BigTv News
December 4, 2022
Breaking News, ಬೆಂಗಳೂರು
ಬೆಂಗಳೂರು: ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಶನಿ ವಾರ ಕಂಠೀರವ ಒಳಾಂಗಣ ಕ್ರೀಡಾಂಗಣ ದಲ್ಲಿ ಆಯೋಜಿಸಿದ್ದ ವಿಶ್ವ ಅಂಗವಿಕಲ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ದರು. ಈಗಾಗಲೇ ಅಂಗವಿಕಲ ಮಕ್ಕಳಿಗಾಗಿ ಸರಕಾರದಿಂದ ಕೆಲವು ಯೋಜನೆ ರೂಪಿಸ ಲಾಗಿದೆ. ಅದರ ಜತೆಗೆ …
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು: ಜನತಾ ಪರಿವಾರದ ಹಿರಿಯ ನಾಯಕ, ಕನ್ನಡಪರ ಹಾಗೂ ರೈತಪರ ಹೋರಾಟಗಾರರಾದ ಸಿಂ.ಲಿಂ.ನಾಗರಾಜು ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷವಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಹೃದಯಾಘಾ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಚನ್ನಪಟ್ಟಣದ ಗಾಂಧಿ ಭವನದಲ್ಲಿ ಮಧ್ಯಾಹ್ನದವರೆಗೂ ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು : ನಗರದ ರೌಡಿಶೀಟರ್ ಗಳಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ರೌಡಿಶೀಟರ್ ಗಳು ಊರು ಬಿಡುವಂತೆ ಸಿಸಿಬಿ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕೆಲ ರೌಡಿ ಶೀಟರ್ ಗಳು ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ, ರಾಜಕೀಯ ಪಕ್ಷಕ್ಕೆ ಸೇರ್ಪಡೆಗೆ ಸಿದ್ದತೆ ನಡೆಸಿದ್ದರು. ಈ ಪೈಕಿಸೈಲೆಂಟ್ ಸುನೀಲ ರಾಜಕೀಯ ಕಾರ್ಯಕ್ರಮದಲ್ಲಿ ಕಂಡಿದ್ದು ಸಿಸಿಬಿಗೆ ದೊಡ್ಡ ಮುಜುಗರ ಊಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ರೌಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಸಿಬಿ ಮುಂದಾಗಿದೆ …
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ.ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ …
Read More »
BigTv News
December 3, 2022
Breaking News, ಬೆಂಗಳೂರು
ಬೆಂಗಳೂರು: ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತರು, ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಏಕಕಾಲಕ್ಕೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಅತಿಹೆಚ್ಚು ವರಮಾನ ತರುವ ವಾಣಿಜ್ಯ ಇಲಾಖೆಯ ಅಧಿಕಾರಿಗಳನ್ನು ಏಕಕಾಲಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಮಾನತು ಮಾಡಿರುವುದು ಇದೇ ಮೊದಲು ಎನ್ನಲಾಗುತ್ತಿದೆ. ಸವಿತಾ-ಜಂಟಿ ಆಯುಕ್ತರು, ಮೈಸೂರು, ಶ್ರೀರಂಗಪ್ಪ, ಸಹಾಯಕ ಆಯುಕ್ತ (ಎಸಿ), …
Read More »
BigTv News
December 3, 2022
Breaking News, ಬೆಂಗಳೂರು
ಬೆಂಗಳೂರು: ಹೊಸ ವರ್ಷಕ್ಕೆ ಮೊದಲೇ ರಾಜ್ಯದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ವಿದ್ಯುತ್ ದರ ಇಳಿಕೆಗೆ ಚಿಂತನೆ ನಡೆದಿದೆ.ಗೃಹ ಬಳಕೆ ಸೇರಿದಂತೆ ಎಲ್ಲಾ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವಿದ್ಯುತ್ ದರ ಕಡಿತ ಮಾಡಲು ಚಿಂತನೆ ನಡೆದಿದೆ. ಬಳಕೆದಾರರ ಶುಲ್ಕವನ್ನು ಕಡಿತಗೊಳಿಸಲು ನಿರ್ಧರಿಸಲಾಗಿದ್ದು, ಪ್ರತಿ ಯೂನಿಟ್ ಗೆ 70 ಪೈಸೆಯಿಂದ ಎರಡು ರೂಪಾಯಿವರೆಗೆ ಇಳಿಕೆಯಾಗಬಹುದು ಎಂದು ಹೇಳಲಾಗಿದೆ. ಗ್ರಾಮೀಣ ವಿದ್ಯುತ್ ಬಳಕೆದಾರರಿಗೆ ರಿಯಾಯಿತಿ ನೀಡಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
Read More »
BigTv News
December 2, 2022
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ 35 ಸಾವಿರ ರೂ. ಮೀರಿರಬಾರದು.(ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು). …
Read More »
BigTv News
December 2, 2022
Breaking News, ಬೆಂಗಳೂರು
ಬೆಂಗಳೂರು: ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಎಂದೇ ಫೇಮಸ್ ಆಗಿರುವ ಹಿರಿಯ ನಟ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಕೃಷ್ಣ ಜಿ ರಾವ್ ಅವರು ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನು …
Read More »
BigTv News
December 2, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಮುಸ್ಲೀಂ ಸಮುದಾಯದ ಮಹಿಳೆಯರಿಗೆ ಸರ್ಕಾರದಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಚರ್ಚೆಯಾಗಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ …
Read More »
BigTv News
December 1, 2022
Breaking News, ಬೆಂಗಳೂರು
ಬೆಂಗಳೂರು : ಕನ್ನಡದ ತಿಥಿ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ನಾಯಕಿ ಪೂಜಾ ಕೆಲವು ವರ್ಷಗಳಿಂದ ಸಿನಿಮಾ ರಂಗದಿಂದಲೇ ದೂರವಾಗಿದ್ದರು. ಓದಿನ ಕಡೆ ಗಮನ ಕೊಟ್ಟಿದ್ದ ಪೂಜಾ ಇದೀಗ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿರುವ ಪೂಜಾ ಡಿಸೆಂಬರ್ ನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಡಿಸೆಂಬರ್ 4ರಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಚೌಟ್ರಿಯಲ್ಲಿ ಪೂಜಾ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆಗಾಗಿಯೇ ವಿಶೇಷ ಪ್ರೊಮೋ ಒಂದನ್ನು ರೆಡಿ ಮಾಡಿದ್ದು, ಅದರಲ್ಲಿ …
Read More »