ಗ್ರುಪ್-ಡಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಹೊರಗುತ್ತಿಗೆ ಸಿಬ್ಬಂದಿ ನೇಮಿಸಿಕೊಂಡಿರುವ ಏಜೆನ್ಸಿ ಕಳೆದ ಕೆಲವು ವರ್ಷಗಳಿಂದ ಕನಿಷ್ಠ …

Read More »

ಇಂದು ಮಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಮಂಗಳೂರು : ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಉಪ ರಾಷ್ಟ್ರ ಪತಿ ಧನಕರ್ ಅವರು ತನ್ನ ಪತ್ನಿಯನ್ನು ಹತ್ತಿರಕ್ಕೆ ಕರೆದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಪರಿಚಯಿಸಿ ಮುಂದಕ್ಕೆ ಧರ್ಮಸ್ಥಳಕ್ಕೆ ಹೋಗುವಾಗಲೂ ಚೌಟ ಅವರನ್ನು ತಮ್ಮ ಹೆಲಿಕಾಪ್ಟರ್ ನಲ್ಲಿ ಬರುವಂತೆ ಕೈ ಹಿಡಿದು …

Read More »

ಮೈಸೂರಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂಗೆ ಸಂಸದ ಒಡೆಯರ್ ಮನವಿ

ಮೈಸೂರು: ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ …

Read More »

ಮಂಗಳೂರು: ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ನಡೆದ ಸಂವಿಧಾನ ಸಂರಕ್ಷಣಾ ಜಾಥಾ

ಮಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಇಂದು ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ ನಡೆಯಿತು. ವೇಳೆ ಅಮಿತ್ ಶಾ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ರಾಜೀನಾಮೆಗೆ ಒತ್ತಾಯಿಸಿದರು. ಬೆಳಗ್ಗೆ ನಗರದ ಅಂಬೇಡ್ಕರ್ ವೃತ್ತದಿಂದ (ಹಳೆ ಜ್ಯೋತಿ ಸರ್ಕಲ್) ಮಿನಿ ವಿಧಾನಸೌಧದ ವರೆಗೆ ‘ಸಂವಿಧಾನ ಸಂರಕ್ಷಣಾ …

Read More »

ಫಲಾನುಭವಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಲಾಭವನ್ನು ತಲುಪಿಸಿ: ಕೇಂದ್ರ ಸಚಿವ ಎಚ್ ಡಿ ಕೆ ಸೂಚನೆ

ಮೈಸೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಮೊದಲಿಗೆ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ’ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರದಿಂದ ದೇಶದ ಪ್ರಗತಿಗೆ ಪೂರಕವಾದ ಹಲವು …

Read More »

ಶಿವಮೊಗ್ಗ: ಜ.2 ರಿಂದ 30 ರವರಿಗೆ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್‌ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ ಆಧಾರ್ ತಿದ್ದುಪಡಿ ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜನವರಿ 02 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಾಚಿನಕಟ್ಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ …

Read More »

ರಾಜ್ಯ ರೈತ ಸಂಘಟನೆಯಿಂದ ಇಂದು ಪಂಜಿನ ಪ್ರತಿಭಟನಾ ಮೆರವಣಿಗೆ: ಕುರುಬೂರು ಶಾಂತಕುಮಾರ್

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೆವಾಲ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು. ಮೈಸೂರು ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಕೇಂದ್ರ ಸರ್ಕಾರದ ಭಿಕ್ಷೆ ಕೇಳುತ್ತಿಲ್ಲ. ನಮ್ಮ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ಧಿ: ಬೆಂಗಳೂರಲ್ಲಿ ವಾಸ್ತವ್ಯಕ್ಕೆ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣ

ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಇನ್ನೆರಡು ತಿಂಗಳಲ್ಲಿ ಕಟ್ಟಡ ನಿರ್ಮಿಸಲಾಗುವುದು. ಸರ್ಕಾರಿ ನೌಕರರಿಗೆ ದಿನವೊಂದಕ್ಕೆ 100ರೂ. ಬಾಡಿಗೆ ದರದಲ್ಲಿ …

Read More »