Breaking News

ಬೆಂಗಳೂರು

ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರಕಡಿಮೆಯಾಗಿದೆ. ಆದರೆ, ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಈ ವಾರದಲ್ಲಿ ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದಲೇ ಚಳಿಯ ವಾತಾವರಣವಿದ್ದು, ಇಂದು ಕೂಡ ಮಂಜು ಮುಸುಕಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರು ಹವಾಮಾನ ವರದಿ ಪ್ರಕಾರ, ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಹಾಗೂ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಇಂದು …

Read More »

ರಾಜ್ಯದಲ್ಲಿ 6 ಹೊಸ ‘ಟೆಕ್‌ ಸಿಟಿ’ಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗುವುದು : ಸಿಎಂ

ಬೆಂಗಳೂರು: ಜ್ಞಾನ ಮತ್ತು ಮಾಹಿತಿ-ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ ಉತ್ತೇಜಿಸಲು ರಾಜ್ಯದಲ್ಲಿ 6 ಹೊಸ ‘ಟೆಕ್‌ ಸಿಟಿ’ಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಂಗಳೂರಿನ ಅರಮನೆಯಲ್ಲಿ ಆಯೋಜಿಸಿರುವ ಮೂರು ದಿನಗಳ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತೋತ್ಸವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನವೀನ ತಂತ್ರಜ್ಞಾನ ಬಳಸಿಕೊಂಡು ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ಬೆಂಗಳೂರಿನ ಪಕ್ಕದಲ್ಲಿ ‘ತಂತ್ರಜ್ಞಾನ ನಗರ’ಗಳನ್ನು ನಿರ್ಮಿಸಲಾಗುವುದು’ ಎಂದರು. …

Read More »


15,000 ಶಿಕ್ಷಕರ ನೇಮಕ :  1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಅವರು, ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ …

Read More »

ಬೆಂಗಳೂರುನಲ್ಲಿ ಇನ್ನೂ 2 ದಿನ ಮಳೆ‌ ಸಾಧ್ಯತೆ

ಬೆಂಗಳೂರು: ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆ ಹಾಗೂ ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಗರದ ಎಲ್ಲ ರಸ್ತೆಗಳ ಗುಂಡಿಗಳನ್ನು ಸಂಪೂರ್ಣ ಭರ್ತಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ನಿಗದಿಪಡಿಸಿದ ಗಡುವನ್ನು ನ.19ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ನ.9ರವರೆಗೆ, ನಂತರ ಮಳೆಯ ಕಾರಣದಿಂದ ನ.14ರವರೆಗೆ ವಿಸ್ತರಣೆ ಮಾಡಿದ್ದ ಪಾಲಿಕೆ, ಇದೀಗ ಮತ್ತೆ ನ.19ರವರೆಗೆ ವಿಸ್ತರಣೆ ಮಾಡಿದೆ. ಈವರೆಗೆ ಬಿಬಿಎಂಪಿ ಗುರುತಿಸಿದ 33 ಸಾವಿರ ರಸ್ತೆ ಗುಂಡಿಗಳ ಪೈಕಿ 32 ಸಾವಿರಕ್ಕೂ …

Read More »

ಲಂಚ ಪ್ರಕರಣ : ಕೆಎಎಸ್‌ ಅಧಿಕಾರಿ ಬಂಧನ

ಬೆಂಗಳೂರು: ಜಮೀನಿನ ಖಾತೆ ಬದಲಾವಣೆಗೆ ₹ 5 ಲಕ್ಷ ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬುವ ವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್‌ ಕುಮಾರ್‌ ಎಂಬುವವರಿಂದ 2 ಎಕರೆ ಜಮೀನು ಖರೀದಿಸಿದ್ದರು. ಆದರೆ, ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ …

Read More »

11 ಮಂದಿ ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇದೀಗ ರಾಜ್ಯಸರ್ಕಾರ 11 ಮಂದಿ ಐಪಿಎಸ್​ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಾನಗಳಿಗೆ ವರ್ಗಾವಣೆ ಮಾಡಿದ್ದು ಅವರಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್​ ಕೂಡ ಇದ್ದಾರೆ. ರಾಜ್ಯ ಸರ್ಕಾರ ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಚೆನ್ನಣ್ಣನವರ್​ರನ್ನು ಕಿಯೋನಿಕ್ಸ್​ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್​ ಟ್ರಾಫಿಕ್​ ಕಮಿಷನರ್​ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್​ ಅಬ್ದುಲ್​ ಸಲೀಂಗೆ ಈ ಸ್ಥಾನವನ್ನು …

Read More »

ಸಿದ್ದರಾಮಯ್ಯ ಇಂದು ಕೋಲಾರಕ್ಕೆ ಭೇಟಿ

ಬೆಂಗಳೂರು:  ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ವಿಶೇಷವಾಗಿ ರೂಪಿಸಲಾಗಿರುವ ವಿಶೇಷ ಬಸ್‍ನಲ್ಲಿ ಇಂದು ಬೆಳಗ್ಗೆ ಕೋಲಾರಕ್ಕೆ ತೆರಳಿದರು. ಅಲ್ಲಿ ಸುಮಾರು 10ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳಿಗೆ ಭೇಟಿ ನೀಡಿದರು. ಕೋಲಾರ ನಗರದ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಮೆಥೋಡಿಸ್ಟ್ ಚರ್ಚ್‍ಗೆ ತೆರಳಿ ಪ್ರಾರ್ಥನೆ …

Read More »

ಮಾಜಿ ಸಿಎಂ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ‌: ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ …

Read More »


ನೂತನ ಮನೆಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು:  ಸೇರಿದಂತೆ ರಾಜ್ಯದಲ್ಲಿ 18 ಲಕ್ಷ ಮನೆ ನೊಂದಣಿಗಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ. ಬರುವ ವರ್ಷ ಎಲ್ಲಾ ಮನೆಗಳಿಗೆ ಹಣ ಬರಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.ಈ ಮೂಲಕ ನೂತನ ಮನೆಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಬಂದ ಮೇಲೆ 5 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನಲ್ಲಿ 1 ಲಕ್ಷ ಮನೆ ನಿರ್ಮಾಣ ಯೋಜನೆ ಇದೆ. ಈಗಾಗಲೇ 20 …

Read More »

ಸರ್ಕಾರಕ್ಕೆ ಪ್ರಶ್ನಿಸಿದ ಡಿಕೆಶಿ

ಬೆಂಗಳೂರು: “ಕಮೀಷನ್ ಪಡೆಯಲು ಕೆಂಪೇಗೌಡ ಪ್ರತಿಮೆಗೆ ಸರ್ಕಾರದ ಹಣ ಹಾಕಿದ್ದೀರಾ?” ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಕೋವಿಡ್ ಕಾಲದ ಪರಿಹಾರದಿಂದ ಹಿಡಿದು ಅವರು ನೀಡಿದ್ದ ಭರವಸೆಗಳವರೆಗೂ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ನಿರೀಕ್ಷಿಸಿದ್ದೆವು.ಆದರೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸದೇ ಕೇವಲ ಪ್ರಮುಖ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು. …

Read More »