admin
March 24, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸತತವಾಗಿ ಸುಮಾರು ಒಂದು ವರ್ಷ ಕಾಲ ಅತ್ಯಾಚಾರ ಎಸಗಿದವನ ಮೇಲಿನ ಆರೋಪ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್ (31) ಶಿಕ್ಷೆಗೊಳಗಾದ ಆರೋಪಿ.
Read More »
admin
March 23, 2022
Breaking News, ಜಿಲ್ಲೆ, ಬಾಗಲಕೋಟೆ
ಬಾಗಲಕೋಟೆ: ಉರುಸ್‌ನಲ್ಲಿ ಊಟ ಸೇವಿಸಿದ್ದ ಜನರ ಆರೋಗ್ಯ ಸ್ಥತಿಯು ಹದಗೇಟ್ಟು ಹೋಗಿದೆ. 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ನಡೆದಿದೆ. ಉರುಸ್‌ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Read More »
admin
March 23, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಈ ಬಾರಿಯ ರಂಗೋತ್ಸವದ ಎಲ್ಲ ಕಾರ್ಯಕ್ರಮಗಳು ‘ತಾಯಿ’ ಪರಿಕಲ್ಪನೆಯಡಿ ನಡೆದಿತ್ತು. ‘ತಾಯಿ ವಿಷಯವನ್ನಾಧರಿಸಿ ರೂಪಿಸಲಾದ ರಂಗೋತ್ಸವದಲ್ಲಿ ಹೆಣ್ಣಿನ ಬಗ್ಗೆ ಈ ರೀತಿಯ ಮಾತುಗಳನ್ನಾಡಿದ್ದು ಹೇಗೆ’ ಎಂದು ಹಲವರು ಪ್ರಶ್ನಿಸಿದ್ದಾರೆ. ತುಚ್ಛವಾಗಿ ಮಾತನಾಡುವ ಈ ನೀಚ ತಾನು ಪೂಜೆ ಮಾಡುವ ಕೋದಂಡರಾಮ ದೇವಾಲಯದಲ್ಲಿ ರಾಮನ ಜೊತೆ ನಿಂತಿರುವ ಸೀತೆಯನ್ನು ಯಾವ ದೃಷ್ಟಿಯಿಂದ ನೋಡುತ್ತಿರಬಹುದು?’ ಎಂದು ಶಶಿಧರ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ‘ಕಣ್ಣನ್ ಅವರು, ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರುವ ಹೆಣ್ಣು ಮಕ್ಕಳ …
Read More »
admin
March 22, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದ್ದು, ಇಂದು ಇಲ್ಲಿನ ಮೈಸೂರು ವಿಶ್ವವಿದ್ಯಾಲಯದಲ್ಲಿ ಪುನೀತ್ ಪತ್ನಿ ಅಶ್ವಿನಿಯವರು ಸ್ವೀಕರಿಸಿದ ಅವರು ಭಾವುಕರಾಗಿ ಕಣ್ಣೀರಿಟ್ಟರು. ಇಂದು ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಂತ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪತ್ನಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ …
Read More »
admin
March 22, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಕೇಳಿಬಂದಿದೆ.ವಿಜಯನಗರ ನಿವಾಸಿ ಅಶ್ವಿನಿ (23) ಮೃತ ಗರ್ಭಿಣಿ. ತಾಲೂಕಿನ ಮೈದನಹಳ್ಳಿಯ ಪ್ರಮೋದ್ ಮತ್ತು ಅಶ್ವಿನಿ ಪರಸ್ಪರ ಪ್ರೀತಿಸಿ 2021ರ ಜೂನ್ 13ರಂದು ಮದುವೆಯಾಗಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ ತಂದೆ ಮನೆಯಲ್ಲಿದ್ದಳು. ಮಾ.18ರ ರಾತ್ರಿ ಮಾವನ ಮನೆಯಿಂದ ತನ್ನ ಪತ್ನಿಯನ್ನ ಪ್ರಮೋದ್ ಕರೆದೊಯ್ದಿದ್ದ. ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಗಳನ್ನು …
Read More »
admin
March 20, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಪ್ರೀತಿಗೆ ಕಣ್ಣು ಇಲ್ಲಾ ಎಅಮಬುವುದಕ್ಕೆ ಈ ರೂಪಾನೇ ಸಾಕ್ಷಿ. ಹಲವು ವರ್ಷಗಳಿಂದ ಪ್ರೀತಿ ಪಯಣ ಎಂದು ಸುತ್ತಾಡುತ್ತೀದ್ದು ಯುವಗ ಇದೀಗ ಬೇರೆ ಹುಡುಗಿಯನ್ನು ಮದುವೆಯಾಗುತ್ತೀದ್ದಾನೆ ಗೊತ್ತಾಗುತ್ತಿದ್ದಂತೆ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ . ವೃತ್ತಿಯಲ್ಲಿ ಇಬ್ಬರೂ ಉಪನ್ಯಾಸಕರಾಗಿದ್ದು , ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದರೆ ಇತ್ತ ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು . ಇದರೊಂದಿಗೆ ಪಿಎಚ್.ಡಿ ಯನ್ನು …
Read More »
admin
March 20, 2022
Breaking News, ಜಿಲ್ಲೆ, ಹಾಸನ
ಹಾಸನ: ಅರಸೀಕೆರೆ ರಸ್ತೆಯ ದೊಡ್ಡಪುರದ ರೇವತಿ ಕೊಲೆ ಪ್ರಕರಣದಲ್ಲಿ ಆರೋಪಿ ಲತೇಶ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾರ್ಚ್ 16ರಂದು ಸಂಜೆ ಮನೆ ಬಳಿ ಒಬ್ಬರೇ ಇದ್ದ ರೇವತಿಯನ್ನು ಲತೇಶ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ.ಅದಾದ ಬಳಿಕ ಸ್ಥಳಕ್ಕಾಗಮಿಸಿದ ಶ್ವಾನದಳ ನೇರವಾಗಿ ಲತೇಶನ ಮನೆ ಬಳಿಗೆ ಹೋಗಿ ನಿಂತಿತ್ತು.ಇದರ ಆಧಾರದ ಮೇಲೆ ಆತನನ್ನು ವಶಕ್ಕೆ ಪಡೆದಿದ್ದ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆರೋಕಿಯಪ್ಪ ಹಾಗೂ ತಂಡ, ತೀವ್ರ ವಿಚಾರಣೆಗೆ …
Read More »
admin
March 19, 2022
Breaking News, ಜಿಲ್ಲೆ, ಹಾಸನ
ಹಾಸನ: ಡಿಸೆಂಬರ್‌ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಇದೆ. ಅದರ ಜೊತೆಗೆ ಕರ್ನಾಟಕದ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಚುನಾವಣೆ ನಡೆದರೆ ಮನೆಯಲ್ಲಿ ಮಲಗಿಕೊಳ್ಳೋದಕ್ಕೆ ಆಗಲ್ಲ. ಸೋಲೋ, ಗೆಲುವೋ ನಾವೂ ಕೂಡ ಹೋರಾಟ ಮಾಡುತ್ತೇವೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಲೋಕಸಭೆ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಬಿಜೆಪಿ ಬಲ ಹೆಚ್ಚಬಹುದು ಅಥವಾ ಕುಗ್ಗಬಹುದು. ರಾಜ್ಯಗಳ ಚುನಾವಣೆಗೂ, …
Read More »
admin
March 18, 2022
Breaking News, ಗದಗ, ಜಿಲ್ಲೆ
ಗದಗ: ಕಿರುಕುಳಕ್ಕೆ ಬೇಸತ್ತು, ಡೇತ್ ನೋಟ್ ಬರೆದಿಟ್ಟುಆತ್ಮಹತ್ಯೆ ಪೊಲೀಸ್ ಕಾನ್ಸ್ಟೇಬಲ್ ನೇಣು ಹಾಕಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ …
Read More »
admin
March 18, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಚೇಮ್ಸ್ ಚಿತ್ರ ದೇಶ ವಿದೇಶದಲ್ಲಿ ಬಿಡುಗಡೆಯಾಗಿದೆ. ಅಪ್ಪು ನಟನೆಯ ಕೊನೇ ಚಿತ್ರವಾಗಿರೋ ಜೇಮ್ಸ್ ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಬಹಳಷ್ಟು ಅಭಿಮಾನಿಗಳು ಚಿತ್ರ ನೋಡ್ತಿದ್ದಂತೆ ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು 2 ದಿನಗಳಿಂದ ಮೈಸೂರಿನ ಶಕ್ತಿಧಾಮದಲ್ಲಿ ಕಾಲಕಳೆಯುತ್ತಿರೋ ಶಿವರಾಜ್ ಕುಮಾರ್ , ಇವತ್ತು ಮೈಸೂರು ಚಿತ್ರಮಂದಿರದಲ್ಲೇ ಜೇಮ್ಸ್ ಚಿತ್ರ ನೋಡಿ ಕಣ್ಣೀರಿಟ್ಟಿದ್ದಾರೆ.
Read More »