Breaking News

ಜಿಲ್ಲೆ

ಹಿಜಾಬ್ ಸಂಘರ್ಷ : 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲು

ಮಂಗಳೂರು: ನಗರದ ಕಾರ್ ಸ್ಟ್ರೀಟ್​ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ ಅನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ ಸೇರಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

Read More »

ಶಿವಮೊಗ್ಗದಲ್ಲಿ ಹರಡಿದ ಸುಳ್ಳ ಸುದ್ದಿಗೆ ಬ್ರೇಕ್ ಹಾಕಿದ ಡಿಡಿಪಿಯು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾ. 7 ರ ಸೋಮವಾರದಂದು ಕಾಲೇಜ್ ಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಕೆಲವು ಗುಂಪುಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವುದರಿಂದ ಡಿಡಿಪಿಯು ಅವರು ಸ್ಪಷ್ಟನೆ ನೀಡಿದ್ದಾರೆ. ದಿನಾಂಕ 07/03/2022ರಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ.ಪರೀಕ್ಷೆಗಳು ಯಥಾಸ್ಥಿತಿಯಲ್ಲಿ ನಡೆಯುತ್ತವೆ, ಯಾರೋ ಅನಾಮಿಕರು ಉಪನಿರ್ದೇಶಕರ ಹೆಸರಿನಲ್ಲಿ ಜಿಲ್ಲಾಧಿಕಾರಿಯವರ ಆದೇಶದಂತೆ ಇಂದು ರಜೆ ಎಂದು what’s app ನಲ್ಲಿ ಹಾಕಿದ್ದಾರೆ, ಇದು ಸುಳ್ಳು ಸುದ್ದಿಯಾಗಿದ್ದು, ಯಾವುದೇ ಕಾಲೇಜಿಗೆ ರಜೆ ಇರುವುದಿಲ್ಲ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.

Read More »

ಹರ್ಷ ಮನೆಗೆ ಮಾಜಿ ಸಿಎಂ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ಶಿವಮೊಗ್ಗ: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು. ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ …

Read More »

ಶಿವಮೊಗ್ಗದಲ್ಲಿ ಹಲ್ಲೆ ಪ್ರಕರಣ : ಇಬ್ಬರು ಬಂಧನ

ಶಿವಮೊಗ್ಗ: ನಗರದಲ್ಲಿ ನಡೆದಂತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ ವರದಿಯಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕಃ-3-3-2022 ರಂದು ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿಯೊಬ್ಬರು ತಮ್ಮ ನಾಯಿಯನ್ನು …

Read More »

ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮನೆಗೆ ಇಂದು ಸಿಎಂ ಭೇಟಿ

ಹಾವೇರಿ : ಉಕ್ರೇನ್ ನಲ್ಲಿ ಸಾವನ್ನಪ್ಪಿದ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ನವೀನ್ ಮನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Read More »

ಹರ್ಷನ ಕುಟುಂಬಕ್ಕೆ ಪರಿಹಾರ ಧನ ಘೋಷಿಸಿದ ಸರ್ಕಾರ

ಶಿವಮೊಗ್ಗ: ಫೆ.20ರಂದು ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರು. ಪರಿಹಾರ ಘೋಷಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ತಾವು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈ ಚೆಕ್‌ ಅನ್ನು ಹರ್ಷ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಆಸ್ತಿಗಳಿಗೆ ಹಾನಿಯಿಂದ ನಷ್ಟಕ್ಕೆ ಒಳಗಾದವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

Read More »

35ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಗಳ ದಾಳಿ

ಮೈಸೂರು: ಹುಚ್ಚು ನಾಯಿಗಳ ದಾಳಿಗೆ 35ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಜಿಲ್ಲೆಯ ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ನಡೆದಿದೆ. ಗಾಯಗೊಂಡವರಿಗೆ ಸದ್ಯ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲಾ ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಪಾದಾಚಾರಿಗಳನ್ನು ಕಚ್ಚಿದ ಹುಚ್ಚು ನಾಯಿಗಳ ಗುಂಪು, 35ಕ್ಕೂ ಅಧಿಕ ಜನರನ್ನು ಕಚ್ಚಿ ಪರಾರಿಯಾಗಿವೆ. ನಾಯಿಗಳ ಉಪಟಳದಿಂದ ಸಾರ್ವಜನಿಕರು ಬಹಳ …

Read More »

ಹರ್ಷ ಕುಟುಂಬಕ್ಕೆ ನೆರವಿನ ಮಹಾಪೂರ

ಶಿವಮೊಗ್ಗ : ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 10 ಲಕ್ಷ ರೂಪಾಯಿ ನೀಡಿರುವುದು ಸೇರಿದಂತೆ ಹರ್ಷ ಅವರ ಮನೆಗೆ ಭೇಟಿ ನೀಡಿದ್ದ ರಾಜಕಾರಣಿಗಳು, ಮಠಾಧೀಶರು ಹಣದ ನೆರವು ನೀಡಿದ್ದಾರೆ. ಅಲ್ಲದೆ ಹರ್ಷ ತಾಯಿ ಪದ್ಮಾ ಅವರ ಖಾತೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ …

Read More »

ಪ್ರಸಿದ್ಧ ಸಾಹಿತಿ ಭೈರವಮೂರ್ತಿ ನಿಧನ

ಮೈಸೂರು : ಸಾಹಿತಿ ಪ್ರೊ.ಕೆ. ಭೈರವಮೂರ್ತಿ(77) ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದರು. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಿತು. ಸಾಹಿತಿ ಪ್ರೊ.ಕೆ. ಭೈರವಮೂರ್ತಿ ಅವರಿಗೆ ಒಬ್ಬ ಪುತ್ರ ಇದ್ದಾರೆ. ಪ್ರೊ.ಭೈರವಮೂರ್ತಿಯವರು ಮೇ,30,1945ರಂದು ಮಂಡ್ಯ ಜಿಲ್ಲೆಯ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದಲ್ಲಿ ಜನಿಸಿದರು. ತಂದೆ ಕೆ.ಎನ್, ಕೃಷ್ಣ ಮೂರ್ತಿ, ತಾಯಿ ಗೌರಮ್ಮ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ವ್ಯಾಸಂಗ. ಮತ್ತು ಮಾನಸಗಂಗೋತ್ರಿಯ ಕನ್ನಡ ಅಧ್ಯಯನ …

Read More »