Breaking News

ಜಿಲ್ಲೆ

ಹೊಸ ಪರಿಕಲ್ಪನೆಯಡಿ ಡಿಸಿ ಗ್ರಾಮಗಳಿಗೆ ಭೇಟಿ

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ. ಈ ಪರಿಕಲ್ಪನೆಯ ಅಂಗವಾಗಿ ದಿ:19/03/2022ರ ಶನಿವಾರ ಬೆಳಗ್ಗೆ 11.00ಕ್ಕೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ …

Read More »

ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪು ಅತ್ಯಂತ ದುರದೃಷ್ಟಕರ : ಫರ್ಝಾನಾ ಮುಹಮ್ಮದ್

ಮಂಗಳೂರು : ಹಿಜಾಬ್ ಕುರಿತಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪು ಅತ್ಯಂತ ದುರದೃಷ್ಟಕರ ಮತ್ತು ಮಹಿಳೆಯರ ಶಿಕ್ಷಣದ ಮೇಲೆ ದೂರಗಾಮಿ ಪರಿಣಾಮ ಬೀರಲಿದೆ ಎಂದು ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ಇದರ ರಾಜ್ಯಾಧ್ಯಕ್ಷೆ ಫರ್ಝಾನಾ ಮುಹಮ್ಮದ್ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಪರಿವಾರ ಪ್ರೇರಿತ ಸಮಸ್ಯೆಯನ್ನು ಸಾಂವಿಧಾನಿಕ ನೆಲೆಗಟ್ಟಿನಲ್ಲಿ ಬಗೆಹರಿಸಬೇಕಿದ್ದ ಸರಕಾರವು ದ್ವೇಷ ಭಾವನೆಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವೆಂದು ಆದೇಶ ಹೊರಡಿಸಿತ್ತು. ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತವನ್ನು ಕಡೆಗಣಿಸಿ …

Read More »

ಬಸ್ ಪಲ್ಟಿ : 20ಕ್ಕೂ ಅಧಿಕ ಜನರಿಗೆ ಗಾಯ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್​​ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ …

Read More »

ಮಾಜಿ‌‌‌ ಸಿಎಂಗೆ ವ್ಯಂಗ್ಯಮಾಡಿದ ಸಾ.ರಾ.ಮಹೇಶ್

ಮೈಸೂರು: ಕೆಆರ್ ನಗರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ಸಾ.ರಾ.ಮಹೇಶ್ ವ್ಯಂಗ್ಯಮಾಡಿದರು. ಮಾತನಾಡಿದ ಅವರು, ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತ ರತ್ನ ನೀಡಬೇಕು ಎಂದರು. ಹಲವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಯಾರು ಮಾಡದಷ್ಟು ಸಾಲವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಆದರೂ ಜೆಡಿಎಸ್ ಬಗ್ಗೆ ಅವರು ಮಾತನಾಡುತ್ತಾರೆಂದರು. ಇನ್ನು ಮುಂದೆಯಾದರೂ ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

Read More »

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಡಾಕ್ಟರೇಟ್ ಪದವಿ

ಮೈಸೂರು: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಸ್ವತಹ ಮೈಸೂರು ವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ನಿವಾಸಕ್ಕೆ ತೆರಳಿ, ಪತ್ನಿ ಅಶ್ವಿನಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ಈ ವೇಳೆ ಅಂದು ಪುನೀತ್ ರಾಜ್ ಕುಮಾರ್ ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡ ಅವರು, ಈ ಹಿಂದೆ ಹಲವು ಬಾರಿ ಅಪ್ಪುಗೆ ಗೌರವ ಡಾಕ್ಟರೇಟ್ ನೀಡುವ …

Read More »

ಕಾಂಗ್ರೆಸ್ ಪಾರ್ಟ್ ಟೈಮ್ ಪಕ್ಷ, ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ : ಶ್ರೀ ರಾಮುಲು ಟೀಕೆ

ಮೈಸೂರು:ಐದು ರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ.ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿಗೆ ಬರಲು ಸಿದ್ದರಾಗಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಧೂಳೀಪಟವಾಗಿದೆ. ಈ ಅದೊಂದು ಪಾರ್ಟ್ ಟೈಮ್ ಪಕ್ಷವಾಗಿದೆ ಎಂದರು. ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕರಾಗಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿ ಅವರ ಹೆಸರು ಇಟ್ಟುಕೊಂಡು ಕಾಂಗ್ರೆಸ್ ನಲ್ಲಿ ಹಲವು ನಕಲಿ ಗಾಂಧಿಗಳು ರಾಜಕಾರಣ ಮಾಡಿದರು …

Read More »

ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರುವಿಡುವಂತೆ ಒತ್ತಾಯ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಹೆಸರನ್ನು ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ನೂತನ  ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ಎಂದು ಒತ್ತಾಯ ಮಾಡಿದರು. ಕೇಂದ್ರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು  ಭರವಸೆ ನೀಡಿದರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ …

Read More »

ಸಿದ್ದರಾಮಯ್ಯ ಯನ್ನು ಹುಣಸೂರಿನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು : ಜಿಟಿ ದೇವೇಗೌಡ

ಮೈಸೂರು: ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಹುಣಸೂರಿನಲ್ಲಿ ಸ್ಪರ್ಧಿಸಬೇಕು. ಅವರನ್ನು ಹುಣಸೂರಿನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದರು. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ,ಸಿದ್ದರಾಮಯ್ಯ ಎಲ್ಲಿ ಸ್ಪರ್ದಿಸಬೇಕು ಅನ್ನೋ ವಿಚಾರ ಚರ್ಚೆ ಆಗಿಲ್ಲ. ಹುಣಸೂರಿನಲ್ಲಿ ನಿಲ್ಲಿ ಎಂದು ಅವರಿಗೆ ಆಫರ್ ಇದೆ. ಮಂಜುನಾಥ್ ಗೆ MLC ಮಾಡಿ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲಲಿ. ಅವರನ್ನು ಹುಣಸೂರಿನಿಂದ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು. ನಾನು ಮಾತ್ರ …

Read More »

ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ಬಂಧನ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದ 10 ಆರೋಪಿಗಳನ್ನು  ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು …

Read More »

ಪ್ರತಿಭಟನೆ ವೇಳೆ ವಿಷ ಸೇವಿಸಿ ಮಹಿಳೆ ಸಾವು

ಗದಗ : ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸಲು ಮುಂದಾಗಿದ್ದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಈ ವೇಳೆ ಮಹಿಳೆಯರಿಬ್ಬರು ಕ್ರಿಮಿನಾಶಕ ಸೇವಿಸಿದ್ದಾರೆ. ನಿರ್ಮಲಾ ಪಾಟೀಲ(32) ಅವರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಸರೋಜಮ್ಮ ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಪ್ಪತಗುಡ್ಡ ವನ್ಯಜೀವಿ ಅರಣ್ಯ ಪ್ರದೇಶ ವ್ಯಾಪ್ತಿಯ ಜಮೀನಿನಲ್ಲಿ …

Read More »